BREAKING NEWS

ಜನರಿಂದ ಅರ್ಜಿ ಸ್ವೀಕರಿಸಿದರೆ ಕಡ್ಡಾಯವಾಗಿ ಸ್ವೀಕೃತಿ ಪತ್ರ ನೀಡಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ

ಹಾಸನ : ಜನರಿಂದ ಅರ್ಜಿ ಸ್ವೀಕರಿಸುವ ಅಧಿಕಾರಿಗಳು ಕಡ್ಡಾಯವಾಗಿ ಸ್ವೀಕೃತಿ ಪತ್ರ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಹಾಸನ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಮುಖ್ಯಮಂತ್ರಿ, ಸಣ್ಣ ಪುಟ್ಟ ಸಮಸ್ಯೆಗಳಿಗಾಗಿ ಜನರು ಬೆಂಗಳೂರಿನವರೆಗೂ ನನ್ನನ್ನು ಹುಡುಕಿಕೊಂಡು ಬರುವ ಪರಿಸ್ಥಿತಿ ನಿರ್ಮಾಣವಾಗಬಾರದು. ಸ್ಥಳೀಯ ಸಮಸ್ಯೆಗಳನ್ನು ಸಕಾಲದಲ್ಲಿ ಪರಿಹರಿಸಬೇಕು. ರೈತರು ಮತ್ತು ಶ್ರಮಿಕರ ಸಮಸ್ಯೆಗಳು ಬಹುತೇಕ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲೇ ಬಗೆಹರಿಸಬೇಕು ಎಂದರು.

ಅನಗತ್ಯ ಸತಾಯಿಸುವ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಯಾವುದೇ ಪ್ರಭಾವಕ್ಕೂ ಮಣಿಯುವುದಿಲ್ಲ. ಕಠಿಣ ಕ್ರಮ ಖಚಿತ. ಜನರ ಮನೆ ಬಾಗಿಲಿಗೆ ಸರ್ಕಾರವನ್ನು ತಲುಪಿಸಬೇಕು. ಜನರನ್ನು ಸರ್ಕಾರಿ ಕಚೇರಿಗೆ ಅಲೆದಾಡಿಸುವುದು ಭ್ರಷ್ಟಾಚಾರ. ಜನರಿಗೆ ಅಧಿಕಾರಿಗಳ ಅನುಕಂಪ ಬೇಕಾಗಿಲ್ಲ. ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿದರೆ ಸಾಕು. ಅಧಿಕಾರಿಗಳು ಮತ್ತು ನಾವು ಜನರ ಸೇವಕರು. ಜನರೇ ನಮ್ಮ ಮಾಲೀಕರು. ಜನರ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ತೋರಿಸಿದರೆ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಸರ್ಕಾರ ಎಲ್ಲಾ ವರ್ಗ, ಎಲ್ಲಾ ಜಾತಿ, ಎಲ್ಲಾ ಧರ್ಮಗಳಿಗೂ ಕಾರ್ಯಕ್ರಮಗಳನ್ನು ರೂಪಿಸಿದ್ದು, ಅವುಗಳನ್ನು  ಜನರಿಗೆ ತಲುಪಿಸುವ ಪ್ರಾಮಾಣಿಕ ಕೆಲಸ ಮಾಡಬೇಕು ಎಂದು ನಿರ್ದೇಶಿಸಿದರು.

ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಯ ಸಾಧನೆ ಶೇ100 ರಷ್ಟು ಸಾಧಿಸಬೇಕು. ಆದರೆ ಹಾಸನ ಜಿಲ್ಲೆಯಲ್ಲಿ ಇನ್ನೂ ಶೇ.90 ರಷ್ಟಕ್ಕೆ ನಿಂತಿದೆ. ಇದನ್ನು ಶೇ 100 ರಷ್ಟು ಪೂರೈಸಬೇಕು. ನೋಂದಣಿ ಮಾಡಿಸಿರುವ ಪ್ರತಿಯೊಬ್ಬರಿಗೂ ಗ್ಯಾರಂಟಿ ಸ್ಕೀಂಗಳು ತಲುಪಬೇಕು.  ಹಾಸನ, ಅರಸೀಕರೆ, ಅರಕಲಗೂಡು ತಾಲ್ಲೂಕುಗಳಲ್ಲಿ ಗ್ಯಾರಂಟಿ ಯೋಜನೆಗಳು ಶೇ 90 ರಷ್ಟನ್ನೂ ತಲುಪದೆ ಇರಲು ಯಾರು ಹೊಣೆ? ಎಂದು ಅಧಿಕಾರಿಗಳು ಮುಖ್ಯಮಂತ್ರಿ ಪ್ರಶ್ನಿಸಿದರು.

https://x.com/CMofKarnataka/status/1721858222355833274?s=20

andolanait

Recent Posts

ಇನ್ನೊಂದು ವಾರದೊಳಗೆ ಸಿಎಂ ನಿವಾಸ ಖಾಲಿ ಮಾಡಲಿರುವ ಅರವಿಂದ್‌ ಕೇಜ್ರಿವಾಲ್‌

ನವದೆಹಲಿ: ದೆಹಲಿ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರು, ಇನ್ನು ಒಂದು ವಾರದೊಳಗೆ ಸಿಎಂ ಅಧಿಕೃತ ನಿವಾಸ ಖಾಲಿ ಮಾಡಲಿದ್ದಾರೆ.…

4 mins ago

ಶೋಭಾ ಕರಂದ್ಲಾಜೆ ಹಾಗೂ ಆರ್.ಅಶೋಕ್‌ ವಿರುದ್ಧ ಎಫ್‌ಐಆರ್‌

ಮಂಡ್ಯ: ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್‌ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.…

7 mins ago

ಒಂದು ದೇಶ, ಒಂದು ಚುನಾವಣೆ ಯೋಜನೆಗೆ ಅಸಾದುದ್ದೀನ್ ಓವೈಸಿ ಕಿಡಿ

ನವದೆಹಲಿ: ಒಂದು ದೇಶ, ಒಂದು ಚುನಾವಣೆ ಯೋಜನೆಗೆ ಎಐಎಂಐಎಂ ನಾಯಕ ಅಸಾದುದ್ದೀನ್‌ ಓವೈಸಿ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ…

15 mins ago

ಇಂದು ಮುನಿರತ್ನ ಜಾಮೀನು ಅರ್ಜಿ ಆದೇಶ

ಬೆಂಗಳೂರು: ಪರಿಶಿಷ್ಟ ಜಾತಿ ನಿಂದನೆ ಹಾಗೂ ಮಹಿಳೆಯರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದಡಿ ನ್ಯಾಯಾಂಗ ಬಂಧನಲ್ಲಿರುವ ಬಿಜೆಪಿ ಶಾಸಕ ಮುನಿರತ್ನ…

19 mins ago

ಒಂದು ದೇಶ, ಒಂದು ಚುನಾವಣೆ ವ್ಯವಸ್ಥೆಗೆ ಸ್ವಾಗತ, ಮೋದಿಯವರ ಭಯದಿಂದ ಈ ಕ್ರಮ ವಿರೋಧಿಸುತ್ತಿರುವ ಕಾಂಗ್ರೆಸ್‌: ಆರ್‌.ಅಶೋಕ

ರಾಹುಲ್‌ ಗಾಂಧಿಯವರಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ ಬೆಂಗಳೂರು: ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ…

7 hours ago

ರೀಲ್ಸ್‌ ಪ್ರಿಯರಿಗೆ ಭರ್ಜರಿ ಆಫರ್:‌ ರೀಲ್ಸ್ ಟ್ಯಾಗ್ ಮಾಡಿ ಬಹುಮಾನ ಗೆಲ್ಲಿ

ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್‌ ಸೆ. 27 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು…

7 hours ago