ಒಡಿಶಾ: ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ಸಿಮಿಲಿಪಾಲ್ ರಾಷ್ಟ್ರೀಯ ಉದ್ಯಾನವನದಲ್ಲಿ ಅಪರೂಪಕ್ಕೆ ಕಾಣಸಿಗುತ್ತಿದ್ದ ಕಪ್ಪು ಹುಲಿಯು ಸಾವನ್ನಪಿರುವುದಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಸಿಮಿಲಿಪಾಲ್ ನ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಸುಶೀಲ್ ಕುಮಾರ್ ಪೊಪ್ಲಿ ಹುಲಿ ಸಾವಿನ ಸುದ್ದಿಯನ್ನು ಖಚಿತಪಡಿಸಿದ್ದು, ಸಿಮಿಲಿಪಾಲ್ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಏಪ್ರಿಲ್ 30ರ ಬೆಳಿಗ್ಗೆ ಸಿಮಿಲಿಪಾಲ್ ದಕ್ಷಿಣ ವಿಭಾಗದ ಸಿಬ್ಬಂದಿ ಬದಮಕ್ಕಬಾಡಿ ಬೀಟ್ ಪ್ರದೇಶದಲ್ಲಿ ಗಸ್ತು ತಿರುಗುವಾಗ ಹುಲಿಯ ಮೃತದೇಹವನ್ನು ಪತ್ತೆಯಾಗಿದ್ದು, ಕೂಡಲೇ ಮೇಲಾಧಿಕಾರಿಗಳಿಗೆ ತಿಳಿಸಿದ್ದಾರೆ.
ಟಿ-27 ಎಂದು ಗುರುತಿಸಲಾಗುತಿದ್ದ ಈ ಕಪ್ಪು ಹಲಿಯು ಸುಮಾರು 3.5-4 ವರ್ಷ ವಯಸ್ಸಿನದಾಗಿದ್ದು, ದೇಹದ ಮೇಲಿನ ಗಾಯಗಳ ಆಧಾರದ ಮೇಲೆ ಹುಲಿಯೂ ಮತ್ತೊಂದು ಹುಲಿಯೊಂದಿಗೆ ಕಾದಾಡಿ ಸಾವನ್ನಪಿರುವುದಾಗಿ ಶಂಕಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಹುಲಿಯ ಮೃತದೇಹವನ್ನು ಎನ್‌ಟಿಸಿಎ ಪ್ರತಿನಿಧಿ, ಜಂಟಿ ಕಾರ್ಯಪಡೆ (ಜೆಟಿಎಫ್) ಸದಸ್ಯರು, ಹುಲಿ ಸಂರ್ಕಷಿತ ಪ್ರದೇಶದ ನಿರ್ದೇಶಕರು, ಪಶುವೈದ್ಯರು ಮತ್ತು ಇತರ ಸಿಬ್ಬಂದಿ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ.
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…
ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…