BREAKING NEWS

ಬೆಂಗಳೂರಿನಲ್ಲಿ ನಡೆಯಲಿರುವ ವಿಪಕ್ಷಗಳ ಸಭೆಯಲ್ಲಿ ಎಎಪಿ ಭಾಗಿ: ಸಂಸದ ರಾಘವ್ ಚಡ್ಡಾ

ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಒಗ್ಗಟ್ಟಿನಿಂದ ಎದುರಿಸಲು ಜಂಟಿ ಕಾರ್ಯತಂತ್ರ ರೂಪಿಸಲು ಬೆಂಗಳೂರಿನಲ್ಲಿ ನಾಳೆಯಿಂದ ನಡೆಯಲಿರುವ ವಿರೋಧ ಪಕ್ಷಗಳ ಸಭೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಪಾಲ್ಗೊಳ್ಳಲಿದೆ ಎಂದು ಪಕ್ಷದ ನಾಯಕ ರಾಘವ್ ಚಡ್ಡಾ ಭಾನುವಾರ ಪ್ರಕಟಿಸಿದ್ದಾರೆ.

ಪಕ್ಷದ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ಇಂದು ನಡೆದ ಎಎಪಿ ರಾಜಕೀಯ ವ್ಯವಹಾರಗಳ ಸಮಿತಿ ಸಭೆಯ ನಂತರ, ಸುದ್ದಿಗಾರರೊಂದಿಗೆ ಮಾತನಾಡಿದ ರಾಘವ್ ಚಡ್ಡಾ, ದೆಹಲಿಯಲ್ಲಿ ಆಡಳಿತ ನಿಯಂತ್ರಣ ಸೇವೆಗಳ ಕುರಿತು ಕೇಂದ್ರದ ಸುಗ್ರೀವಾಜ್ಞೆಯನ್ನು ಸಂಸತ್ತಿನಲ್ಲಿ ವಿರೋಧಿಸುವ ಕಾಂಗ್ರೆಸ್ ನಿರ್ಧಾರವನ್ನು ಸ್ವಾಗತಿಸಿದರು.

ಸೋಮವಾರ ಬೆಂಗಳೂರಿನಲ್ಲಿ  ಔತಣಕೂಟದಿಂದ ಪ್ರಾರಂಭವಾಗುವ ವಿಪಕ್ಷಗಳ ಸಭೆಯಲ್ಲಿ ಎಎಪಿ ಭಾಗವಹಿಸಲಿದೆ ಎಂದು ತಿಳಿಸಿದರು.

ದೆಹಲಿ ಆಡಳಿತ ಸೇವೆ ಕುರಿತ ಕೇಂದ್ರದ ಸುಗ್ರೀವಾಜ್ಞೆಯನ್ನು ಸಂಸತ್ತಿನಲ್ಲಿ ಕಾಂಗ್ರೆಸ್ ವಿರೋಧಿಸಿದರೆ ಮಾತ್ರ ಬೆಂಗಳೂರಿನಲ್ಲಿ ಸಭೆ ಸೇರುವುದಾಗಿ ಎಎಪಿ ಈ ಹಿಂದೆ ಹೇಳಿತ್ತು.

2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಒಗ್ಗಟ್ಟಿನಿಂದ ಎದುರಿಸಲು ಜಂಟಿ ಕಾರ್ಯತಂತ್ರವನ್ನು ರೂಪಿಸಲು ನಡೆಯುತ್ತಿರುವ ವಿಪಕ್ಷಗಳ ಎರಡನೇ ಸಭೆ ಇದಾಗಿದೆ. ಈ ಬಾರಿ 24 ವಿಪಕ್ಷಗಳು ತಮ್ಮ ಬೆಂಬಲವನ್ನು ವ್ಯಕ್ತಪಡಿಸಿವೆ.

ಪಾಟ್ನಾದಲ್ಲಿ ನಡೆದ ಮೊದಲ ಸಭೆಯಲ್ಲಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಒಗ್ಗಟ್ಟಿನಿಂದ ಎದುರಿಸಲು ನಿರ್ಧರಿಸಿದ್ದರು.

andolanait

Recent Posts

ದಿ ಡೆವಿಲ್‌ ಚಿತ್ರದ ವಿಮರ್ಶೆ ಹಂಚಿಕೊಂಡ ಪತ್ನಿ ವಿಜಯಲಕ್ಷ್ಮಿ….!

ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…

3 mins ago

ಸರ್ಕಾರಿ ಶಾಲೆಗಳಿಗೆ ಗುಡ್‌ನ್ಯೂಸ್‌ : ಶಾಲಾ ಕೊಠಡಿ ದುರಸ್ಥಿಗೆ ರೂ.360 ಕೋಟಿ ಬಿಡುಗಡೆ

ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…

15 mins ago

ಹೊಸ ತಾಲ್ಲೂಕುಗಳಿಗೆ ಸದ್ಯಕ್ಕಿಲ್ಲ ಆಸ್ಪತ್ರೆ ಭಾಗ್ಯ

ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…

21 mins ago

ಸಾಮಾಜಿಕ ಬಹಿಷ್ಕಾರ ಹಾಕಿದ್ರೆ 3 ವರ್ಷ ಜೈಲು ಜೊತೆಗೆ ದಂಡ : ಮಸೂದೆ ಮಂಡಿಸಿದ ರಾಜ್ಯ ಸರ್ಕಾರ

ಬೆಳಗಾವಿ : ಅನಿಷ್ಟ ಪದ್ಧತಿಯಾಗಿ ಇನ್ನೂ ಉಳಿದುಕೊಂಡಿರುವ ಸಾಮಾಜಿಕ ಬಹಿಷ್ಕಾರ ನಿಷೇಧಕ್ಕೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ…

28 mins ago

ಹನಗೂಡಿನಲ್ಲಿ ಹುಲಿ ದರ್ಶನ : ಭೀಮನೊಂದಿಗೆ ಕೂಂಬಿಂಗ್‌ ಆರಂಭ

ಹುಣಸೂರು : ಹನಗೋಡು ಹೋಬಳಿ ನಾಗಮಂಗಲ ಮತ್ತು ಮುತ್ತುರಾಯನಹೊಸಹಳ್ಳಿ ಭಾಗದಲ್ಲಿ ಹುಲಿ ಕಾಣಿಸಿಕೊಂಡಿದ್ದು, ಈ ಸಂಬಂಧ ಅರಣ್ಯ ಇಲಾಖೆ ಬುಧವಾರ…

35 mins ago

ಬೋನಿಗೆ ಬಿದ್ದ ಗಂಡು ಚಿರತೆ : ಗ್ರಾಮಸ್ಥರ ಆತಂಕ ದೂರ

ತಿ.ನರಸೀಪುರ : ತಾಲ್ಲೂಕಿನ ಬೂದಹಳ್ಳಿ ಗ್ರಾಮದಲ್ಲಿ ಗುರುವಾರ 6 ವರ್ಷದ ಗಂಡು ಚಿರತೆಯೊಂದು ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಸಿಕ್ಕಿ ಬಿದ್ದಿದೆ.…

40 mins ago