ನವದೆಹಲಿ : ಕರ್ನಾಟಕದಲ್ಲಿ ಮುಸ್ಲಿಮರಿಗೆ ನೀಡಿದ್ದ ಶೇ 4ರಷ್ಟು ಒಬಿಸಿ ಕೋಟಾ ಮೀಸಲಾತಿಯನ್ನು ರದ್ದುಗೊಳಿಸಿರುವ ನಿರ್ಧಾರವನ್ನು ಇನ್ನೂ ಒಂದು ವಾರದವರೆಗೆ ಜಾರಿಗೊಳಿಸುವುದಿಲ್ಲ ಎಂದು ಕರ್ನಾಟಕ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
ನ್ಯಾಯಮೂರ್ತಿಗಳಾದ ಕೆ.ಎಂ. ಜೋಸೆಫ್ ಹಾಗೂ ಬಿ.ವಿ.ನಾಗರತ್ನ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠದ ಎದುರು ಕರ್ನಾಟಕ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ‘ಪ್ರಮಾಣಪತ್ರ ಸಲ್ಲಿಸಲು ಸರ್ಕಾರಕ್ಕೆ ಹೆಚ್ಚಿನ ಕಾಲಾವಕಾಶ ಬೇಕಿದೆ’ ಎಂದರು.
ಅರ್ಜಿದಾರರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ‘ರಾಜ್ಯ ಸರ್ಕಾರವು ವಾರದೊಳಗೆ ಪ್ರತಿಕ್ರಿಯೆ ನೀಡಬೇಕು. ವಿಚಾರಣೆಯನ್ನು ಇದೇ 25ಕ್ಕೆ ಮುಂದೂಡಬಹುದು’ ಎಂದು ಸಲಹೆ ನೀಡಿದರು. ಇದಕ್ಕೆ ಒಪ್ಪಿದ ಪೀಠವು ವಿಚಾರಣೆಯನ್ನು ಏಪ್ರಿಲ್ 25ಕ್ಕೆ ಮುಂದೂಡಿತು. ಪ್ರತಿಕ್ರಿಯೆ ನೀಡಲು ಏಪ್ರಿಲ್ 17ರವರೆಗೆ ಕಾಲಾವಕಾಶ ನೀಡುವಂತೆ ರಾಜ್ಯ ಸರ್ಕಾರ ಕಳೆದ ವಾರ ಕೋರಿತ್ತು.
ಮುಸ್ಲಿಮರಿಗೆ ಇದ್ದ ಶೇ 4ರಷ್ಟು ಮೀಸಲಾತಿಯನ್ನು ರದ್ದುಪಡಿಸಿ ಕರ್ನಾಟಕ ಸರ್ಕಾರವು ಮಾರ್ಚ್ 27ರಂದು ಆದೇಶ ಹೊರಡಿಸಿತ್ತು.ಇದನ್ನು ಪ್ರಶ್ನಿಸಿ ಎಲ್. ಗುಲಾಮ್ ರಸೂಲ್ ಮತ್ತು ಇತರರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಪ್ರಕರಣದ ವಿಚಾರಣೆ ನಡೆಸಿದ್ದ ಪೀಠವು, ‘ರಾಜ್ಯ ಸರ್ಕಾರದ ನಿರ್ಧಾರವು ದೋಷಪೂರಿತ ಹಾಗೂ ಪ್ರಮಾದದಿಂದ ಕೂಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ’ ಎಂದು ಕಳೆದ ಗುರುವಾರ ಹೇಳಿತ್ತು.
‘ಮಾರ್ಚ್ 27ರ ಆದೇಶದ ಆಧಾರದ ಮೇಲೆ ಯಾವುದೇ ಶೈಕ್ಷಣಿಕ ಸಂಸ್ಥೆಗಳಿಗೆ ಪ್ರವೇಶಾತಿ ನೀಡುವುದಿಲ್ಲ ಮತ್ತು ಯಾವುದೇ ಉದ್ಯೋಗಗಳಿಗೆ ನೇಮಕಾತಿ ಮಾಡುವುದಿಲ್ಲ’ ಎಂದು ಸರ್ಕಾರ ಭರವಸೆ ನೀಡಿತ್ತು.
ಮುಸ್ಲಿಮರಿಗೆ ಇದ್ದ ಶೇ 4ರಷ್ಟು ಮೀಸಲಾತಿಯನ್ನು ಲಿಂಗಾಯತರಿಗೆ ಹಾಗೂ ಒಕ್ಕಲಿಗರಿಗೆ ತಲಾ ಶೇ 2ರಷ್ಟು ಹಂಚುವ ನಿರ್ಣಯವನ್ನು ಕರ್ನಾಟಕ ಸರ್ಕಾರ ಮಾಡಿತ್ತು. ಮುಸ್ಲಿಮರನ್ನು ಆರ್ಥಿಕವಾಗಿ ದುರ್ಬಲ ವರ್ಗದ (ಇಡಬ್ಲ್ಯುಎಸ್) ಪಟ್ಟಿಗೆ ಸೇರಿಸುವ ನಿರ್ಧಾರವನ್ನೂ ತೆಗೆದುಕೊಂಡಿತ್ತು.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…