BREAKING NEWS

ಜೆನರಿಕ್‌ ಔಷಧ ಬರೆಯದಿದ್ದರೆ ಕ್ರಮ: ಸರಕಾರಿ ಆಸ್ಪತ್ರೆ ವೈದ್ಯರಿಗೆ ಕೇಂದ್ರದ ಎಚ್ಚರಿಕೆ

ನವದೆಹಲಿ: ಕೇಂದ್ರ ಸರಕಾರ ನಡೆಸುವ ಆಸ್ಪತ್ರೆಗಳು ಮತ್ತು ಆರೋಗ್ಯ ಕೇಂದ್ರಗಳಲ್ಲಿ ರೋಗಿಗಳಿಗೆ ಜೆನರಿಕ್‌ ಔಷಧಗಳನ್ನು ಬರೆದುಕೊಡದ ವೈದ್ಯರ ವಿರುದ್ಧ ಕ್ರಮ ಜರುಗಿಸುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಎಚ್ಚರಿಸಿದೆ.

ಜೆನರಿಕ್‌ ಔಷಧಗಳನ್ನು ಮಾತ್ರ ಬರೆಯುವಂತೆ ಕೇಂದ್ರ ಸರಕಾರಿ ಆಸ್ಪತ್ರೆಗಳು, ಕೇಂದ್ರ ಸರಕಾರ ಆರೋಗ್ಯ ಯೋಜನೆ (ಸಿಜಿಎಚ್‌ಎಸ್‌) ಅಡಿಯ ‘ಕ್ಷೇಮ ಕೇಂದ್ರಗಳು’ ಮತ್ತು ಪಾಲಿ ಕ್ಲಿನಿಕ್‌ಗಳ ವೈದ್ಯರಿಗೆ ಹಲವು ಬಾರಿ ಸೂಚನೆ ನೀಡಲಾಗಿದೆ. ಆದರೂ ವೈದ್ಯರು ಕೆಲವು ಸಂದರ್ಭಗಳಲ್ಲಿ ಬ್ರಾಂಡೆಡ್‌ ಔಷಧ ಬರೆಯುವುದನ್ನು ಮುಂದುವರೆಸಿದ್ದಾರೆ.
ಉನ್ನತ ಅಧಿಕಾರಿಗಳ ತನಿಖೆಯಲ್ಲಿ ಈ ವಿಚಾರ ಖಚಿತಪಟ್ಟ ಹಿನ್ನೆಲೆಯಲ್ಲಿ ಮತ್ತೊಮ್ಮೆ ಎಚ್ಚರಿಕೆ ರವಾನಿಸಲಾಗಿದೆ,” ಎಂದು ಆರೋಗ್ಯ ಸೇವೆಗಳ ಮಹಾನಿರ್ದೇಶಕ ಡಾ ಅತುಲ್‌ ಗೋಯೆಲ್‌ ಹೇಳಿದ್ದಾರೆ.
ಎಲ್ಲಾ ಸಂಸ್ಥೆಗಳ ಮುಖ್ಯಸ್ಥರು ಈ ಸೂಚನೆಯನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ಅಧೀನ ವೈದ್ಯರು ಕಟ್ಟುನಿಟ್ಟಾಗಿ ಪಾಲಿಸುವಂತೆ ನೋಡಿಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದೆ.

ಅಲ್ಲದೆ, ಯಾವುದೇ ಖಾಸಗಿ ಔಷಧ ಕಂಪನಿಯ ಪ್ರತಿನಿಧಿಗಳು ಸರಕಾರಿ ಆಸ್ಪತ್ರೆಗಳ ಆವರಣಕ್ಕೆ ಬರದಂತೆ ಸೂಕ್ತ ಕ್ರಮ ವಹಿಸುವಂತೆಯೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.

andolanait

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

4 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

4 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

5 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

5 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

5 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

9 hours ago