Mysore
20
overcast clouds
Light
Dark

ಕಾಫಿನಾಡಲ್ಲಿ 23 ಕೋಟಿ ಮೌಲ್ಯದ ಒಡವೆ ಸೀಜ್..!

ಚಿಕ್ಕಮಗಳೂರು : ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಮೂಲೆ, ಮೂಲೆಯಲ್ಲೂ ಚುನಾವಣಾಧಿಕಾರಿಗಳು, ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

ಆದರೂ ಅಕ್ರಮವಾಗಿ ಕಂತೆ ಕಂತೆ ನೋಟುಗಳು ಹಾಗೂ ಕೋಟ್ಯಾಂತರ ಬೆಲೆ ಬಾಳುವ ಚಿನ್ನಾಭರಣಗಳನ್ನು ಸಾಗಿಸೋ ಪ್ರಯತ್ನಗಳು ನಡೆಯುತ್ತಿವೆ. ಚಿಕ್ಕಮಗಳೂರಿನ ಪೊಲೀಸರು 23 ಕೋಟಿ ಮೌಲ್ಯದ 40 ಕೆಜಿ ಚಿನ್ನಾಭರಣವನ್ನ ವಶಕ್ಕೆ ಪಡೆಯಲಾಗಿದೆ.ತರೀಕೆರೆ ತಾಲ್ಲೂಕಿನ MC ಹಳ್ಳಿ ಚೆಕ್‌ಪೋಸ್ಟ್ ನಲ್ಲಿ ಬರೋಬ್ಬರಿ 40 ಕೆಜಿ ಚಿನ್ನಾಭರಣಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

23 ಕೋಟಿ ಮೌಲ್ಯದ ಚಿನ್ನದ ಒಡವೆಗಳನ್ನು ಕಂಟೈನರ್‌ನಲ್ಲಿ ಸಾಗಿಸಲಾಗುತ್ತಿತ್ತು. ಸೂಕ್ತ ದಾಖಲೆ ಇಲ್ಲದೆ ಕಂಟೈನರ್‌ನಲ್ಲಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಚಿನ್ನದ ಒಡವೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

23 ಕೋಟಿ ಬೆಲೆ ಬಾಳುವ ಚಿನ್ನಾಭರಣಗಳನ್ನ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಸಾಗಿಸುತ್ತಿದ್ದರು ಎನ್ನಲಾಗಿದೆ. ಪದೇ ಪದೇ ಇದೇ ಚೆಕ್‌ಪೋಸ್ಟ್ ನಲ್ಲಿ ಕೋಟ್ಯಾಂತರ ಮೌಲ್ಯದ ಚಿನ್ನ ಸೀಜ್ ಮಾಡಲಾಗಿದೆ. ಚಿನ್ನಾಭರಣ ವ್ಯಾಪಾರಿಗಳು ಸರ್ಕಾರಕ್ಕೆ ತೆರಿಗೆ ವಂಚನೆ ಮಾಡುತ್ತಿರುವ ಶಂಕೆ ವ್ಯಕ್ತವಾಗಿದೆ. ತೆರಿಗೆ ಇಲಾಖೆ ಅಧಿಕಾರಿಗಳು 40 ಕೆಜಿ ಚಿನ್ನಾಭರಣದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ