ಬೆಂಗಳೂರು : ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಗೆ ಕೋಟಿ ಕೋಟಿ ವಂಚನೆ ಮಾಡಿರುವ ಪ್ರಕರಣದಲ್ಲಿ 3ನೇ ಆರೋಪಿಯಾಗಿರುವ ಅಭಿನವ ಹಾಲಶ್ರೀಯನ್ನು 10 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿ 1ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
ವಂಚನೆ ಪ್ರಕರಣದಲ್ಲಿ ಆರೋಪಿ ಹಾಲಶ್ರೀಗೆ ಜಾಮೀನು ನೀಡಲು ಕೋರ್ಟ್ ನಿರಾಕರಿಸಿದೆ. ಸೆ.29 ರ ತನಕ ಪೊಲೀಸ್ ಕಸ್ಟಡಿಗೆ ವಹಿಸಿ ಆದೇಶ ನೀಡಿದೆ. ಜಾಮೀನು ಅರ್ಜಿ ವಿಚಾರಣೆಯನ್ನು ಸೆ.29 ರಂದು ನಡೆಸಲಿದೆ.
ವಂಚನೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಹಾಲಶ್ರೀ ನಾಪತ್ತೆಯಾಗಿದ್ದರು. ಒಡಿಶಾದಲ್ಲಿ ಮಾರುವೇಶದಲ್ಲಿ ತಲೆಮರೆಸಿಕೊಂಡಿದ್ದ ಹಾಲಶ್ರೀಯನ್ನು ರೈಲ್ವೆ ಪೊಲೀಸರ ನೆರವಿನಿಂದ ಬಂಧಿಸಿ ಬೆಂಗಳೂರಿಗೆ ವಾಪಸ್ ಕರೆತರಲಾಗಿತ್ತು. ಸಿಸಿಬಿ ಪೊಲೀಸರು ಇಂದು 19ನೇ ಎಸಿಎಂಎಂ ನ್ಯಾಯಾಲಯಕ್ಕೆ ಆರೋಪಿಯನ್ನು ಹಾಜರು ಪಡಿಸಿದ್ದರು.
ಆರೋಪಿಯನ್ನು 14 ದಿನ ಪೊಲೀಸ್ ಕಸ್ಟಡಿಗೆ ನೀಡಬೇಕು ಎಂದು ಸಿಸಿಬಿ, ನ್ಯಾಯಾಲಯಕ್ಕೆ ಮನವಿ ಮಾಡಿತ್ತು. ಈ ವೇಳೆ ಹಾಲಶ್ರೀ ಪರ ವಕೀಲ ಅರುಣ್ ಶ್ಯಾಂ ಕೂಡ ಹಾಜರಿದ್ದರು. ಪೊಲೀಸ್ ಕಸ್ಟಡಿಗೆ ಆಕ್ಷೇಪ ವ್ಯಕ್ತಪಡಿಸಿ, ಜಾಮೀನು ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು.
ಆರೋಪಿಗೆ ಜಾಮೀನು ನೀಡದಂತೆ ಪಬ್ಲಿಕ್ ಪ್ರಾಸಿಕ್ಯೂಟರ್ ವಕೀಲರು ಆಕ್ಷೇಪಿಸಿದರು. ತನಿಖೆ ನಡೆಯುವ ಮಧ್ಯೆ ಜಾಮೀನು ನೀಡಬಾರದು. ಸಾಕ್ಷಿ ನಾಶವಾಗುತ್ತದೆ ಎಂದು ವಾದ ಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಆರೋಪಿಯನ್ನು 10 ದಿನ ಪೊಲೀಸ್ ಕಸ್ಟಡಿಗೆ ವಹಿಸಿ ಆದೇಶ ಹೊರಡಿಸಿದೆ.
ವಿಜಯಪುರ: ಬಬಲೇಶ್ವರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್ ವಿಮಾನವೊಂದು ಪತನವಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕಲಬುರ್ಗಿಯಿಂದ ಬೆಳಗಾವಿಗೆ…
ಬೆಂಗಳೂರು: ರಾಜ್ಯದಲ್ಲಿ ಆನ್‌ಲೈನ್ ಬೆಟ್ಟಿಂಗ್ ಹಾವಳಿ ತೀವ್ರಗೊಂಡಿದೆ. ಕಳೆದ 4 ವರ್ಷದಲ್ಲಿ 35 ಮಂದಿ ಆನ್ ಲೈನ್ ಬೆಟ್ಟಿಂಗ್ ದಂಧೆಗೆ…
ಬೆಂಗಳೂರು: ಹಾಸನದಲ್ಲಿ ಇತ್ತೀಚೆಗೆ ನಡೆಸಿದ ಜೆಡಿಎಸ್ ಬೆಳ್ಳಿ ಮಹೋತ್ಸವದ ಮಾದರಿಯಲ್ಲಿ ರಾಜ್ಯದಲ್ಲಿ ಮತ್ತೆರಡು ಸಮಾವೇಶಗಳನ್ನು ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. ಕಲ್ಯಾಣ…
ಬೆಂಗಳೂರು: ಬೇಸಿಗೆಗೂ ಮುನ್ನವೇ ಬಿಸಿಲಿನ ಬೇಗೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ ಎದುರಾಗಿದ್ದು, ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ…
ರಾಮನಗರ: ಕನಕಪುರದಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ಕಾಡಂಚಿನ ಗ್ರಾಮದ ಬಳಿ ಸುಮಾರು 40 ಕಾಡಾನೆಗಳು ಕನಕಪುರ ತಾಲ್ಲೂಕಿನ ಕಾಡುಶಿವನಹಳ್ಳಿ ಬಳಿ…
ಬೆಂಗಳೂರು:ಇತ್ತೀಚೆಗೆ ನಿರ್ಮಾಪಕ ಕನಕಪುರ ಶ್ರೀನಿವಾಸ್ ಕನ್ನಡ ಚಿತ್ರರಂಗದ ಹಲವರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದರು. ಅಶ್ಲೀಲವಾಗಿ ಮಾತನಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ…