ಬಾಲಕೋಟೆ ನಾಯಕ ಅಭಿನಂದನ್ ವರ್ಧಮಾನ್ ​​ಗೆ ವೀರಚಕ್ರ ಪ್ರಶಸ್ತಿ ಪ್ರದಾನ

ನವದೆಹಲಿ: ವೈಮಾನಿಕ ಯುದ್ಧದಲ್ಲಿ ಪಾಕಿಸ್ತಾನದ ಎಫ್-16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದ ವಿಂಗ್ ಕಮಾಂಡರ್ ಬಾಲಕೋಟೆ ನಾಯಲಕ ಅಭಿನಂದನ್ ವರ್ಧಮಾನ್ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ವೀರ ಚಕ್ರ ಪ್ರಶಸ್ತಿ ಪ್ರದಾನ ಮಾಡಿದರು.

ಪುಲ್ವಾಮಾ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ವಾಯುಪಡೆಗಳ ನಡುವಿನ ವೈಮಾನಿಕ ಚಕಮಕಿಯಲ್ಲಿ ವರ್ಧಮಾನ್ ಪಾಕಿಸ್ತಾನದ ಯುದ್ಧವಿಮಾನದೊಂದಿಗೆ ಯುದ್ಧದಲ್ಲಿ ತೊಡಗಿದ್ದರು. ಎಫ್-16 ಅನ್ನು ಹೊಡೆದುರುಳಿಸಿದ ನಂತರ ವರ್ಧಮಾನ್ ಅವರ MiG-21 ಯುದ್ಧ ವಿಮಾನ ಪಾಕ್ ಭೂಪ್ರದೇಶದಲ್ಲಿ ಇಳಿದಾಗ ಅವರನ್ನು ಪಾಕಿಸ್ತಾನ ಸೇನೆ ವಶಕ್ಕೆ ತೆಗೆದುಕೊಂಡಿತು.

ಈ ವಿಷಯದಲ್ಲಿ ಅಂತರರಾಷ್ಟ್ರೀಯ ಹಸ್ತಕ್ಷೇಪದ ಜೊತೆಗೆ ಭಾರತದ ಕಡೆಯಿಂದ ಹೇರಿದ ವ್ಯಾಪಕ ಒತ್ತಡದಿಂದಾಗಿ ಪಾಕಿಸ್ತಾನದ ಸೇನೆಯು ಅವರನ್ನು ಬಿಡುಗಡೆ ಮಾಡಿತ್ತು.

ಈ ನಡುವೆ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ರಕ್ಷಣಾ ಹೂಡಿಕೆ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಅಭಿನಂದನ್ ವರ್ಧಮಾನ್ ಅವರಿಗೆ ವೀರ ಚಕ್ರ ಪ್ರಶಸ್ತಿ ಪ್ರದಾನ ಮಾಡಿದರು.

× Chat with us