Mysore
24
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

ಇಂದಿನಿಂದ ನಟ ಕಿಚ್ಚ ಸುದೀಪ್ ಪ್ರಚಾರ ಶುರು : ಸಿಎಂ ಜೊತೆ ರೋಡ್ ಶೋ ನಲ್ಲಿ ಭಾಗಿ

ಬೆಂಗಳೂರು : ನಟ ಕಿಚ್ಚ ಸುದೀಪ್,​​ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ಪ್ರಚಾರಕ್ಕೆ ಯಾವಾಗ ಇಳಿಯುತ್ತಾರೆ ಎಂಬ ಪ್ರಶ್ನೆ ಅಭಿಮಾನಿ ವಲಯದಲ್ಲಿ ಹರಿದಾಡುತ್ತಿತ್ತು. ಇದಕ್ಕೆ ಈಗ ಉತ್ತರ ಸಿಕ್ಕಿದ್ದು ಇಂದಿನಿಂದ ಮಾಣಿಕ್ಯನ ಮತಬೇಟೆ ಶುರುವಾಗಲಿದೆ. ಹೌದು ಸಿಎಂ ಬೊಮ್ಮಾಯಿಯವರು ಇಂದು ಶಿಗ್ಗಾಂವಿಯಲ್ಲಿ ಮಧ್ಯಾಹ್ನ 2 ಗಂಟೆಗೆ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ಮುನ್ನ ಬೆಳಿಗ್ಗೆ 10 ಗಂಟೆಗೆ ನಡೆಯುವ ರೋಡ್​ ಶೋನಲ್ಲಿ ನಟ ಸುದೀಪ್​, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭಾಗಿಯಾಗಲಿದ್ದಾರೆ.

ಈ ಹಿನ್ನೆಲೆ ನಟ ಸುದೀಪ್​ ಬೆಳಿಗ್ಗೆ 9 ಘಂಟೆಗೆ ಹೆಚ್​ಎಎಲ್ ವಿಮಾನ ನಿಲ್ದಾಣದಿಂದ ಹುಬ್ಬಳ್ಳಿಗೆ ತೆರಳಿ, ಹುಬ್ಬಳ್ಳಿಯಿಂದ ಸ್ಪೆಷಲ್ ಜಟ್​ನಲ್ಲಿ ಶಿಗ್ಗಾಂವಿಗೆ ತಲುಪಲಿದ್ದಾರೆ. ಶಿಗ್ಗಾಂವಿಯಲ್ಲಿ ನಡೆಯುವ ರೋಡ್ ಶೋನಲ್ಲಿ ಸಿಎಂ ಬೊಮ್ಮಾಯಿ ಮತಬೇಟೆ ಮತಯಾಚಿಸಲಿದ್ದಾರೆ. ಇನ್ನು ಸುದೀಪ್ ಮತಬೇಟೆ ಹೇಗಿರುತ್ತೆ ಅನ್ನುವ ಕುತೂಹಲ ಅಭಿಮಾನಿಗಳಿಗೆ ಹೆಚ್ಚಾಗಿದೆ. ಈ ಶಕ್ತಿ ಪ್ರದರ್ಶನದಲ್ಲಿ ಸುಮಾರು 30 ಸಾವಿರ ಕಾರ್ಯಕರ್ತರು ಭಾಗಿಯಾಗುವ ಸಾಧ್ಯತೆ ಇದೆ.

ಇನ್ನು ಸಿಎಂ ಬೊಮ್ಮಾಯಿ ಅವರಿಗೆ ಸಾಥ್ ನೀಡಲು ಸಚಿವರಾದ ಸಿಸಿ ಪಾಟೀಲ್, ಗೋವಿಂದ ಕಾರಜೋಳ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!