Mysore
16
overcast clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

ಕಾಂಗ್ರೆಸ್‌ಗೆ ನೀಡುವ ಮತ ಪಿಎಫ್‌ಐನಂತಹ ಉಗ್ರಗಾಮಿ ಸಂಘಟನೆಗಳಿಗೆ ಪ್ರೋತ್ಸಾಹ ನೀಡಿದಂತೆ : ಜೆ.ಪಿ.ನಡ್ಡಾ

ಸೊರಬ : ಜೆಡಿಎಸ್‌ಗೆ ಮತ ನೀಡಿದರೆ ಕಾಂಗ್ರೆಸ್‌ಗೆ ನೀಡಿದಂತೆ. ಕಾಂಗ್ರೆಸ್‌ಗೆ ನೀಡುವ ಮತ ಪಿಎಫ್‌ಐನಂತಹ ಉಗ್ರಗಾಮಿ ಸಂಘಟನೆಗಳಿಗೆ ಪ್ರೋತ್ಸಾಹ ನೀಡಿದಂತೆ. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ನೀಡುವ ಮತ ದೇಶದ ಅಭಿವೃದ್ಧಿ ಮತ್ತು ಜನಹಿತಕ್ಕಾಗಿ ಸದ್ಬಳಕೆ ಆಗುತ್ತದೆ. ಆದ್ದರಿಂದ ಮತದಾರರು ತಾವು ನೀಡುವ ಮತವನ್ನು ಪೂರ್ವಾಪರ ಯೋಚಿಸಿ ನೀಡಬೇಕು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು.

ಕಾಂಗ್ರೆಸ್‌ನ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಉಗ್ರಗಾಮಿ ಆರೋಪದಲ್ಲಿ ಬಂಧಿಸಲ್ಪಟ್ಟಪಿಎಫ್‌ಐ ಉಗ್ರ ಸಂಘಟನೆಯ 700ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಮುಕ್ತ ಆಗಿಸುವ ಮೂಲಕ ರಾಜ್ಯದಲ್ಲಿ ಅರಾಜಕತೆ ಸೃಷ್ಠಿ ಮಾಡಿದ್ದರು. ಇಂಥವರಿಂದ ದೇಶ ಮತ್ತು ರಾಜ್ಯ ಪ್ರಗತಿ ಹೊಂದಲು ಸಾಧ್ಯವಿಲ್ಲ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಜನಜೀವನದ ಮೇಲೆ ದುಷ್ಪರಿಣಾಮ ಬೀರುತ್ತದೆ. ಆದ್ದರಿಂದ ಕರ್ನಾಟಕ ಕಾಂಗ್ರೆಸ್‌ಮುಕ್ತ ರಾಜ್ಯವಾಗಬೇಕು. ಇದಕ್ಕೆ ಮೋದಿ ಅವರನ್ನು ಬೆಂಬಲಿಸುವಂತೆ ಕರೆ ನೀಡಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!