ಉಡುಪಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಬಳಿಯಿರುವ ಅರಶಿನಗುಂಡಿ ಜಲಪಾತದಲ್ಲಿ ನಡೆದಿದೆ.
ಭದ್ರಾವತಿ ಮೂಲದ ಶರತ್ ಕುಮಾರ್ (23) ಮೃತಪಟ್ಟ ಯುವಕ. ಈತ ಜಲಪಾತದಲ್ಲಿ ಬೀಳುತ್ತಿರುವ ದೃಶ್ಯ ಮತ್ತೋರ್ವ ಯುವಕನ ಮೊಬೈಲ್ ನಲ್ಲಿ ಸೆರೆಯಾಗಿದೆ.
ಕೊಲ್ಲೂರಿಗೆ ಕಾರಿನಲ್ಲಿ ಬಂದಿದ್ದ ಯುವಕ, ಜಲಪಾತ ವೀಕ್ಷಣೆಗೆ ತೆರಳಿದ್ದಾನೆ. ಈ ವೇಳೆ ಆತ ಕಾಲು ಜಾರಿ ಬಿದ್ದಿದ್ದಾನೆ. ಯುವಕನ ಮೃತದೇಹದ ಪತ್ತೆಗೆ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸುತ್ತಿದೆ.
ಘಟನಾ ಸ್ಥಳಕ್ಕೆ ಕೊಲ್ಲೂರು ಪಿ.ಎಸ್.ಐ ಜಯಲಕ್ಷ್ಮಿ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದಾರೆ. ಈ ಸಂಬಂಧ ಕೊಲ್ಲೂರು ಠಾಣೆಯಲ್ಲಿ ದಾಖಲಾಗಿದೆ.
ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…
ಮಹಾದೇಶ್ ಎಂ.ಗೌಡ ೩ ದಿನಗಳ ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ; ಪ್ರಾಧಿಕಾರದಿಂದ ಸಕಲ ಸಿದ್ಧತೆ ಹನೂರು: ಮಹಾಲಯ ಅಮಾವಾಸ್ಯೆ…
ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ ಗುಂಡ್ಲುಪೇಟೆ:…
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…