BREAKING NEWS

ಜಾಲತಾಣದಲ್ಲಿ ಕೋರ್ಟ್ ಕಲಾಪ ಹಕ್ಕು ಸ್ವಾಮ್ಯ ರಕ್ಷಣೆಗೆ ಕ್ರಮ: ಸುಪ್ರೀಂ ಕೋರ್ಟ್‌

ನವದೆಹಲಿ: ಯೂಟ್ಯೂಬ್ ಜಾಲತಾಣದ ಮೂಲಕ ನೇರಪ್ರಸಾರವಾಗುವ ಕೋರ್ಟ್‌ನ ಕಲಾಪಗಳ ಹಕ್ಕುಸ್ವಾಮ್ಯವನ್ನು ಕಾಯ್ದುಕೊಳ್ಳಲು ಕ್ರಮವಹಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ತಿಳಿಸಿತು.

2018ರ ತೀರ್ಪಿಗೆ ಅನುಗುಣವಾಗಿ ಈ ಬಗ್ಗೆ ಕ್ರಮತೆಗೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದ ಸುಪ್ರೀಂ ಕೋರ್ಟ್‌ನ ಪೀಠವು, ಈ ಕುರಿತು ಆರ್‌ಎಸ್‌ಎಸ್‌ನ ಚಿಂತಕ ಕೆ.ಎನ್.ಗೋವಿಂದಾಚಾರ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಲೇವಾರಿ ಮಾಡಿತು.

ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಮತ್ತು ನ್ಯಾಯಮೂರ್ತಿಗಳಾದ ಪಿ.ಎಸ್‌.ನರಸಿಂಹ, ಜೆ.ಬಿ.ಪಾರ್ದಿವಾಲಾ ಅವರಿದ್ದ ಪೀಠವು, ಅರ್ಜಿದಾರರು ಎತ್ತಿರುವ ಆಕ್ಷೇಪಗಳನ್ನು ಗಮನದಲ್ಲಿ ಇರಿಸಿಕೊಂಡು ಹಕ್ಕುಸ್ವಾಮ್ಯ ರಕ್ಷಿಸುವ ವ್ಯವಸ್ಥೆ ರೂಪಿಸಲು ಸೂಚಿಸಲಾಗಿದೆ ಎಂದು ತಿಳಿಸಿತು.

‘ಅಗತ್ಯ ಸಲಹೆಗಳನ್ನು ನೀವೂ ನೀಡಬಹುದು’ ಎಂದು ಗೋವಿಂದಾಚಾರ್ಯ ಅವರನ್ನು ಪ್ರತಿನಿಧಿಸಿದ್ದ ವಕೀಲರಾದ ವಿರಾಗ್ ಗುಪ್ತಾ ಅವರಿಗೆ ಪೀಠ ತಿಳಿಸಿತು. ಹೆಚ್ಚುವರಿ ಸಾಲಿಸಿಟರ್ ಜನರಲ್‌ ಐಶ್ವರ್ಯ ಭಾಟಿ ಅವರು ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ್ದರು.

‘ನೇರ ಪ್ರಸಾರದ ಹಕ್ಕುಸ್ವಾಮ್ಯ ರಕ್ಷಣೆಗೆ 2018ರ ತೀರ್ಪಿಗೆ ಅನುಗುಣವಾಗಿ ಕೋರ್ಟ್‌ನ ರಿಜಿಸ್ಟ್ರಿಯು ಯಾವುದೇ ಕ್ರಮವಹಿಸಿಲ್ಲ ಎಂದು ಟೀಕಿಸುವುದು ಸುಲಭ. ಆದರೆ, ಥರ್ಡ್‌ ಪಾರ್ಟಿ ತಂತ್ರಾಂಶಗಳ ನೆರವಿಲ್ಲದೆ ನೇರ ಪ್ರಸಾರ ಮಾಡುವಷ್ಟು ತಾಂತ್ರಿಕ ಮೂಲಸೌಕರ್ಯ ನಮ್ಮಲ್ಲಿ ಇಲ್ಲ ಎಂದು ಎಂದು ಎನ್‌ಐಸಿ ಹೇಳಿದೆ. ಈ ಹಂತದಲ್ಲಿ ಏನು ಕ್ರಮವಹಿಸಬೇಕು ಎಂದೂ ನೀವು ಸಲಹೆ ನೀಡಿ ಎಂದೂ ಪೀಠ ಗೋವಿಂದಾಚಾರ್ಯ ಅವರ ವಕೀಲರಿಗೆ ತಿಳಿಸಿತು.

ಗೋವಿಂದಾಚಾರ್ಯ ಅವರು ತಮ್ಮ ಅರ್ಜಿಯಲ್ಲಿ, ನೇರಪ್ರಸಾರ ವಿಷಯದಲ್ಲಿ ಕಲಾಪದ ಹಕ್ಕುಸ್ವಾಮ್ಯ ಉಳಿಸಿಕೊಳ್ಳಬೇಕು. ಕಲಾಪದ ಮುದ್ರಣವನ್ನು ಜಾಲತಾಣವು, ಸದ್ಯ (ಯೂಟ್ಯೂಬ್) ವಾಣಿಜ್ಯದ ದೃಷ್ಟಿಯಿಂದ ಬಳಸದಂತೆ ಎಚ್ಚರವಹಿಸಬೇಕು ಎಂದು ಪ್ರತಿಪಾದಿಸಿದ್ದರು.

 

andolanait

Recent Posts

ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ

ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…

59 mins ago

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…

3 hours ago

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…

3 hours ago

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…

3 hours ago

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತ ಮಹಿಳೆಯರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…

3 hours ago

ಅಕ್ರಮ ವಿದ್ಯುತ್‌ ಸಂಪರ್ಕ: 31 ಪ್ರಕರಣ ದಾಖಲು, 2.17 ಲಕ್ಷ ರೂ. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…

4 hours ago