Mysore
19
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಬೆಂ-ಮೈ ದಶಪಥ ಹೆದ್ದಾರಿಯಲ್ಲಿ ಅಪಘಾತ ಇಳಿಕೆಯಾಗಿದೆ : ಎಡಿಜಿಪಿ ಅಲೋಕ್‌ ಕುಮಾರ್‌

ರಾಮನಗರ : ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಪೊಲೀಸ್‌ ಇಲಾಖೆ ಕೈಗೊಂಡ ಕ್ರಮಗಳಿಂದಾಗಿ ಅಪಘಾತಗಳ ಸಂಖ್ಯೆ ಹಂತಹಂತವಾಗಿ ಇಳಿಮುಖವಾಗುತ್ತಿದೆ ಎಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್‌ ಕುಮಾರ್‌ ಟ್ವೀಟ್‌ ಮಾಡಿದ್ದಾರೆ.

ಜುಲೈ ತಿಂಗಳಲ್ಲಿ ದಶಪಥ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತಗಳಲ್ಲಿ 8 ಮಂದಿ ಮೃತಪಟ್ಟಿದ್ದಾರೆ. ಮೇ ತಿಂಗಳಿನಲ್ಲಿ 29 ಮತ್ತು ಜೂನ್‌ ತಿಂಗಳಿನಲ್ಲಿ 28 ಮಂದಿ ಮೃತಪಟ್ಟಿದ್ದರು.ಈ ಸಂಖ್ಯೆಯನ್ನು ಮತ್ತಷ್ಟು ತಗ್ಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ದಶಪಥ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಳವಾದ ಒಂದು ತಿಂಗಳ ಅಂತರದಲ್ಲಿ ಎಡಿಜಿಪಿ ಅಲೋಕ್‌ ಕುಮಾರ್‌ ಎರಡು ಬಾರಿ ಈ ಹೆದ್ದಾರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.ಅದರ ಬೆನ್ನಲ್ಲೇ ಅಪಘಾತ,ಸಾವು ನೋವುಗಳ ಸಂಖ್ಯೆ ಕೊಂಚ ಕಡಿಮೆಯಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ