Mysore
15
clear sky

Social Media

ಭಾನುವಾರ, 14 ಡಿಸೆಂಬರ್ 2025
Light
Dark

ಕುಂದುಕೊರತೆ ಹಂಚಿಕೊಳ್ಳಲು ಸಿಎಂ ಕಚೇರಿಯಿಂದ ಟ್ವಿಟರ್‌ ಖಾತೆ

ಬೆಂಗಳೂರು: ಸಾರ್ವಜನಿಕ ಕುಂದು ಕೊರತೆಗಳನ್ನು ನೇರವಾಗಿ ಮುಖ್ಯಮಂತ್ರಿಗಳ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಗಮನಕ್ಕೆ ತರಲು ಮಾಧ್ಯಮ ಮತ್ತು ಸಾರ್ವಜನಿಕರಿಗೆ ನೆರವಾಗುವ ಉದ್ದೇಶದಿಂದ ಹೊಸ ಟ್ವಿಟರ್ ಖಾತೆಯನ್ನು ತೆರೆಯಲಾಗಿದೆ.

https://twitter.com/osd_cmkarnataka ಹೆಸರಿನ ಟ್ವಿಟರ್ ಖಾತೆಗೆ ಸಾರ್ವಜನಿಕರು ಮತ್ತು ಮಾಧ್ಯಮದವರು ತಮ್ಮ ಸಾರ್ವಜನಿಕ ಕುಂದು ಕೊರತೆಗಳ ಕುರಿತಾದ ಸಮಸ್ಯೆಗಳನ್ನು ಟ್ಯಾಗ್ ಮಾಡಬಹುದು.

ಎಲ್ಲವನ್ನೂ ಕಚೇರಿಯ ಸಿಬ್ಬಂದಿ ಮತ್ತು ಅಧಿಕಾರಿಗಳು ಗಮನಿಸಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಇಲಾಖೆಗಳ ಸಿಬ್ಬಂದಿಯ ಗಮನಕ್ಕೆ ತರುವ ಮೂಲಕ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈ ಪ್ರಯತ್ನ ಮಾಡಲಾಗುತ್ತಿದೆ.

ಸಾರ್ವಜನಿಕ ಕುಂದುಕೊರತೆಗಳನ್ನು ಮಾತ್ರ ಮುಖ್ಯಮಂತ್ರಿಗಳ ಕಚೇರಿಯ ಈ ಖಾತೆಗೆ ಟ್ಯಾಗ್ ಮಾಡಬಹುದಾಗಿದ್ದು ವೈಯುಕ್ತಿಕ ಸಮಸ್ಯೆಗಳನ್ನು ಈ ಖಾತೆಗೆ ಟ್ಯಾಗ್ ಮಾಡದೆ ಅವುಗಳನ್ನು ನೇರವಾಗಿ ಸಂಬಂಧಪಟ್ಟವರ ಗಮನಕ್ಕೆ ತರಬಹುದಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!