ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಭಾಗವಹಿಸುವ ಆನೆ ತಂಡದ ಕ್ಯಾಪ್ಟನ್ ಅಭಿಮನ್ಯುವಿನ ಉತ್ತರಾಧಿಕಾರಿ ಎಂದೇ ಹೇಳಲಾಗುತ್ತಿದ್ದ ಅಶ್ವತ್ಥಾಮ ಎಂಬುವ ಆನೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ದಸರಾ ಜಂಬೂಸವಾರಿಯಲ್ಲಿ ಅಂಬಾರಿ ಹೊತ್ತು ಜನ ಮೆಚ್ಚುಗೆ ಪಡೆದಿದ್ದ ಕ್ಯಾಪ್ಟನ್ ಅರ್ಜುನ(ಆನೆ)ನ ಸಾವಿನ ನೋವು ಮಾಸುವ ಮುನ್ನವೇ ದಸರಾ ಜಂಬೂಸವಾರಿ ಆನೆ ಪಡೆಯ ಅಶ್ವತ್ಥಾಮ ಎಂಬ ಆನೆ ಸಾವು ಆಘಾತವನ್ನುಂಟು ಮಾಡಿದೆ.
ನಾಗರಹೊಳೆಯ ಭೀಮನಕಟ್ಟೆ ಆನೆ ಕ್ಯಾಂಪ್‌ನಲ್ಲಿದ್ದ ಅಶ್ವತ್ಥಾಮ, ಆಹಾರವನ್ನು ಅರಸಿ ತೆರಳಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿರುವುದು ತಿಳಿದು ಬಂದಿದೆ.
ಸೋಲರ್ ತಂತಿಗಳ ಮೇಲೆ ವಿದ್ಯುತ್ ತಂತಿ ಬಿದ್ದಿದ್ದು, ಅಶ್ವತ್ಥಾಮ ಆನೆ ಅದನ್ನು ತುಳಿದ ಪರಿಣಾಮ ಆನೆ ಸ್ಥಳದಲ್ಲೇ ಮೃತಪಟ್ಟಿದೆ ಎಂದು ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಶ್ವತ್ಥಾಮ ಬಂದಿದ್ದು ಇಲ್ಲಿಂದ : 2017ರಲ್ಲಿ ಹಾಸನದ ಸಕಲೇಶ್ಪುರದಲ್ಲಿ ಅಶ್ವತ್ಮಥಾಮನನ್ನು ಸೆರೆ ಹಿಡಿಯಲಾಗಿತ್ತು. ತನ್ನ ಶಾಂತ ಹಾಗೂ ತಾಳ್ಮೆ ಸ್ವಾಭಾವದಿಂದ ಮಾವುತರ ಅಚ್ಚುಮೆಚ್ಚಿನ ಆನೆಯಾಗಿತ್ತು. ಬಳಿಕ ಮೊಟ್ಟಮೊದಲಬಾರಿಗೆ 2021ರಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಭಾಗವಹಿಸಿತ್ತು. ನಂತರ 2022ರಲ್ಲಿ ದಸರಾ ಜಂಬೂಸವಾರಿಯಲ್ಲಿ ಭಾಗವಹಿಸುವ ಮೂಲಕ ಜನಮೆಚ್ಚುಗೆ ಪಡೆಯುವಲ್ಲಿ ಅಶ್ವತ್ಥಾಮ ಯಶಸ್ವಿಯಾಯಿತು.
ಇದೀಗ ಅಶ್ವತ್ಥಾಮನ ಸಾವಿನ ಸುದ್ದಿ ತಿಳಿದು ಅರಣ್ಯಾ ಸಿಬ್ಬಂದಿ ಹಾಗೂ ಪ್ರಾಣಿಪ್ರಿಯರು ಮರುಕ ಪಟ್ಟಿದ್ದಾರೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…