BREAKING NEWS

ಗೂಡ್ಸ್ ರೈಲುಗಳ ನಡುವೆ ಅಪಘಾತ : ಹಳಿ ತಪ್ಪಿದ 12 ಬೋಗಿಗಳು

ಕೋಲ್ಕತ್ತಾ : 2 ಗೂಡ್ಸ್ ರೈಲುಗಳ ನಡುವೆ ಡಿಕ್ಕಿಯಾದ ಪರಿಣಾಮ ರೈಲಿನ ಹಲವು ಬೋಗಿಗಳು ಹಳಿ ತಪ್ಪಿದ ಘಟನೆ ಪಶ್ಚಿಮ ಬಂಗಾಳದ ಬಂಕುರಾದಲ್ಲಿ ನಡೆದಿದೆ.

ಭಾನುವಾರ ಮುಂಜಾನೆ 4 ಗಂಟೆಯ ಸುಮಾರಿಗೆ ಘಟನೆ ನಡೆದಿದ್ದು, ಒಂದು ಗೂಡ್ಸ್ ರೈಲಿನ ಹಿಂಬದಿಗೆ ಇನ್ನೊಂದು ಗೂಡ್ಸ್ ರೈಲು ಡಿಕ್ಕಿ ಹೊಡೆದಿದೆ. ಘಟನೆಯಿಂದ ರೈಲಿನ 12 ಬೋಗಿಗಳು ಹಳಿತಪ್ಪಿವೆ. ಈ ರೈಲು ಅಪಘಾತದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಒಂದು ಗೂಡ್ಸ್ ರೈಲಿನ ಡ್ರೈವರ್‌ಗೆ ಅಪಘಾತದಿಂದ ಸಣ್ಣ ಪ್ರಮಾಣದ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ.

ರೈಲ್ವೆ ಅಧಿಕಾರಿಗಳ ಪ್ರಕಾರ, ಎರಡೂ ಗೂಡ್ಸ್ ರೈಲುಗಳು ಖಾಲಿಯಾಗಿದ್ದು, ಅಪಘಾತವಾಗಲು ಕಾರಣವೇನು ಎಂಬುದು ಸ್ಪಷ್ಟವಾಗಿ ತಿಳಿದುಬಂದಿಲ್ಲ. ಈ ಅವಘಡದಿಂದ ಆದ್ರಾ ವಿಭಾಗದ ರೈಲು ಸಂಚಾರಕ್ಕೆ ತೊಂದರೆಯಾಗಿದೆ. ಆದ್ರಾ ವಿಭಾಗವು ಪಶ್ಚಿಮ ಬಂಗಾಳದ 4 ಜಿಲ್ಲೆಗಳಿಗೆ ಸೇವೆ ಕಲ್ಪಿಸುತ್ತಿದೆ. ಇದು ಆಗ್ನೇಯ ರೈಲ್ವೆಯ ಅಡಿಯಲ್ಲಿ ಬರುತ್ತದೆ. ಅಲ್ಲದೇ ಪಶ್ಚಿಮ ಮಿಡ್ನಾಪುರ, ಬಂಕುರಾ, ಪುರುಲಿಯಾ ಮತ್ತು ಬುರ್ದ್ವಾನ್ ಮತ್ತು ಜಾರ್ಖಂಡ್‌ನ ಮೂರು ಜಿಲ್ಲೆಗಳಾದ ಧನ್‌ಬಾದ್, ಬೊಕಾರೋ ಮತ್ತು ಸಿಂಗ್‌ಭೂಮ್‌ಗೆ ಸಂಚಾರ ಕಲ್ಪಿಸಲಾಗಿತ್ತು.

ಪುರುಲಿಯಾ ಎಕ್ಸ್‌ಪ್ರೆಸ್‌ನಂತಹ ರೈಲುಗಳು ಈ ವಿಭಾಗದಿಂದ ಚಲಿಸುವ ಸಾಧ್ಯತೆಯಿದ್ದು, ರೈಲ್ವೆ ಅಧಿಕಾರಿಗಳು ಆದಷ್ಟು ಬೇಗ ಅಪ್‌ಲೈನ್ ಅನ್ನು ತೆರೆಯಲು ಪ್ರತ್ನಿಸುತ್ತಿದ್ದಾರೆ. ಒಡಿಶಾ ತ್ರಿವಳಿ ರೈಲು ದುರಂತ ಸಂಭವಿಸಿದ ಒಂದು ತಿಂಗಳಲ್ಲಿ ಈ ಅಪಘಾತ ಸಂಭವಿಸಿದೆ.

ಘಟನೆಯಿಂದಾಗಿ 14 ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ. ಅಲ್ಲದೇ 3 ರೈಲು ಮಾರ್ಗ ಬದಲಾವಣೆ ಮಾಡಿ ಸಂಚಾರ ಮಾಡಲಿದೆ. ಇನ್ನೂ 2 ರೈಲನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

lokesh

Recent Posts

ಇಂದು ಪೋಲೀಯೋ ಲಸಿಕಾ ಅಭಿಯಾನ

ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…

1 hour ago

ಮರುಳಯ್ಯನ ಕೊಪ್ಪಲು ಕೊಂತನಾಯಕರಿಗೆ ಬೇಡರ ಕಣ್ಣಪ್ಪನೇ ದೇವರು

ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…

2 hours ago

ಮೈಸೂರಲ್ಲಿ ಎಸ್.ಎಲ್. ಭೈರಪ್ಪನವರ ಸ್ಮಾರಕ ಹೇಗಿರಬೇಕು?

ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…

2 hours ago

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

11 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

11 hours ago