BREAKING NEWS

ಅಭಿನವ ಹಾಲಶ್ರೀಗಿಲ್ಲ ಜಾಮೀನು : 10 ದಿನ ಪೊಲೀಸ್‌ ಕಸ್ಟಡಿಗೆ

ಬೆಂಗಳೂರು : ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಹೇಳಿ ಉದ್ಯಮಿಗೆ ಕೋಟಿ ಕೋಟಿ ವಂಚನೆ ಮಾಡಿರುವ ಪ್ರಕರಣದಲ್ಲಿ 3ನೇ ಆರೋಪಿಯಾಗಿರುವ ಅಭಿನವ ಹಾಲಶ್ರೀಯನ್ನು 10 ದಿನ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿ 1ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

ವಂಚನೆ ಪ್ರಕರಣದಲ್ಲಿ ಆರೋಪಿ ಹಾಲಶ್ರೀಗೆ ಜಾಮೀನು ನೀಡಲು ಕೋರ್ಟ್‌ ನಿರಾಕರಿಸಿದೆ. ಸೆ.29 ರ ತನಕ ಪೊಲೀಸ್ ಕಸ್ಟಡಿಗೆ ವಹಿಸಿ ಆದೇಶ ನೀಡಿದೆ. ಜಾಮೀನು ಅರ್ಜಿ ವಿಚಾರಣೆಯನ್ನು ಸೆ.29 ರಂದು ನಡೆಸಲಿದೆ.

ವಂಚನೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಹಾಲಶ್ರೀ ನಾಪತ್ತೆಯಾಗಿದ್ದರು. ಒಡಿಶಾದಲ್ಲಿ ಮಾರುವೇಶದಲ್ಲಿ ತಲೆಮರೆಸಿಕೊಂಡಿದ್ದ ಹಾಲಶ್ರೀಯನ್ನು ರೈಲ್ವೆ ಪೊಲೀಸರ ನೆರವಿನಿಂದ ಬಂಧಿಸಿ ಬೆಂಗಳೂರಿಗೆ ವಾಪಸ್‌ ಕರೆತರಲಾಗಿತ್ತು. ಸಿಸಿಬಿ ಪೊಲೀಸರು ಇಂದು 19ನೇ ಎಸಿಎಂಎಂ ನ್ಯಾಯಾಲಯಕ್ಕೆ ಆರೋಪಿಯನ್ನು ಹಾಜರು ಪಡಿಸಿದ್ದರು.

ಆರೋಪಿಯನ್ನು 14 ದಿನ ಪೊಲೀಸ್‌ ಕಸ್ಟಡಿಗೆ ನೀಡಬೇಕು ಎಂದು ಸಿಸಿಬಿ, ನ್ಯಾಯಾಲಯಕ್ಕೆ ಮನವಿ ಮಾಡಿತ್ತು. ಈ ವೇಳೆ ಹಾಲಶ್ರೀ ಪರ ವಕೀಲ ಅರುಣ್‌ ಶ್ಯಾಂ ಕೂಡ ಹಾಜರಿದ್ದರು. ಪೊಲೀಸ್‌ ಕಸ್ಟಡಿಗೆ ಆಕ್ಷೇಪ ವ್ಯಕ್ತಪಡಿಸಿ, ಜಾಮೀನು ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು.

ಆರೋಪಿಗೆ ಜಾಮೀನು ನೀಡದಂತೆ ಪಬ್ಲಿಕ್‌ ಪ್ರಾಸಿಕ್ಯೂಟರ್‌ ವಕೀಲರು ಆಕ್ಷೇಪಿಸಿದರು. ತನಿಖೆ ನಡೆಯುವ ಮಧ್ಯೆ ಜಾಮೀನು ನೀಡಬಾರದು. ಸಾಕ್ಷಿ ನಾಶವಾಗುತ್ತದೆ ಎಂದು ವಾದ ಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಆರೋಪಿಯನ್ನು 10 ದಿನ ಪೊಲೀಸ್‌ ಕಸ್ಟಡಿಗೆ ವಹಿಸಿ ಆದೇಶ ಹೊರಡಿಸಿದೆ.

 

lokesh

Recent Posts

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

3 hours ago

ಓದುಗರ ಪತ್ರ: ಸರ್ಕಾರಿ ಶಾಲಾ, ಕಾಲೇಜುಗಳೆಂದರೆ ತಾತ್ಸಾರವೇಕೆ?

ಇತ್ತೀಚೆಗೆ ಮೈಸೂರಿನ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನಗರದ ಸರ್ಕಾರಿ ಹಾಗೂ…

3 hours ago

ಓದುಗರ ಪತ್ರ: ಕೆಪಿಎಸ್‌ಸಿ ರದ್ದತಿಗಿಂತ ‘ಶುದ್ಧೀಕರಣ’ ತುರ್ತು ಅಗತ್ಯ

ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು…

3 hours ago

ಆರೋಗ್ಯಕರ ನಾಳೆಗಾಗಿ ಆಯುರ್ವೇದ – ಒಂದು ಆರೋಗ್ಯ, ಒಂದು ಭವಿಷ್ಯ

ಡಾ. ಮಾನಸ ಎಸ್.ಡಿ. ವೈಯಕ್ತಿಕ ಆರೋಗ್ಯದ ಜೊತೆಗೆ ಸಾಮೂಹಿಕ ಆರೋಗ್ಯ ಹಾಗೂ ಪರಿಸರದ ಅರೋಗ್ಯವನ್ನೂ ಕಾಪಾಡುವುದು ಅಗತ್ಯ ಆರೋಗ್ಯವೆಂದರೆ ಕೇವಲ…

3 hours ago

ಡಾ.ಎಸ್.ಜೆ. ನಾಗಲೋಟಿಮಠ ಅವರ ಸ್ಛೂರ್ತಿದಾಯಕ ನಡವಳಿಕೆ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಅಧಿಕಾರದ ಶಕ್ತಿಯಿಂದಲ್ಲ, ಆದರ್ಶದ ನಡವಳಿಕೆಯಿಂದ ಮುನ್ನಡೆಸುವುದೇ ನಿಜವಾದ ನಾಯಕತ ಕೆಲವೊಮ್ಮೆ…

4 hours ago

ಯುವನಿಧಿ; ೨,೧೭೯ ಮಂದಿಗೆ ೬.೩೦ ಕೋಟಿ ರೂ. ನೆರವು

ನವೀನ್ ಡಿಸೋಜ ೨,೪೫೯ ನಿರುದ್ಯೋಗಿ ಯುವಕ-ಯುವತಿಯರಿಂದ ನೋಂದಣಿ; ಶೇ.೮೮.೦೬ ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ವರ್ಗಾವಣೆ  ಮಡಿಕೇರಿ: ಉದ್ಯೋಗದ ನಿರೀಕ್ಷೆಯಲ್ಲಿರುವ…

4 hours ago