ನವದೆಹಲಿ: ಸಾರ್ವತ್ರಿಕ ಚುನಾವಣೆಯಲ್ಲಿ ಸೋಲು ಕಂಡ “ಇಂಡಿಯಾ ಮೈತ್ರಿ ಕೂಟ”ದಲ್ಲಿನ ಮೈತ್ರಿಯನ್ನು ಆಮ್‌ಆದ್ಮಿ ಪಕ್ಷ (ಎಎಪಿ) ಮುರಿದುಕೊಂಡಿದೆ.
ತಾವು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧೆ ಮಾಡುವ ಬಗ್ಗೆ ಎಎಪಿ ಮಾಹಿತಿ ನೀಡಿದೆ.
ಅಂದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಪಕ್ಷ ಐಎನ್‌ಡಿಐಎ ಮೈತ್ರಿ ಬಿಟ್ಟು ಏಕಾಂಗಿಯಾಗಿ ಸ್ಪರ್ಧೆ ಮಾಡಲಿದ್ದೇವೆ. ನಮ್ಮ ಮೈತ್ರಿ ಕೇವಲ ಲೋಕಸಭಾ ಚುನಾವಣೆಗೆ ಹೊರತು ವಿಧಾನ ಸಭಾ ಚುನಾವಣೆಗೆ ಅಲ್ಲ ಎಂದು ಆಮ್‌ಆದ್ಮಿ ಪಾರ್ಟಿ ತಿಳಿಸಿದೆ.
ಈ ಸಂಬಂಧ ದೆಹಲಿ ಸಚಿವ ಗೋಪಾಲ್ ರೈ ಅವರು ಮಾತನಾಡಿದ್ದು, ಐಎನ್‌ಡಿಐಎ ಅಸ್ತಿತ್ವಕ್ಕೆ ಬಂದ ದಿನದಿಂದಲೇ ಇದು ಜಾರಿಯಲ್ಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಲೋಕಸಭಾ ಚುಣಾವಣೆಗೆ ಮುನ್ನವೇ ನಾವು ಮೈತ್ರಿ ಬಗ್ಗೆ ಸ್ಪಷ್ಟವಾಗಿದ್ದೇವೆ. ನಮ್ಮ ಮೈತ್ರಿಯೂ ವಿಧಾನಸಭಾ ಚುನಾವಣೆಗೆ ಮಾತ್ರ ಕೇವಲ ಮೀಸಲಿದೆ. ಕಳೆದ ಬಾರಿಯ ಚುನಾವಣೆಯಂತೆ ಈ ಬಾರಿಯೂ ನಾವು ನಮ್ಮ ಸಂಪೂರ್ಣ ಶಕ್ತಿಯೊಂದಿಗೆ ಚುನಾವಣೆಯಲ್ಲಿ ಎಸುರಿಸಲಿದ್ದೇವೆ ಎಂದು ಗೋಪಾಲ್ ರೈ ತಿಳಿಸಿದರು.
ಈ ಸಂಬಂಧ ಜೂನ್. 8ರಂದು ಕೌನ್ಸಿಲರ್‌ಗಳ ಸಭೆ ಕರೆದಿದ್ದೇವೆ. ಬಳಿಕ ಜೂನ್. 13ರಂದು ಎಲ್ಲಾ ಕಾರ್ಯಕರ್ತರೊಂದಿಗೆ ಸಭೆ ನಡೆಸುವ ಮೂಲಕ ಮುಂದಿನ ತೀರ್ಮಾನ ಕೈಗೊಳ್ಳುವ ಬಗ್ಗೆ ವಿವರಿಸಿದರು.
ಇನ್ನು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಬಂಧನ ವಿಷಯಕ್ಕೆ ಸಂಬಂಧಿಸಿದಂತೆ, ಅವರು ಜೈಲಿನಲ್ಲಿರುವ ಕಾರಣ, ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಖಡಕ್ ಉತ್ತರ ನೀಡಿದರು.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…