BREAKING NEWS

ರಾಮನಗರದಲ್ಲಿ ಒಂಟಿ ಸಲಗ ಸೆರೆ : ಲಾರಿಗೆ ಹತ್ತಿಸುವ ವೇಳೆ ಮುರಿದ ದಂತ

ರಾಮನಗರ : ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ಅದರಲ್ಲೂ ಚನ್ನಪಟ್ಟಣ ತಾಲೂಕಿನ ಗ್ರಾಮೀಣ ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಇತ್ತೀಚಿಗೆ ಇಬ್ಬರು ಅಮಾಯಕರನ್ನ ಕಾಡಾನೆಯೊಂದು ಬಲಿ ಪಡೆದಿತ್ತು. ಹಾಗಾಗಿ ಈ ಕಾಡಾನೆಯನ್ನು ಹಿಡಿಯಲೇಬೇಕು ಎಂದು ನಿರ್ಧರಿಸಿ, ಸಾಕಾನೆಗಳ ನೆರವಿನಿಂದ ಕಳೆದ ಮೂರು ದಿನಗಳಿಂದ ಕಾರ್ಯಾಚರಣೆ ನಡೆಸಿ ಸೆರೆಹಿಡಿಯಲಾಗಿದೆ. ಸೆರೆ ಹಿಡಿದ 40 ವರ್ಷದ ಗಂಡಾನೆಯನ್ನ ಲಾರಿಗೆ ಹತ್ತಿಸುವ ವೇಳೆ ಕೋಪದಲ್ಲಿ ಕ್ರೇನ್​ಗೆ ಕಾಡಾನೆ ಗುದ್ದಿದ್ದು, ದಂತ ಮುರಿದಿದೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಅರಳಾಳುಸಂದ್ರ ಗ್ರಾಮದ ಬಳಿಯ ತೆಂಗಿನಕಲ್ಲು ಅರಣ್ಯ ‌ಪ್ರದೇಶದಲ್ಲಿ ಕಾಡಾನೆಯನ್ನು ಕೊನೆಗೂ ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿಯುವಲ್ಲಿ ಇಂದು ಯಶಸ್ವಿಯಾಗಿದ್ದಾರೆ. ಸಾಕಾನೆಗಳಾದ ಅಭಿಮನ್ಯು, ಅರ್ಜುನ, ಭೀಮ, ಶ್ರೀಕಂಠ, ಮಹೇಂದ್ರ ಸಹಾಯದಿಂದ ಕಾಡಾನೆ ಸೆರೆಗೆ ಕಾರ್ಯಾಚರಣೆ ನಡೆಸಲಾಯಿತು.

ಇಂದು ಬೆಳಗ್ಗೆ ತೆಂಗಿನಕಲ್ಲು ಅರಣ್ಯ ಪ್ರದೇಶದಲ್ಲಿ ಕಾಡಾನೆ ಪತ್ತೆಯಾಗಿತ್ತು. ಹೀಗಾಗಿ ಅರವಳಿಕೆ ಮದ್ದು ನೀಡಿ ಸೆರೆ ಹಿಡಿಯಲಾಯಿತು. ಆನಂತರ ಸಾಕಾನೆಗಳ ಸಹಾಯದಿಂದ ಕಾಡಾನೆಯನ್ನ ಕ್ರೇನ್ ಸಹಾಯದಿಂದ ಲಾರಿಗೆ ಹತ್ತಿಸಲು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮುಂದಾಗಿದ್ದರು. ಆದರೆ ಈ ವೇಳೆ ಸಾಕಷ್ಟು ವಿರೋಧ ವ್ಯಕ್ತಪಡಿಸಿತ್ತು.

ಅಲ್ಲದೆ ಇದರಿಂದ ಕೋಪಗೊಂಡ ಆನೆ ತಪ್ಪಿಸಿಕೊಳ್ಳಲು ಪ್ರಯತ್ನ ಪಟ್ಟಿತ್ತು. ಅಲ್ದದೆ ಸಿಟ್ಟಿನಲ್ಲಿ ಕ್ರೇನ್​ಗೆ ಗುದ್ದಿತ್ತು. ಇದರಿಂದ ಆನೆಯ ದಂತವೇ ಮುರಿದು ಬಿದ್ದಿತ್ತು. ಆದರೂ ಸಹ ಸಾಕಾನೆಗಳ ಸಹಾಯದಿಂದ ಕಾಡಾನೆಯನ್ನ ಲಾರಿಗೆ ಹತ್ತಿಸಲಾಯಿತು.

ಅಂದಹಾಗೆ ಕಾಡಾನೆ ದಾಳಿಗೆ ಐದು ದಿನಗಳ ಅಂತರದಲ್ಲಿ ಇಬ್ಬರು ಸಾವನ್ನಪ್ಪಿದರು. ಮೇ 30ರಂದು ಕನಕಪುರ ತಾಲೂಕಿನ ಹೊಸಕಬ್ಬಾಳು ಗ್ರಾಮದ ಬಳಿ ಜಮೀನಿಗೆ ತೆರಳುತ್ತಿದ್ದ ಕಬ್ಬಾಳು ಗ್ರಾಮದ ಕಾಳಯ್ಯ(60) ಎಂಬಾತ ಬಲಿಯಾಗಿದ್ರೆ, ಜೂನ್ 3ರಂದು ಚನ್ನಪಟ್ಟಣ ತಾಲೂಕಿನ ವಿರೂಪಸಂದ್ರ ಗ್ರಾಮದ ಬಳಿ ಮಾವಿನ ತೋಟ ಕಾವಲು ಕಾಯುತ್ತಿದ್ದ, ಕನಕಪುರ ಮೂಲದ ವೀರಭದ್ರಯ್ಯ(56) ಎಂಬಾತನನ್ನು ಕಾಡಾನೆ ಬಲಿ ಪಡೆದಿತ್ತು.

ಹೀಗಾಗಿ ಐದು ಆನೆಗಳನ್ನ ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದರು. ಒಂದು ಕಾಡಾನೆ ಸೆರೆಗೆ ಅನುಮತಿ ಸಿಕ್ಕಿತ್ತು. ಅದರಂತೆ ಇದೀಗ ಇಬ್ಬರನ್ನ ಬಲಿ ಪಡೆದ ಪುಂಡಾನೆ ಸೆರೆಯಾಗಿದ್ದು, ಉಳಿದ ನಾಲ್ಕು ಕಾಡಾನೆಗಳನ್ನ ಮತ್ತೆ ಎರಡು ದಿನಗಳ ನಂತರ ಕಾರ್ಯಾಚರಣೆ ನಡೆಸಿ ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಪ್ಲಾನ್ ಮಾಡಿಕೊಂಡಿದ್ದಾರೆ.

ಇದೀಗ ಸೆರೆ ಸಿಕ್ಕಿರುವ ಕಾಡಾನೆಗೆ ರೇಡಿಯೋ ಕಾಲರ್ ಕೂಡ ಅಳವಡಿಸಿದ್ದು, ಅದರ ಚಲನ-ವಲನದ ಬಗ್ಗೆಯೂ ಕೂಡ ನಿಗಾ ಹಿಡಲು ಪ್ಲಾನ್ ಮಾಡಲಾಗಿದೆ. ಸದ್ಯ ಎಲ್ಲರ ನಿದ್ದೆಗೆಡಿಸಿದ ಕಾಡಾನೆಯ ಸೆರೆಯಿಂದ ಹತ್ತಾರು ಹಳ್ಳಿಯ ರೈತರು ಸದ್ಯದ ಮಟ್ಟಿಗೆ ನಿಟ್ಟಿಸಿರು ಬಿಟ್ಟಿದ್ದಾರೆ. ಉಳಿದ ಆನೆಗಳನ್ನು ಕೂಡ ಸೆರೆ ಹಿಡಿಯುವಂತೆ ಒತ್ತಾಯ ಮಾಡಿದ್ದಾರೆ.

lokesh

Recent Posts

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಮಾಜಿ ಸಚಿವ ಸಾ.ರಾ.ಮಹೇಶ್‌ ಹೇಳಿದಿಷ್ಟು?

ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…

9 mins ago

ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಧೋನಿ ಲಭ್ಯ?

ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…

1 hour ago

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ : ಇರಾನ್

ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…

2 hours ago

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು : ಮುಖ್ಯಮಂತ್ರಿ ಟೀಕೆ

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…

2 hours ago

ಹೊಸ ಸುಂಕ ಸಾರಿದ ಅಮೆರಿಕ, ಈ ಬಾರಿ ಯಾವುದರ ಮೇಲೆ ಟ್ರಂಪ್‌ ಕಣ್ಣು?

ವಾಷಿಂಗ್ಟನ್ : ಇರಾನ್ ವಿರುದ್ಧದ ಯುದ್ಧದ ನಡುವೆಯೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೊಸದಾಗಿ ಸುಂಕ ಸಮರ ಆರಂಭಿಸಿದ್ದಾರೆ.…

2 hours ago

HSRP ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯವಲ್ಲ

ಬೆಂಗಳೂರು : ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರೆಜಿಸ್ಟ್ರೇಷನ್ ಪ್ಲೇಟ್ (HSRP) ಅಳವಡಿಸುವುದು ಇನ್ನು ಮುಂದೆ ಕಡ್ಡಾಯವಿರುವುದಿಲ್ಲ ಎಂದು ಕರ್ನಾಟಕ…

2 hours ago