ಅಪ್ಪಂದಿರ ದಿನ: ವಿಶೇಷ ಹಾಡಿನ ಮೂಲಕ ಶುಭಾಶಯ ತಿಳಿಸಿದ ಪವರ್‌ ಸ್ಟಾರ್‌

ಬೆಂಗಳೂರು: ವಿಶ್ವ ಅಪ್ಪಂದಿರ ದಿನಾಚರಣೆ ಅಂಗವಾಗಿ ನಟ ಪುನೀತ್‌ ರಾಜ್‌ಕುಮಾರ್‌ ಅವರು ವಿಶೇಷ ಹಾಡಿನ ಮೂಲಕ ಶುಭಾಶಯ ತಿಳಿಸಿದ್ದಾರೆ.

ಪುನೀತ್‌ ರಾಜ್‌ಕುಮಾರ್‌ ಬಾಲನಟನಾಗಿ ಅಭಿನಯಿಸಿದ್ದ ʻಭಾಗ್ಯವಂತʼ ಸಿನಿಮಾದಲ್ಲಿ ಡಾ. ರಾಜ್‌ಕುಮಾರ್‌ ಅವರು ಅತಿಥಿ ಪಾತ್ರ ಮಾಡಿದ್ದರು. ಆ ಸಿನಿಮಾದ ʻಬಾನ ದಾರಿಯಲ್ಲಿ ಸೂರ್ಯ ಜಾರಿ ಹೋದ, ಚಂದ್ರ ಮೇಲೆ ಬಂದʼ ಹಾಡನ್ನು ಹಾಡುವ ಮೂಲಕ ಪುನೀತ್‌ ವಿಶ್ವ ಅಪ್ಪಂದಿರ ದಿನದ ಶುಭಾಶಯ ಕೋರಿದ್ದಾರೆ. ಆ ಮೂಲಕ ತಮ್ಮ ಪ್ರೀತಿಯ ತಂದೆಯನ್ನೂ ನೆನಪಿಸಿಕೊಂಡಿದ್ದಾರೆ. ಅದನ್ನು ಟ್ವಿಟರ್‌ ಖಾತೆಯಲ್ಲಿ ಪುನೀತ್‌ ರಾಜ್‌ಕುಮಾರ್‌ ಹಂಚಿಕೊಂಡಿದ್ದಾರೆ.

ಅಪ್ಪಂದಿರ ದಿನಾಚರಣೆ ಹಿನ್ನೆಲೆಯಲ್ಲಿ ತಂದೆಗೆ ಕೃತಜ್ಞತೆ ಸಲ್ಲಿಸಲು ಎಲ್ಲರೂ ಸೋಶಿಯಲ್​ ಮೀಡಿಯಾದಲ್ಲಿ ವಿವಿಧ ಪೋಸ್ಟ್​ಗಳನ್ನು ಹಾಕುತ್ತಿದ್ದಾರೆ. ಸೆಲೆಬ್ರಿಟಿಗಳು ಕೂಡ ಈ ವಿಶೇಷ ದಿನದಂದು ಅಪ್ಪನಿಗೆ ಧನ್ಯವಾದ ತಿಳಿಸುತ್ತಿದ್ದಾರೆ. ತಮ್ಮ ಅಭಿಮಾನಿಗಳೆಲ್ಲರಿಗೂ ಅಪ್ಪಂದಿರ ದಿನದ ಶುಭಾಶಯ ಹೇಳಿದ್ದಾರೆ.

× Chat with us