Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಹೆಣ್ಣುಮಕ್ಕಳ ಬಟ್ಟೆ ಕುರಿತು ಸಲ್ಮಾನ್ ಹೇಳಿಕೆಗೆ ನಟ ಚೇತನ್ ಅಹಿಂಸಾ ಕಿಡಿ

ಬೆಂಗಳೂರು : ಬಾಲಿವುಡ್ ಬ್ಯಾಡ್ ಬಾಯ್ ಸಲ್ಮಾನ್ ಖಾನ್ ಹೆಣ್ಮಕ್ಕಳ ಬಟ್ಟೆ ವಿಚಾರವಾಗಿ ನೀಡಿರುವ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಸಲ್ಮಾನ್ ಖಾನ್ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಆಗಾಗ ವಿವಾದಾತ್ಮಕ ಹೇಳಿಕೆ ಮೂಲಕ ಸದ್ದು ಮಾಡುವ ಸಲ್ಮಾನ್ ಖಾನ್ ಇದೀಗ ಮಹಿಳೆರಯ ಬಟ್ಟೆ ವಿಚಾರ ಮಾತಾಡಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಲವು ದಿನಗಳ ಹಿಂದೆ ನಟಿ ಪಲಕ್​ ತಿವಾರಿ ಶೂಟಿಂಗ್ ಸೆಟ್ ನಲ್ಲಿ ಹೆಣ್ಮಕ್ಕಳು ಮೈ ತುಂಬಾ ಬಟ್ಟೆ ಹಾಕಿಕೊಂಡು ಬರಬೇಕು ಎಂದು ಸಲ್ಮಾನ್ ಖಾನ್ ನಿಯಮ ಮಾಡಿದ್ದರು ಎಂದು ಹೇಳಿದ್ದರು. ಆ ಬಗ್ಗೆ ಸ್ವತಃ ಸಲ್ಮಾನ್​ ಖಾನ್​ ಮೌನ ಮುರಿದಿದ್ದಾರೆ. ಸಂದರ್ಶನದಲ್ಲಿ ಮಾತನಾಡಿದ ಸಲ್ಮಾನ್ ಖಾನ್ ಮಹಿಳೆಯರು ಮೈ ತುಂಬ ಬಟ್ಟೆ ಧರಿಸಬೇಕು ಎಂದು ಹೇಳಿದ್ದಾರೆ.

ಸಲ್ಮಾನ್ ಖಾನ್ ಹೇಳಿಕೆಗೆ ಸ್ಯಾಂಡಲ್ ವುಡ್ ನಟ ಚೇತನ್ ಅಹಿಂಸಾ ಕಿಡಿ ಹಾಕಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಚೇತನ್, ಸಲ್ಮಾನ್ ಖಾನ್ ಮಾತು ಅತ್ಯಂತ ವ್ಯಂಗ್ಯವಾಗಿದೆ ಎಂದು ಹೇಳಿದ್ದಾರೆ. ಅಷ್ಟೆಯಲ್ಲದೇ ನೈತಿಕ ಪೊಲೀಸ್‌ಗಿರಿ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಮಹಿಳೆಯರ ದೇಹವು ಅಮೂಲ್ಯ, ದೇಹವನ್ನು ಅವರು ಹೆಚ್ಚು ಮುಚ್ಚಿಕೊಂಡಷ್ಟೂ ಒಳ್ಳೆಯದು’ ಎಂದು ಫಿಲ್ಮ್ ಸ್ಟಾರ್ ಸಲ್ಮಾನ್ ಖಾನ್ ಹೇಳಿದ್ದಾರೆ. ಅವರ ಈ ಮಾತು ಅತ್ಯಂತ ವ್ಯಂಗ್ಯವಾಗಿ ಕಾಣುತ್ತಿದೆ. ತನ್ನ ವೈಯಕ್ತಿಕ ದುರ್ವರ್ತನೆಗಳು ಮತ್ತು ಮಹಿಳೆಯರ ದೇಹದೊಂದಿಗೆ ಪ್ರಶ್ನಾರ್ಹ ವಿಧಾನಗಳಿಗೆ ಹೆಸರುವಾಸಿಯಾಗಿರುವ ಸಲ್ಮಾನ್ ಖಾನ್, ಈಗ ಮಹಿಳೆಯರು ಹೇಗೆ ಬಟ್ಟೆ ಧರಿಸಬೇಕು ಎಂಬುದರ ಕುರಿತು ನೈತಿಕ ಪೊಲೀಸ್‌ಗಿರಿ ಮಾಡುತ್ತಿದ್ದಾರೆ ಎಂದು ಚೇತನ್ ಕಿಡಿ ಕಾರಿದ್ದಾರೆ.
ಸಲ್ಮಾನ್ ಖಾನ್ ಈ ರೀತಿ ಮಾತನಾಡುವುದರಿಂದ ಅವರ ಅಜ್ಞಾನ, ಬೂಟಾಟಿಕೆ, ಮತ್ತು ಪುರಷಪ್ರಧಾನ ಮನಸ್ಥಿತಿಯು ಹೆಚ್ಚು ಸ್ಪಷ್ಟವಾಗಿ ಕಾಣುತ್ತಿದೆ ಎಂದು ಚೇತನ್ ಅಹಿಂಸ ಅಸಮಾಧಾನ ಹೊರಹಾಕಿದ್ದಾರೆ.

ಸಲ್ಮಾನ್ ಖಾನ್ ಹೇಳಿದ್ದೇನು? : ಸಂದರ್ಶನದಲ್ಲಿ ಸಲ್ಮಾನ್ ಖಾನ್, ‘ಮಹಿಳೆಯ ದೇಹ ಪವಿತ್ರವಾದುದು. ಅದನ್ನು ಎಷ್ಟು ಮುಚ್ಚಿಟ್ಟುಕೊಳ್ಳುತ್ತೀರೋ ಅಷ್ಟು ಉತ್ತಮ’ ಎಂದು ಹೇಳಿದ್ದರು. ‘ಸಮಸ್ಯೆ ಇರುವುದು ಹುಡುಗಿಯರಲ್ಲಿ ಅಲ್ಲ. ಸಮಸ್ಯೆ ಇರುವುದು ಹುಡುಗರಲ್ಲಿ. ನಿಮ್ಮ ತಾಯಿ, ತಂಗಿ, ಪತ್ನಿಯನ್ನು ಹುಡುಗರು ಆ ದೃಷ್ಟಿಯಿಂದ ನೋಡುವುದು ನನಗೆ ಇಷ್ಟ ಆಗುವುದಿಲ್ಲ’ ಎಂದು ಸಲ್ಮಾನ್ ಖಾನ್ ಹೇಳಿದ್ದರು.

ನೆಟ್ಟಿಗರ ಆಕ್ರೋಶ : ಸಲ್ಮಾನ್ ಖಾನ್ ಈ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗುತ್ತಿದೆ. ನೆಟ್ಟಿಗರು ಬ್ಯಾಡ್ ಬಾಯ್‌ಯನ್ನು ತರಾಟೆ ತೆಗೆದುಕೊಂಡಿದ್ದಾರೆ. ಹೆಣ್ಮಕ್ಕಳ ಮೇಲೆ ದೌರ್ಜನ್ಯ ಮಾಡಿದವರು ಮಹಿಳೆಯ ಬಗ್ಗೆ ಮಾತನಾಡುತ್ತಾರೆ ಎಂದು ಹೇಳಿದ್ದಾರೆ. ಇದೆಲ್ಲ ಬೂಟಾಟಿಕೆ ಮಾತುಗಳು ಎಂದು ಗೊತ್ತಾಗುತ್ತಿದೆ ಎಂದು ಹೇಳಿದ್ದಾರೆ. ಇನ್ನು ಕೆಲವು ನೀವು ಯಾಕೆ ಶರ್ಟ್ ತೆಗೆದುಕೊಂಡು ಓಡಾಡುತ್ತೀರಿ ಎಂದು ಕೇಳಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ