ಕೋಲ್ಕತ್ತಾ : 2 ಗೂಡ್ಸ್ ರೈಲುಗಳ ನಡುವೆ ಡಿಕ್ಕಿಯಾದ ಪರಿಣಾಮ ರೈಲಿನ ಹಲವು ಬೋಗಿಗಳು ಹಳಿ ತಪ್ಪಿದ ಘಟನೆ ಪಶ್ಚಿಮ ಬಂಗಾಳದ ಬಂಕುರಾದಲ್ಲಿ ನಡೆದಿದೆ.
ಭಾನುವಾರ ಮುಂಜಾನೆ 4 ಗಂಟೆಯ ಸುಮಾರಿಗೆ ಘಟನೆ ನಡೆದಿದ್ದು, ಒಂದು ಗೂಡ್ಸ್ ರೈಲಿನ ಹಿಂಬದಿಗೆ ಇನ್ನೊಂದು ಗೂಡ್ಸ್ ರೈಲು ಡಿಕ್ಕಿ ಹೊಡೆದಿದೆ. ಘಟನೆಯಿಂದ ರೈಲಿನ 12 ಬೋಗಿಗಳು ಹಳಿತಪ್ಪಿವೆ. ಈ ರೈಲು ಅಪಘಾತದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಒಂದು ಗೂಡ್ಸ್ ರೈಲಿನ ಡ್ರೈವರ್‌ಗೆ ಅಪಘಾತದಿಂದ ಸಣ್ಣ ಪ್ರಮಾಣದ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ.
ರೈಲ್ವೆ ಅಧಿಕಾರಿಗಳ ಪ್ರಕಾರ, ಎರಡೂ ಗೂಡ್ಸ್ ರೈಲುಗಳು ಖಾಲಿಯಾಗಿದ್ದು, ಅಪಘಾತವಾಗಲು ಕಾರಣವೇನು ಎಂಬುದು ಸ್ಪಷ್ಟವಾಗಿ ತಿಳಿದುಬಂದಿಲ್ಲ. ಈ ಅವಘಡದಿಂದ ಆದ್ರಾ ವಿಭಾಗದ ರೈಲು ಸಂಚಾರಕ್ಕೆ ತೊಂದರೆಯಾಗಿದೆ. ಆದ್ರಾ ವಿಭಾಗವು ಪಶ್ಚಿಮ ಬಂಗಾಳದ 4 ಜಿಲ್ಲೆಗಳಿಗೆ ಸೇವೆ ಕಲ್ಪಿಸುತ್ತಿದೆ. ಇದು ಆಗ್ನೇಯ ರೈಲ್ವೆಯ ಅಡಿಯಲ್ಲಿ ಬರುತ್ತದೆ. ಅಲ್ಲದೇ ಪಶ್ಚಿಮ ಮಿಡ್ನಾಪುರ, ಬಂಕುರಾ, ಪುರುಲಿಯಾ ಮತ್ತು ಬುರ್ದ್ವಾನ್ ಮತ್ತು ಜಾರ್ಖಂಡ್‌ನ ಮೂರು ಜಿಲ್ಲೆಗಳಾದ ಧನ್‌ಬಾದ್, ಬೊಕಾರೋ ಮತ್ತು ಸಿಂಗ್‌ಭೂಮ್‌ಗೆ ಸಂಚಾರ ಕಲ್ಪಿಸಲಾಗಿತ್ತು.
ಪುರುಲಿಯಾ ಎಕ್ಸ್‌ಪ್ರೆಸ್‌ನಂತಹ ರೈಲುಗಳು ಈ ವಿಭಾಗದಿಂದ ಚಲಿಸುವ ಸಾಧ್ಯತೆಯಿದ್ದು, ರೈಲ್ವೆ ಅಧಿಕಾರಿಗಳು ಆದಷ್ಟು ಬೇಗ ಅಪ್‌ಲೈನ್ ಅನ್ನು ತೆರೆಯಲು ಪ್ರತ್ನಿಸುತ್ತಿದ್ದಾರೆ. ಒಡಿಶಾ ತ್ರಿವಳಿ ರೈಲು ದುರಂತ ಸಂಭವಿಸಿದ ಒಂದು ತಿಂಗಳಲ್ಲಿ ಈ ಅಪಘಾತ ಸಂಭವಿಸಿದೆ.
ಘಟನೆಯಿಂದಾಗಿ 14 ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ. ಅಲ್ಲದೇ 3 ರೈಲು ಮಾರ್ಗ ಬದಲಾವಣೆ ಮಾಡಿ ಸಂಚಾರ ಮಾಡಲಿದೆ. ಇನ್ನೂ 2 ರೈಲನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…