ಬೆಂಗಳೂರು : ನಟ ಕಿಚ್ಚ ಸುದೀಪ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ಪ್ರಚಾರಕ್ಕೆ ಯಾವಾಗ ಇಳಿಯುತ್ತಾರೆ ಎಂಬ ಪ್ರಶ್ನೆ ಅಭಿಮಾನಿ ವಲಯದಲ್ಲಿ ಹರಿದಾಡುತ್ತಿತ್ತು. ಇದಕ್ಕೆ ಈಗ ಉತ್ತರ ಸಿಕ್ಕಿದ್ದು ಇಂದಿನಿಂದ ಮಾಣಿಕ್ಯನ ಮತಬೇಟೆ ಶುರುವಾಗಲಿದೆ. ಹೌದು ಸಿಎಂ ಬೊಮ್ಮಾಯಿಯವರು ಇಂದು ಶಿಗ್ಗಾಂವಿಯಲ್ಲಿ ಮಧ್ಯಾಹ್ನ 2 ಗಂಟೆಗೆ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ಮುನ್ನ ಬೆಳಿಗ್ಗೆ 10 ಗಂಟೆಗೆ ನಡೆಯುವ ರೋಡ್ ಶೋನಲ್ಲಿ ನಟ ಸುದೀಪ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭಾಗಿಯಾಗಲಿದ್ದಾರೆ.
ಈ ಹಿನ್ನೆಲೆ ನಟ ಸುದೀಪ್ ಬೆಳಿಗ್ಗೆ 9 ಘಂಟೆಗೆ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ಹುಬ್ಬಳ್ಳಿಗೆ ತೆರಳಿ, ಹುಬ್ಬಳ್ಳಿಯಿಂದ ಸ್ಪೆಷಲ್ ಜಟ್ನಲ್ಲಿ ಶಿಗ್ಗಾಂವಿಗೆ ತಲುಪಲಿದ್ದಾರೆ. ಶಿಗ್ಗಾಂವಿಯಲ್ಲಿ ನಡೆಯುವ ರೋಡ್ ಶೋನಲ್ಲಿ ಸಿಎಂ ಬೊಮ್ಮಾಯಿ ಮತಬೇಟೆ ಮತಯಾಚಿಸಲಿದ್ದಾರೆ. ಇನ್ನು ಸುದೀಪ್ ಮತಬೇಟೆ ಹೇಗಿರುತ್ತೆ ಅನ್ನುವ ಕುತೂಹಲ ಅಭಿಮಾನಿಗಳಿಗೆ ಹೆಚ್ಚಾಗಿದೆ. ಈ ಶಕ್ತಿ ಪ್ರದರ್ಶನದಲ್ಲಿ ಸುಮಾರು 30 ಸಾವಿರ ಕಾರ್ಯಕರ್ತರು ಭಾಗಿಯಾಗುವ ಸಾಧ್ಯತೆ ಇದೆ.
ಇನ್ನು ಸಿಎಂ ಬೊಮ್ಮಾಯಿ ಅವರಿಗೆ ಸಾಥ್ ನೀಡಲು ಸಚಿವರಾದ ಸಿಸಿ ಪಾಟೀಲ್, ಗೋವಿಂದ ಕಾರಜೋಳ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ.
ಗದಗ : ಗುತ್ತಿಗೆದಾರನಿಂದ ಕಮಿಷನ್ ರೂಪದಲ್ಲಿ ಐದು ಲಕ್ಷ ಹಣ ಪಡೆಯುತ್ತಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ…
ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ರಣರಂಗವನ್ನು ಬಿಟ್ಟು…
ಮಂಡ್ಯ: ಜಿಲ್ಲೆಯಲ್ಲಿ ನಿರುದ್ಯೋಗಿ ಸಮಸ್ಯೆಯನ್ನು ಹೋಗಲಾಡಿಸಲು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏರ್ಪಡಿಸಿದ್ದು ಯುವಜನತೆಯ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶವನ್ನು ಕಲ್ಪಿಸುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷವಾಗಿ ಕಾಳಜಿ ವಹಿಸಿದ್ದೇನೆ…
ಮೈಸೂರು: ಕೆಲಸ ಇಲ್ಲದವರ ಆರೋಪಕ್ಕೆ ಉತ್ತರ ಕೊಡಲ್ಲ ಎಂಬ ಎಂಎಲ್‌ಸಿ ಹಾಗೂ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಮಾಜಿ…
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್…