BREAKING NEWS

ಸಂಸತ್‌ ಭದ್ರತಾ ಲೋಪ; 4 ಡಿಗ್ರಿ ಹೊಂದಿದ್ದ ನೀಲಮ್‌ ಅಜಾದ್‌; ಈ ಹಿಂದೆಯೂ ಪ್ರತಿಭಟಿಸಿ ಬಂಧನಕ್ಕೊಳಗಾಗಿದ್ರು!

ಸಂಸತ್ ಭವನಕ್ಕೆ ನುಗ್ಗಿ ಬಣ್ಣದ ಹೊಗೆ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರತಾ ಅಧಿಕಾರಿಗಳು ನಾಲ್ವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಮೈಸೂರಿನ ಮನೋರಂಜನ್, ಸಾಗರ್ ಶರ್ಮಾ, ಅಮೋಲ್ ಶಿಂಧೆ, ನೀಲಮ್ ಸೇರಿದಂತೆ ಒಟ್ಟು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಈ ಪೈಕಿ ನೀಲಮ್‌ ತಾಯಿ ನೀಡಿರುವ ಮಾಹಿತಿ ಪ್ರಕಾರ ನೀಲಮ್‌ ನಿರುದ್ಯೋಗದ ಬಗ್ಗೆ ಚಿಂತಿತಳಾಗಿದ್ದಳು. ಒಳ್ಳೆಯ ವಿದ್ಯಾಭ್ಯಾಸ ಪಡೆದರೂ ಕೆಲಸ ಸಿಗುತ್ತಿಲ್ಲ, ಇದಕ್ಕಿಂತ ಸಾಯುವುದೇ ಒಳ್ಳೆಯದು ಎಂದು ತನ್ನ ತಾಯಿಯ ಬಳಿ ನೀಲಮ್‌ ಹೇಳಿದ್ದಳಂತೆ. ಇನ್ನು ಹರಿಯಾಣದ ಜಿಂದ್‌ ಮೂಲದ ನೀಲಮ್‌ 30 ವರ್ಷ ವಯಸ್ಸಿನವಳಾಗಿದ್ದು ಬಿಎ, ಎಂಎ, ಬಿಎಡ್‌, ಎಂಎಡ್‌ ಹಾಗೂ ನೀಟ್‌ ಪದವಿಗಳನ್ನು ಹೊಂದಿದ್ದಾಳೆ. ಇದಾದ ಬಳಿಕ ಹಲವಾರು ದಿನಗಳ ಕಾಲ ನಿರುದ್ಯೋಗಿಯಾಗಿದ್ದ ನೀಲಮ್ ಹರಿಯಾಣ ನಾಗರೀಕ ಸೇವೆಗಳ ಪರೀಕ್ಷೆಗೂ ಸಹ ಸಿದ್ಧತೆಪಡಿಸಿಕೊಳ್ಳುತ್ತಿದ್ದಳಂತೆ.

ಈಕೆಯ ಕುರಿತು ಮಾತನಾಡಿರುವ ಕುಟುಂಬಸ್ಥರು ಈಕೆಗೆ ಯಾವುದೇ ಸಂಘಟನೆಗಳ ಜತೆ ಹಾಗೂ ಪಕ್ಷಗಳ ಜತೆ ನಂಟಿಲ್ಲ ಎಂದು ಹೇಳಿದ್ದು ಈ ಹಿಂದೆ 2020-2021ರಲ್ಲಿ ಪಂಜಾಬ್‌ನಲ್ಲಿ ನಡೆದಿದ್ದ ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಳು ಹಾಗೂ ಇದೇ ವರ್ಷ ನಡೆದಿದ್ದ ರೆಸ್ಲರ್ಸ್‌ ಪ್ರತಿಭಟನೆಯಲ್ಲಿಯೂ ಸಹ ಭಾಗವಹಿಸಿದ್ದಳು ಎಂಬುದನ್ನು ಒಪ್ಪಿಕೊಂಡಿದ್ದಾರೆ. ಅಲ್ಲದೇ ಈ ಎರಡೂ ಪ್ರತಿಭಟನೆಯಲ್ಲಿಯೂ ನೀಲಮ್‌ ಬಂಧನಕ್ಕೊಳಗಾಗಿದ್ದಳು.

andolana

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

9 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

10 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

11 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

13 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

13 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

17 hours ago