ಬೆಂಗಳೂರು : ಬೆಂಗಳೂರು ಸಿಟಿ (ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ)ದ ಯಾರ್ಡ್‌ನ ಲೈನ್-2ರಲ್ಲಿ ಗರ್ಡರ್ ಅಳವಡಿಕೆಗೆ ಸಂಬಂಧಿಸಿದಂತೆ ಲೈನ್ ಬ್ಲಾಕ್ ಮತ್ತು ಪವರ್ ಬ್ಲಾಕ್ ಕಾಮಗಾರಿ ಆರಂಭವಾಗುವುದರಿಂದ ಏ. 10ರಿಂದ ಕೆಲ ರೈಲುಗಳ ಸಂಚಾರವು ಭಾಗಶಃ ರದ್ದಾಗಲಿದೆ. ಇನ್ನೂ ಕೆಲವು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗುತ್ತದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.
ಯಾವ ಯಾವ ರೈಲು ರದ್ದು? : ವೈಟ್‌ಫೀಲ್ಡ್ ಚಾಮರಾಜನಗರ ನಡುವೆ ಸಂಚರಿಸುತ್ತಿದ್ದ ಚಾಮರಾಜನಗರ ಡೈಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16220), ನಾಂದೇಡ್ – ಕೆಎಸ್‌ಆರ್‌ಬೆಂಗಳೂರು ಡೈಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ. 16594) ಯಲಹಂಕ-ಕೆಎಸ್‌ಆರ್ ಬೆಂಗಳೂರು ನಡುವೆ ಸಂಚರಿಸುವ ದೇವನಹಳ್ಳಿ – ಕೆಎಸ್‌ಆರ್ ಬೆಂಗಳೂರು ಮೆಮು ವಿಶೇಷ (ರೈಲು ಸಂಖ್ಯೆ. 06532) ರೈಲು ದೇವನಹಳ್ಳಿಯಿಂದ ಹೊರಡಲಿದ್ದು, ಬೆಂಗಳೂರು ಕಂಟೋನ್ಮೆಂಟ್-ಕೆಎಸ್‌ಆರ್ ಬೆಂಗಳೂರು ನಡುವೆ ಸಂಚಾರ ಸ್ಥಗಿತಗೊಳಿಸಲಾಗುತ್ತಿದೆ.
ಯಾವ ರೈಲು ಭಾಗಶಃ ರದ್ದು? : ಕೆಎಸ್‌ಆರ್ ಬೆಂಗಳೂರು-ದೇವನಹಳ್ಳಿ ಮೆಮು ವಿಶೇಷ (ರೈಲು ಸಂಖ್ಯೆ. 06531) ಏ.11 ರಂದು ಕೆಎಸ್‌ಆರ್ ಬೆಂಗಳೂರು-ಬೆಂಗಳೂರು ಕಂಟೋನ್ಮೆಂಟ್ ನಡುವೆ ರದ್ದಾಗಲಿದೆ.
ಎರ್ನಾಕುಲಂ – ಕೆಎಸ್‌ಆರ್ ಬೆಂಗಳೂರು ಡೈಲಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ. 12678) ರೈಲು ಏ. 10 ರಂದು ಹೊರಡುತ್ತದೆ. ಈ ರೈಲು ಬೈಯ್ಯಪ್ಪನಹಳ್ಳಿ-ಕೆಎಸ್‌ಆರ್ ಬೆಂಗಳೂರು ನಡುವೆಯೇ ಸ್ಥಗಿತಗೊಳ್ಳಲಿದೆ.
ಕೆಎಸ್‌ಆರ್ ಬೆಂಗಳೂರು-ಎರ್ನಾಕುಲಂ ಡೈಲಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ. 12677) ರೈಲು ಏ. 11ರಂದು ಕೆಎಸ್‌ಆರ್ ಬೆಂಗಳೂರು-ಬೈಯ್ಯಪ್ಪನಹಳ್ಳಿ ನಡುವೆ ಭಾಗಶಃ ರದ್ದುಗೊಳ್ಳುತ್ತದೆ. ಸರ್‌ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಬೆಳಗ್ಗೆ 6.10 ಕ್ಕೆ ಹೊರಡುತ್ತದೆ.
ಮಾರಿಕುಪ್ಪಂ-ಕೆಎಸ್‌ಆರ್ ಬೆಂಗಳೂರು ಮೆಮು ಸ್ಪೆಷಲ್ (ರೈಲು ಸಂಖ್ಯೆ. 01772) ರೈಲು ಬೆಂಗಳೂರು- ಬೆಂಗಳೂರು ಕಂಟೋನ್ಮೆಂಟ್ ನಡುವೆ, ಕೆಎಸ್‌ಆರ್ ಬೆಂಗಳೂರು-ಮಾರಿಕುಪ್ಪಂ ಮೆಮು ವಿಶೇಷ (ರೈಲು ಸಂಖ್ಯೆ. 06396) ರೈಲು ಕೆಎಸ್‌ಆರ್ ಬೆಂಗಳೂರು ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವೆ ಭಾಗಶಃ ರದ್ದಾಗಲಿದೆ.
ರೈಲುಗಳ ಮಾರ್ಗ ಬದಲಾವಣೆ : ಏ.10ರಂದು ಮೈಸೂರು- ಎಂಜಿಆರ್ ಚೆನ್ನೈ ಸೆಂಟ್ರಲ್ ಕಾವೇರಿ ಡೈಲಿ ಎಕ್ಸ್‌ಪ್ರೆಸ್, ಎಂಜಿಆರ್ ಚೆನ್ನೈ ಸೆಂಟ್ರಲ್‌ನಿಂದ ಹೊರಡುವ ಮೈಸೂರು ಕಾವೇರಿ ಡೈಲಿ ಎಕ್ಸ್‌ಪ್ರೆಸ್, ಕೆಎಸ್‌ಆರ್ ಬೆಂಗಳೂರು – ನಾಂದೇಡ್ ಡೈಲಿ ಎಕ್ಸ್‌ಪ್ರೆಸ್, ಸರ್. ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಮೈಸೂರು ವಿಶೇಷ ಎಕ್ಸ್‌ಪ್ರೆಸ್, ಬಂಗಾರಪೇಟೆ- ಕೆಎಸ್‌ಆರ್ ಬೆಂಗಳೂರು ಮೆಮು ವಿಶೇಷ ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ.
ಕಾರ್ಮೆಲರಾಮ್ ನಿಲ್ದಾಣದಲ್ಲಿ ರೈಲು ನಿಲುಗಡೆ : ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ನಾಗರ್‌ಕೋಯಿಲ್ ನಡುವೆ ನಿತ್ಯ ಸಂಚರಿಸುವ ಎಕ್ಸ್ ಪ್ರೆಸ್ (ರೈಲು ಸಂಖ್ಯೆ 17235 ಮತ್ತು 17236) ರೈಲುನ್ನು ಬೆಂಗಳೂರಿನ ಕಾರ್ಮೆಲರಾಮ್ ನಿಲ್ದಾಣದಲ್ಲಿ ಒಂದು ನಿಮಿಷ ತಾತ್ಕಾಲಿಕ ನಿಲುಗಡೆಯನ್ನು ಪ್ರಾಯೋಗಿಕ ಆಧಾರದ ಮೇಲೆ ಆರು ತಿಂಗಳ ಅವಧಿವರೆಗೆ (ಏಪ್ರಿಲ್ 15 ರಿಂದ ಅಕ್ಟೋಬರ್ 14, 2023) ಪ್ರಸ್ತುತ ವೇಳಾಪಟ್ಟಿಯೊಂದಿಗೆ ಮುಂದುವರಿಸಲಾಗುತ್ತದೆ.
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…