Mysore
26
scattered clouds

Social Media

ಮಂಗಳವಾರ, 11 ಫೆಬ್ರವರಿ 2025
Light
Dark

ಡಿಕೆಶಿ ಇದ್ದ ಹೆಲಿಕಾಪ್ಟರ್ ಗೆ ರಣಹದ್ದು ಡಿಕ್ಕಿ : ಅಪಾಯದಿಂದ ಪಾರಾದ ಕನಕಪುರ ಬಂಡೆ

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಭಾರೀ ಅಪಘಾತದಿಂದ ಪಾರಾಗಿದ್ದಾರೆ. ಡಿಕೆ ಶಿವಕುಮಾರ್ ಇದ್ದ ಹೆಲಿಕಾಪ್ಟರ್‌ಗೆ ರಣಹದ್ದು ಡಿಕ್ಕಿ ಹೊಡೆದಿದ್ದು, ಹೆಲಿಕಾಪ್ಟರ್‌ನ ಮುಂಭಾಗದ ಗಾಜು ಪುಡಿ ಪುಡಿಯಾಗಿದೆ. ನಿಯಂತ್ರಣ ತಪ್ಪುತ್ತಿದ್ದಂತೆ ಎಚ್‌ಎಎಲ್ ಏರ್‌ಪೋಟ್ ಹೆಲಿಕಾಪ್ಟರ್ ಅನ್ನು ತುರ್ತು ಲ್ಯಾಂಡಿಂಗ್ ಮಾಡಲಾಗಿದೆ.
ಡಿಕೆ ಶಿವಕುಮಾರ್ ಜಕ್ಕೂರಿನಿಂದ ಮುಳಬಾಗಿಲಿಗೆ ಹೆಲಿಕಾಪ್ಟರ್ ಮೂಲಕ ಪ್ರಚಾರಕ್ಕೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ. ಹೊಸಕೋಟೆ ಬಳಿ ರಣಹದ್ದು ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದಿದ್ದು, ಈ ವೇಳೆ ಹೆಲಿಕಾಪ್ಟರ್ ಗಾಜು ಪುಡಿಯಾಗಿದೆ. ಇದರಿಂದ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣ ಆಗಿತ್ತು. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.
ಕೂಡಲೇ ಹೆಲಿಕಾಪ್ಟರ್ ಅನ್ನು ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ತಂದು ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಸುರಕ್ಷಿತವಾಗಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ