ಬೆಂಗಳೂರು : ನಟ ನಾಗಭೂಷಣ್ ಅವರ ಕಾರು ಅಪಘಾತವಾಗಿದ್ದು, ಬೆಂಗಳೂರಿನ ವಸಂತಪುರದ ನಿವಾಸಿ 48ರ ವಯಸ್ಸಿನ ಪ್ರೇಮಾ ಎನ್ನುವವರು ಸಾವನ್ನಪ್ಪಿದ್ದಾರೆ. ನಿನ್ನೆ ತಡ ರಾತ್ರಿ ಕುಮಾರಸ್ವಾಮಿ ಲೇಔಟ್ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ರಾತ್ರಿ ಒಂಬತ್ತು ಗಂಟೆಗೆ ನಾಗಭೂಷಣ್ ತಮ್ಮ ಮನೆಗೆ ತೆರಳುವಾಗ ಅಪಘಾತವಾಗಿದೆ ಎಂದು ತಿಳಿದು ಬಂದಿದೆ.
ಶೂಟಿಂಗ್ ಮುಗಿಸಿಕೊಂಡು ನಾಗಭೂಷಣ್ ಬರುವಾಗ ರಸ್ತೆಯಲ್ಲಿ ಅಡ್ಡಬಂದ ಪಾದಚಾರಿ ದಂಪತಿಗಳಾದ ಪ್ರೇಮಾ ಮತ್ತು ಕೃಷ್ಣ ಅವರಿಗೆ ಕಾರು ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ದಂಪತಿಗಳಿಬ್ಬರಿಗೂ ತೀವ್ರ ಗಾಯವಾಗಿದ್ದು, ಗಾಯಾಳುಗಳನ್ನು ಖುದ್ದಾಗಿ ನಾಗಭೂಷಣ್ ಅವರೇ ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗುತ್ತಿದೆ. ಪ್ರೇಮಾ ಅವರಿಗೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಪತಿ ಕೃಷ್ಣ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನಾಗಭೂಷಣ್ ಅವರೇ ಸ್ವತಃ ಕಾರನ್ನು ಚಲಾಯಿಸುತ್ತಿದ್ದರಿಂದ ಅವರನ್ನು ಪೊಲೀಸರು ವಶಪಡಿಸಿಕೊಂಡಿದ್ದು ಮಾಹಿತಿ ಪಡೆಯುತ್ತಿದ್ದಾರೆ. ಮೃತರ ಪುತ್ರನು ಕುಮಾರಸ್ವಾಮಿ ಲೇಔಟ್ ಪೊಲೀಸರಿಗೆ ದೂರು ನೀಡಿದ್ದು, ಫುಟ್ ಪಾತ್ ಮೇಲೆ ತಂದೆ ತಾಯಿ ವಾಕ್ ಮಾಡುವಾಗ ಕಾರು ಹಾಯ್ದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಚನ್ನೈ: ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಬೀದಿಗಿಳಿದು ವಿಭಿನ್ನವಾಗಿ ಪ್ರತಿಭಟನೆ ಮಾಡುವ…
ಮೈಸೂರು: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಗುರುವಾರ ತಡರಾತ್ರಿ ನಿಧನರಾಗಿದ್ದು, ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರು ಸಂತಾಪ…
ನವದೆಹಲಿ: ದೇಶದ ಆರ್ಥಿಕ ತಜ್ಞ ಹಾಗೂ ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ ಅವರು ಉಸಿರಾಟದ ತೊಂದರೆಯಿಂದ ನಿಧನರಾಗಿದ್ದು, ಇವರ ಪಾರ್ಥಿವ…
‘ಜೋಗಿ’ ಪ್ರೇಮ್ ನಿರ್ದೇಶನದ ‘ಕೆಡಿ – ದಿ ಡೆವಿಲ್’ ಚಿತ್ರದ ‘ಶಿವ ಶಿವ …’ ಎಂಬ ಮೊದಲ ಹಾಡನ್ನು ಡಿ.…
ನವದೆಹಲಿ: ದೇಶದ ಆರ್ಥಿಕ ತಜ್ಞ ಹಾಗೂ ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ ಅವರು ಉಸಿರಾಟದ ತೊಂದರೆಯಿಂದ ನಿಧನರಾಗಿದ್ದು, ಇವರ ಪಾರ್ಥಿವ…
ಉಪೇಂದ್ರ ಅಭಿನಯದ ‘UI’ ಚಿತ್ರವು ಡಿ. 20ರಂದು ಬಿಡುಗಡೆಯಾಗಿ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ. ಕೆಲವರು ಚಿತ್ರದ ಬಗ್ಗೆ ಬಹಳ…