ಬೆಂಗಳೂರು: ಸದಾ ಒಂದಲ್ಲೊಂದುವಿವಾದದಿಗಳಿಂದಲೇ ಸುದ್ದಿಯಾಗುತ್ತಿದ್ದ ಚಿತ್ರ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಚೇತನ್ ಅವರ ಸಾಗರೋತ್ತರ ವೀಸಾ (Overseas citizen of india)ವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ.
ಮಾರ್ಚ್ 28 ರಂದು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಯಿಂದ (FRRO) ಪತ್ರವನ್ನು ಚೇತನ್ ಅವರು ಏಪ್ರಿಲ್ 14 ರಂದು ಸ್ವೀಕರಿಸಿದ್ದಾರೆ.
ಪತ್ರವನ್ನು ಸ್ವೀಕರಿಸಿದ 15 ದಿನಗಳಲ್ಲಿ ಅವರ OCI ಕಾರ್ಡ್ ಅನ್ನು ಹಿಂದಿರುಗಿಸುವಂತೆ ಸೂಚಿಸಲಾಗಿದೆ.
ಹಿಂದುತ್ವದ ಕುರಿತು ಟ್ವೀಟ್ ಮಾಡಿ ಬಂಧನಕ್ಕೊಳಪಟ್ಟು ಬಿಡುಗಡೆಯಾದ ಒಂದು ವಾರದ ಬಳಿಕ ಈ ಬೆಳವಣಿಗೆ ನಡೆದಿರುವುದಾಗಿ ವರದಿಯಾಗಿದೆ.
ಸಂವಿಧಾನಶಿಲ್ಪಿ ಬಿ.ಆರ್.ಅಂಬೇಡ್ಕರ್ ಅವರ ಜನ್ಮ ಜಯಂತಿ ದಿನವಾದ ಏಪ್ರಿಲ್ 14ರಂದೇ ಕೇಂದ್ರ ಸರ್ಕಾರ ನನ್ನ ಓಐಸಿ(ಸಾಗರೋತ್ತರ ವೀಸಾ)ಯನ್ನು ರದ್ದುಗೊಳಿಸಿರುವುದಾಗಿ ಚೇತನ್ ಅಹಿಂಸಾ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ನಟ ಚೇತನ್ ಅವರ ಪೋಷಕರು ಮೂಲತ: ಭಾರತೀಯರಾಗಿದ್ದರೂ ಚೇತನ್ ಅಮೆರಿಕದಲ್ಲಿ ಜನಿಸಿದ ಅವರು ಅಮೆರಿಕದ ಪೌರತ್ವ ಹೊಂದಿದ್ದಾರೆ. ಸಾಗರೋತ್ತರ ವೀಸಾದ ಅಡಿ ಭಾರತದಲ್ಲಿ ವಾಸವಾಗಿದ್ದರು.
ನಾನು ಕಳೆದ 18 ವರ್ಷಗಳಿಂದ ದೇಶದಲ್ಲಿ ವಾಸಿಸುತ್ತಿದ್ದೇನೆ. ಹಲವಾರು ಸಾಮಾಜಿಕ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದೇನೆ. ವಿವಾಹವಾಗಿದ್ದು, ಹಲವು ಸಿನಿಮಾಗಳಲ್ಲಿ ನಟಿಸಿದ್ದೇನೆ. ಯಾವುದೇ ಕಾರಣಕ್ಕೂ ಭಾರತ ಬಿಟ್ಟು ಅಮೆರಿಕಕ್ಕೆ ವಾಪಸ್ ಹೋಗಲ್ಲ ಎಂದು ಚೇತನ್ ತಿಳಿಸಿರುವುದಾಗಿ ನ್ಯೂಸ್ ಮಿನಿಟ್ ವರದಿ ಮಾಡಿದೆ.
ಭಾರತದಲ್ಲಿ 18 ವರ್ಷದಿಂದ ಇದ್ದೇನೆ. ಜಾನಪದ ರಂಗಭೂಮಿ ಮತ್ತು ಅದರಿಂದ ಸಾಮಾಜಿಕ ಬದಲಾವಣೆ ಎನ್ನುವ ವಿಚಾರ ಮೇಲೆ ಸಂಶೋಧನಾ ಪದವಿ ತೆಗೆದುಕೊಂಡು 2005ರಲ್ಲಿ ನಾನು ಭಾರತಕ್ಕೆ ಬಂದಿದ್ದೇನೆ. 2015ರಿಂದ ಪೂರ್ಣಪ್ರಮಾಣದಲ್ಲಿ ಭಾರತದಲ್ಲಿಯೇ ಇದ್ದೇನೆ.
ನನ್ನ ತಂದೆ ಮತ್ತು ತಾಯಿ ಭಾರತದವರೇ ಆಗಿದ್ದಾರೆ 2018 ರಲ್ಲಿ ನನಗೆ ಓಸಿಐ ಕೊಟ್ಟಿದ್ದಾರೆ. ಅದರ ಜೊತೆಗೆ ನನ್ನ ಬಳಿ ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್ ಎಲ್ಲವೂ ಇದೆ. ನಾನು ಕೂಡ ಇದೇ ದೇಶಕ್ಕೆ ಆದಾಯ ತೆರಿಗೆ ಕಟ್ಟುತ್ತೇನೆ.ಈಗ ತಕ್ಷಣವೇ ಓಸಿಐ ರದ್ದು ಮಾಡಲಾಗಿದೆ ಅಂತ ನೋಟೀಸ್ ನೀಡಿದ್ದಾರೆ. ಇದರಲ್ಲಿ ಯಾವುದೇ ಅರ್ಥ ಇಲ್ಲ. ನಾನು ಇದೇ ದೇಶದವನು, ನನಗೆ ಅಮೆರಿಕಕ್ಕೆ ಹೋಗುವ ಮನಸ್ಸಿಲ್ಲ ಎಂದು ಚೇತನ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಓಸಿಐ (ಒವರ್ ಸೀಸ್ ಸಿಟಿಜನ್ ಆಫ್ ಇಂಡಿಯಾ ಅಥವಾ ಸಾಗರೋತ್ತರ ಭಾರತೀಯ ನಾಗರೀಕ ) ವೀಸಾ ನನಗೆ ನೀಡಿದ್ದಾರೆ. ಇದರಲ್ಲಿ ಮತ ಹಾಕುವುದು, ಚುನಾವಣೆಗೆ ನಿಲ್ಲುವುದು, ಸರ್ಕಾರಿ ನೌಕರನಾಗಿ ಕೆಲಸ ಮಾಡುವುದು ಬಿಟ್ಟರೆ ಎಲ್ಲ ಹಕ್ಕು ಸಿಗುತ್ನದೆ. ನೀವು ತುಂಬ ಕ್ರಿಮಿನಲ್ ಕೆಲಸಗಳಲ್ಲಿ ಭಾಗಿಯಾಗುತ್ತಿದ್ದೀರಾ. ಹೀಗಾಗಿ ನಿಮ್ಮ ವೀಸಾ ಯಾಕೆ ರದ್ದು ಮಾಡಬಾರದು ಎ 10 ತಿಂಗಳ ಹಿಂದೆ (2022ರ ಜೂನ್ 8) ಶೋಕಾಸ್ ನೋಟೀಸ್ ನೀಡಿದದ್ದರು. ಆಗ ಗೃಹ ಇಲಾಖೆಗೆ ಹೋಗಿ ಎಲ್ಲ ದಾಖಲೆ ಸಲ್ಲಿಸಿ ಬಂದ್ದಿದೆ. ಶುಕ್ರವಾರ ಮತ್ತೆ ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದೀರಾ ಎಂದು ವೀಸಾ ರದ್ದು ನೋಟೀಸ್ ನೀಡಿದ್ದಾರೆ ಎಂದು ಹೇಳಿದ್ದಾರೆ.
ದೇಶವಿರೋಧಿ ಚುಟುವಟಿಕೆಯಲ್ಲಿ ನಾನು ಎಲ್ಲಿ ಭಾಗಿಯಾಗಿದ್ದೇನೆ? ಉದ್ದೇಶಪೂರ್ವಕವಾಗಿ ನನ್ನ ಮೇಲೆ ಈ ರೀತಿ ಪಿತೂರಿ ಮಾಡುತ್ತಿದ್ದಾರೆ. ನಾನು ಈ ದೇಶದಲ್ಲಿ ಇರಬಾರದು ಅಂತ ವೀಸಾ ರದ್ದುಗೊಳಿಸಿದ್ದಾರೆ. ವಾಕ್ ಸ್ವಾತಂತ್ರವನ್ನು ಕಿತ್ತು ಹಾಕುವುದಲ್ಲದೇ, ಜೈಲಿಗೆ ಹಾಕಿ ಹಿಂಸೆ ಮಾಡೋದಲ್ಲದೆ, ನಾನು ದೇಶದಲ್ಲಿ ಇರಲೇ ಬಾರದು ಎಂದು ವೀಸಾ ರದ್ದು ಮಾಡಿದ್ದಾರೆ.
ನಾನು ವಕೀಲರ ಬಳಿ ಮಾತನಾಡಿದ್ದೇನೆ. ಇದಕ್ಕೆ ವಿರುದ್ದವಾಗಿ ತಡೆಯಾಜ್ಞೆ ತರಲಿದ್ದೇನೆ. ನಾನು ಕಾನೂನಿನ ಹೋರಾಟ ಮಾಡುತ್ತೇನೆ. ನನಗೆ 15 ದಿನದವರೆಗೆ ಸಮಯ ಕೊಟ್ಟಿದ್ದಾರೆ. 15 ದಿನದೊಳಗೆ ನಾನು ತಡೆಯಾಜ್ಞೆ ತರುತ್ತೇನೆ ಎಂದು ಚೇತನ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಹಿಜಾಬ್ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಜಡ್ಜ್ ವಿಚಾರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಚೇತನ್ ಅಹಿಂಸಾ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದ ನಂತರ ಎಫ್ ಆರ್ ಆರ್ ಓ 2022ರ ಜೂನ್ ನಲ್ಲಿ ಶೋಕಾಸ್ ನೋಟಿಸ್ ಅನ್ನು ಜಾರಿ ಮಾಡಿತ್ತು.
ಬಲಪಂಥೀಯ ರಾಜಕೀಯವನ್ನು ಟೀಕೆ ಮಾಡುತ್ತಲೇ, ಹಿಂದುತ್ವವನ್ನು ಪ್ರಶ್ನಿಸಿ ಟ್ವೀಟ್ ಮಾಡಿದ್ದಕ್ಕಾಗಿ ಬೆಂಗಳೂರು ಪೊಲೀಸರು ಮಾರ್ಚ್ 21 ರಂದು ಅವರನ್ನು ಬಂಧಿಸಿದ್ದರು.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…