ನವದೆಹಲಿ: ಯೂಟ್ಯೂಬ್ ಜಾಲತಾಣದ ಮೂಲಕ ನೇರಪ್ರಸಾರವಾಗುವ ಕೋರ್ಟ್‌ನ ಕಲಾಪಗಳ ಹಕ್ಕುಸ್ವಾಮ್ಯವನ್ನು ಕಾಯ್ದುಕೊಳ್ಳಲು ಕ್ರಮವಹಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ತಿಳಿಸಿತು.
2018ರ ತೀರ್ಪಿಗೆ ಅನುಗುಣವಾಗಿ ಈ ಬಗ್ಗೆ ಕ್ರಮತೆಗೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದ ಸುಪ್ರೀಂ ಕೋರ್ಟ್‌ನ ಪೀಠವು, ಈ ಕುರಿತು ಆರ್‌ಎಸ್‌ಎಸ್‌ನ ಚಿಂತಕ ಕೆ.ಎನ್.ಗೋವಿಂದಾಚಾರ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಲೇವಾರಿ ಮಾಡಿತು.
ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ.ಎಸ್.ನರಸಿಂಹ, ಜೆ.ಬಿ.ಪಾರ್ದಿವಾಲಾ ಅವರಿದ್ದ ಪೀಠವು, ಅರ್ಜಿದಾರರು ಎತ್ತಿರುವ ಆಕ್ಷೇಪಗಳನ್ನು ಗಮನದಲ್ಲಿ ಇರಿಸಿಕೊಂಡು ಹಕ್ಕುಸ್ವಾಮ್ಯ ರಕ್ಷಿಸುವ ವ್ಯವಸ್ಥೆ ರೂಪಿಸಲು ಸೂಚಿಸಲಾಗಿದೆ ಎಂದು ತಿಳಿಸಿತು.
‘ಅಗತ್ಯ ಸಲಹೆಗಳನ್ನು ನೀವೂ ನೀಡಬಹುದು’ ಎಂದು ಗೋವಿಂದಾಚಾರ್ಯ ಅವರನ್ನು ಪ್ರತಿನಿಧಿಸಿದ್ದ ವಕೀಲರಾದ ವಿರಾಗ್ ಗುಪ್ತಾ ಅವರಿಗೆ ಪೀಠ ತಿಳಿಸಿತು. ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ ಅವರು ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ್ದರು.
‘ನೇರ ಪ್ರಸಾರದ ಹಕ್ಕುಸ್ವಾಮ್ಯ ರಕ್ಷಣೆಗೆ 2018ರ ತೀರ್ಪಿಗೆ ಅನುಗುಣವಾಗಿ ಕೋರ್ಟ್‌ನ ರಿಜಿಸ್ಟ್ರಿಯು ಯಾವುದೇ ಕ್ರಮವಹಿಸಿಲ್ಲ ಎಂದು ಟೀಕಿಸುವುದು ಸುಲಭ. ಆದರೆ, ಥರ್ಡ್ ಪಾರ್ಟಿ ತಂತ್ರಾಂಶಗಳ ನೆರವಿಲ್ಲದೆ ನೇರ ಪ್ರಸಾರ ಮಾಡುವಷ್ಟು ತಾಂತ್ರಿಕ ಮೂಲಸೌಕರ್ಯ ನಮ್ಮಲ್ಲಿ ಇಲ್ಲ ಎಂದು ಎಂದು ಎನ್‌ಐಸಿ ಹೇಳಿದೆ. ಈ ಹಂತದಲ್ಲಿ ಏನು ಕ್ರಮವಹಿಸಬೇಕು ಎಂದೂ ನೀವು ಸಲಹೆ ನೀಡಿ ಎಂದೂ ಪೀಠ ಗೋವಿಂದಾಚಾರ್ಯ ಅವರ ವಕೀಲರಿಗೆ ತಿಳಿಸಿತು.
ಗೋವಿಂದಾಚಾರ್ಯ ಅವರು ತಮ್ಮ ಅರ್ಜಿಯಲ್ಲಿ, ನೇರಪ್ರಸಾರ ವಿಷಯದಲ್ಲಿ ಕಲಾಪದ ಹಕ್ಕುಸ್ವಾಮ್ಯ ಉಳಿಸಿಕೊಳ್ಳಬೇಕು. ಕಲಾಪದ ಮುದ್ರಣವನ್ನು ಜಾಲತಾಣವು, ಸದ್ಯ (ಯೂಟ್ಯೂಬ್) ವಾಣಿಜ್ಯದ ದೃಷ್ಟಿಯಿಂದ ಬಳಸದಂತೆ ಎಚ್ಚರವಹಿಸಬೇಕು ಎಂದು ಪ್ರತಿಪಾದಿಸಿದ್ದರು.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…