ನೀಲಿ ಚಿತ್ರ ನಿರ್ಮಾಣ ಆರೋಪ: ನಟಿ ನಂದಿತಾ ದತ್ತ ಅರೆಸ್ಟ್‌

ಕೋಲ್ಕತ್ತ: ನೀಲಿ ಚಿತ್ರ ನಿರ್ಮಾಣ ಆರೋಪದ ಮೇಲೆ ನಟಿ, ರೂಪದರ್ಶಿ ನಂದಿತಾ ದತ್ತ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ನಂದಿತಾ ದತ್ತ ಅಶ್ಲೀಲ ಚಿತ್ರಗಳನ್ನು ನಿರ್ಮಾಣ ಮಾಡಿ ಅವುಗಳನ್ನು ಓಟಿಟಿ ಮೂಲಕ ಪ್ರಸಾರ ಮಾಡುತ್ತಿದ್ದರು ಎಂದು ಜುಲೈ 26ರಂದು ಇಬ್ಬರು ಯುವತಿಯರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ನಂದಿತಾ ಹಾಗೂ ಅವರ ಮ್ಯಾನೇಜರ್‌ ಮಾಣಿಕ್‌ ಘೋಷ್‌ ಅವರನ್ನು ಬಂಧಿಸಲಾಗಿದೆ.

ಕೋಲ್ಕತ್ತದ ಹೊರ ವಲಯದ ಬಂಗಲೆಗಳನ್ನು ಬಾಡಿಗೆಗೆ ಪಡೆದು ಅಲ್ಲಿ ನೀಲಿ ಚಿತ್ರಗಳ ವಿಡಿಯೊಗಳನ್ನು ಚಿತ್ರೀಕರಿಸುವ ಮೂಲಕ ರೂಪದರ್ಶಿಗಳ ಹಾಗೂ ಸಿನಿಮಾಗಳ ಅವಕಾಶಕ್ಕಾಗಿ ಕಾಯುತ್ತಿರುವ ಹೊಸ ಪ್ರತಿಭಗೆಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ರೂಪದರ್ಶಿ ನಂದಿತಾ ದತ್ತ ಹತ್ತಾರು ಬಂಗಾಳಿ ಹಾಗೂ ಬೋಜ್‌ಪುರಿ ಸಿನಿಮಾಗಳಲ್ಲಿ ನಟಿಸಿದ್ದಾರೆ.

× Chat with us