ಬೆಂಗಳೂರು : ವಿಧಾನಸಭೆ ಚುನಾವಣೆಗೆ ಮೂರು ದಿನಗಳು ಬಾಕಿ ಇದೆ. ಈ ಮಹತ್ವದ ಸಮಯದಲ್ಲಿ ವಿಡಿಯೊವೊಂದು ವೈರಲ್ ಆಗಿದೆ. ಈ ವಿಡಿಯೊ ತುಣುಕಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಆಪ್ತ ಸಮಾಲೋಚನೆ ನಡೆಸುತ್ತಿರುವುದು ಕಂಡುಬಂದಿದೆ. ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯನವರ ಆರೋಗ್ಯವನ್ನು ವಿಚಾರಿಸುತ್ತಿರುವುದು ಇಲ್ಲಿ ಕಾಣಬಹುದಾಗಿದೆ.
ಉಭಯ ನಾಯಕರು ಹಲವಾರು ವಿಚಾರಗಳನ್ನು ಇಲ್ಲಿ ಮಾತನಾಡಿದ್ದಾರೆ. ಸಿದ್ದರಾಮಯ್ಯನವರ ಕೈ ಊದಿಕೊಂಡಿರುವ ವಿಚಾರ, ಡಿಕೆಶಿ ಹೆಲಿಕಾಪ್ಟರ್ ಅಪಘಾತದ ವಿಚಾರಗಳನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಇಂದಿರಾ ಕ್ಯಾಂಟಿನ್ ಮತ್ತೆ ತೆರೆಯುವ ಬಗ್ಗೆ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ. ಜಗದೀಶ್ ಶೆಟ್ಟರ್ ಅವರನ್ನು ಕಣ್ಣೀರು ಹಾಕಿಸಿದ ಬಿಜೆಪಿ ಬಗ್ಗೆಯೂ ಉಭಯ ನಾಯಕರು ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.
ಮಂಡ್ಯ ಜಿಲ್ಲೆಯಲ್ಲಿ ಐದು ಕ್ಷೇತ್ರಗಳನ್ನು ಕಾಂಗ್ರೆಸ್ ಗೆಲ್ಲಲಿದೆ, ಹಳೇ ಮೈಸೂರು ಭಾಗವನ್ನು ಫುಲ್ ಕವರ್ ಮಾಡಿದ್ದೇನೆ ಎಂದು ಡಿಕೆಶಿ ಹೇಳಿಕೊಂಡಿದ್ದಾರೆ. ಜನರು ನಮ್ಮ ಮೇಲೆ ನಂಬಿಕೆ ಇರಿಸಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.
ಇದನ್ನು ಕರ್ನಾಟಕ ಕಾಂಗ್ರೆಸ್ ಟ್ವಿಟರ್ ನಲ್ಲಿ ಹಂಚಿಕೊಂಡಿದೆ. ‘ಪ್ರಚಾರದ ಭರಾಟೆಯ ಮಧ್ಯೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ನಡೆದ ವಿಚಾರ ವಿನಿಮಯದ ತುಣುಕು ಇಲ್ಲಿದೆ. ರಾಜ್ಯದ ಆಗುಹೋಗುಗಳು, ಭವಿಷ್ಯದ ಯೋಜನೆಗಳ ಕುರಿತ ಚರ್ಚೆಯ ಸಂಪೂರ್ಣ ವಿಡಿಯೋ ಸದ್ಯದಲ್ಲಿಯೇ ಬರಲಿದೆ. ನಿರೀಕ್ಷಿಸಿ’ ಎಂದು ಕಾಂಗ್ರೆಸ್ ತಿಳಿಸಿದೆ.
ಇದನ್ನು ರೀಟ್ವೀಟ್ ಮಾಡಿಕೊಂಡಿರುವ ಟ್ವಿಟರ್ ಬಳಕೆದಾರರಾದ ಗಣೇಶ್ ಚೇತನ್ ಎಂಬುವವರು, ‘ಈ ವಿಡಿಯೋ ಕಾಂಗ್ರೆಸ್ ನ ಮಾಸ್ಟರ್ ಸ್ಟ್ರೋಕ್ ನಂತೆ ಕಾಣುತ್ತಿದೆ. ಯಡಿಯೂರಪ್ಪ ಮತ್ತು ಬಿಎಲ್ ಸಂತೋಷ್ ಅವರೊಂದಿಗೆ ನಾವು ಅಂತಹದನ್ನು ನೋಡಲು ಬಯಸುತ್ತೇವೆ. ಕುಮಾರಸ್ವಾಮಿ ಮತ್ತು ರೇವಣ್ಣ ಸಹ ಹೀಗೆ ಮಾತನಾಡಬೇಕೆಂದು ಬಯಸುತ್ತೇವೆ’ ಎಂಬುದಾಗಿ ತಿಳಿಸಿದ್ದಾರೆ.
ಅಧಿಕಾರಕ್ಕೆ ಬಂದ ನಂತರ ಕರ್ನಾಟಕದ ಕಾಂಗ್ರೆಸ್ ನಾಯಕರಿಂದ ಈಗ ಬೇಕಾಗಿರುವುದು ಮತ್ತು ನಿರೀಕ್ಷಿಸುತ್ತಿರುವ ಏಕೈಕ ವಿಷಯವೆಂದರೆ ಅವರು ನೀಡಿದ ಭರವಸೆಗಳನ್ನು ಉಳಿಸಿಕೊಳ್ಳುವುದು, ಪಕ್ಷದ ಒಳಗೆ ಮತ್ತು ಹೊರಗಿನ ಭ್ರಷ್ಟರ ವಿರುದ್ಧ ಬಲಶಾಲಿಯಾಗುವುದು, ಅಭಿವೃದ್ಧಿ ಮತ್ತು ಪ್ರಯೋಜನವು ಎಲ್ಲರಿಗೂ ತಲುಪುವುದನ್ನು ಖಚಿತಪಡಿಸಿಕೊಳ್ಳುವುದು. ಇವುಗಳು ಗ್ರಾಮ ಹಾಗೂ ನಗರಗಳಿಗೆ ತಲುಪುವಂತೆ ಮಾಡುವುದು’ ಎಂದು ಇನ್ನೊಬ್ಬರು ಕಾಮೆಂಟ್ ಮಾಡಿದ್ದಾರೆ.
https://twitter.com/INCKarnataka/status/1655123404717178880?t=HahmUHTGOUM2njiDpdzZuQ&s=08
ಪಂಜು ಗಂಗೊಳ್ಳಿ ಜೈಲಿನ ಅನಕ್ಷರಸ್ಥ ಕೈದಿಗಳನ್ನು ಅಕ್ಷರಸ್ಥರನ್ನಾಗಿಸಲು ಮಹತ್ವದ ಯೋಜನೆ ರಾಜೇಶ್ ಕುಮಾರ್ ಯಾವತ್ತೂ ಶಾಲೆಯ ಮಟ್ಟಿಲು ಹತ್ತಿದವನಲ್ಲ. ಹಾಗಾಗಿ,…
ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ…
ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ…
ಮೈಸೂರು: ಕ್ರಿಸ್‌ಮಸ್ ಆಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದ್ದರೆ, ಚರ್ಚ್‌ಗಳ ಅಂಗಳವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸುವ ಕಾರ್ಯ…
ಕೆ.ಬಿ.ರಮೇಶನಾಯಕ ಟಿಎಚ್‌ಒ ಹುದ್ದೆಗೆ ಡಿಎಚ್‌ಒ ವರ್ಗಾವಣೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ…