ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ತನ್ನ ಆತ್ಮೀಯ ಶಿಷ್ಯೆಯನ್ನು ತನ್ನ ದೇಶದ ಪ್ರಧಾನಿಯನ್ನಾಗಿ ಮಾಡಿರುವ ವಿಚಾರ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ. ಕೈಲಾಸ ದೇಶ ಎಂಬ ಹೊಸ ದೇಶವನ್ನೇ ಕಟ್ಟಿರುವ ನಿತ್ಯಾನಂದ ಹಲವು ವರ್ಷಗಳ ಕಾಲ ತನ್ನ ಶಿಷ್ಯರ ಜೊತೆ ಅಲ್ಲಿಯೇ ನೆಲೆಯೂರಿದ್ದಾನೆ. ಇದೀಗ ಆ ದೇಶಕ್ಕೆ ಪ್ರಧಾನಿಯನ್ನು ನೇಮಕ ಮಾಡಿದ್ದಾನೆ.
ದೇವರ ಹೆಸರಲ್ಲಿ ಹೊಸ ಸಾಮ್ರಾಜ್ಯ ಕಟ್ಟಿಕೊಂಡಿರುವ ನಿತ್ಯಾನಂದ ಈಕ್ವೆಡಾರ್‌ನ ಕರಾವಳಿಯಲ್ಲಿ ದ್ವೀಪವೊಂದನ್ನು ತನ್ನದೇ ಆದ ದೇಶವಾಗಿ ನಿರ್ಮಿಸಿಕೊಂಡು ತನ್ನ ಶಿಷ್ಯರ ಜೊತೆ ವಾಸಿಸುತ್ತಿದ್ದಾನೆ.
ನಟಿ ರಂಜಿತಾ ಕಾರಣದಿಂದಾಗಿಯೇ ನಿತ್ಯಾನಂದ ರಾಷ್ಟ್ರದಾದ್ಯಂತ ಸುದ್ದಿಯಾಗಿದ್ದು, ಇಬ್ಬರ ನಡುವಿನ ಖಾಸಗಿ ವಿಡಿಯೋ ವಿಚಾರವಾಗಿ ಕೋರ್ಟ್ ಮೆಟ್ಟಿಲು ಕೂಡ ಏರಿದ್ದ. ನಂತರ ದೇಶವನ್ನೇ ಬಿಡಬೇಕಾಗಿ ಬಂತು. ದೇಶವನ್ನು ತೊರೆಯುವಾಗ ತನ್ನ ಅಷ್ಟೂ ಶಿಷ್ಯರನ್ನು ಕರೆದೊಯ್ದು, ಹೊಸ ದೇಶ ಕಟ್ಟಿ ಮತ್ತೆ ಅಚ್ಚರಿ ಮೂಡಿಸಿದೆ. ಈ ದೇಶಕ್ಕೆ ರಂಜಿತಾ ಅವರನ್ನು ಪ್ರಧಾನಿ ಮಾಡಿದ್ದಾನೆ ಎಂಬ ಸುದ್ದಿ ಹರಿದಾಡುತ್ತಿದೆ.
ತಮ್ಮ ಪ್ರೀತಿಯ ಶಿಷ್ಯೆ ರಂಜಿತಾಳನ್ನು ಕೈಲಾಸದ ಪ್ರಧಾನ ಮಂತ್ರಿಯನ್ನಾಗಿ ನೇಮಿಸಿದ್ದಾರೆ. ಈ ಸಂಬಂಧ ಅಧಿಕೃತ ಘೋಷಣೆ ಮಾಡಲಾಗಿದೆ ಎಂದು ತಮಿಳು ನಿಯತಕಾಲಿಕವೊಂದು ವರದಿ ಮಾಡಿದೆ. ಇದಲ್ಲದೆ, ನಿತ್ಯಾನಂದನ ವೆಬ್‌ಸೈಟ್ ಕೂಡ ಈ ವಿಷಯವನ್ನು ಪ್ರಕಟಿಸಿದೆ ಎನ್ನಲಾಗಿದೆ .
ಈ ಸುದ್ದಿ ಹೊರಬೀಳುತ್ತಿದ್ದಂತೆ ಎಲ್ಲರೂ ಅಚ್ಚರಿಗೊಂಡಿದ್ದಾರೆ. ಸದ್ಯಕ್ಕೆ ನಿತ್ಯಾನಂದನ ವೆಬ್‌ಸೈಟ್‌ನಲ್ಲಿ ರಂಜಿತಾ ಮತ್ತು ನಿತ್ಯಾನಂದ ಇರುವ ಫೋಟೋಗಳು ಮಾತ್ರ ಕಾಣಿಸಿಕೊಳ್ಳುತ್ತಿವೆ. ರಂಜಿತಾ ಕೂಡ ತನ್ನ ಹೆಸರನ್ನು ಬದಲಾಯಿಸಿಕೊಂಡಿದ್ದು ನಿತ್ಯಾನಂದಮಯಿ ರಂಜಿತ ಸ್ವತಃ ಸ್ವಾಮಿ ಎಂದು ಘೋಷಿಸಿಕೊಂಡಿದ್ದಾಳೆ.
ಒಟ್ಟಾರೆಯಾಗಿ ಹಿಂದೂಗಳಿಗಾಗಿ ಸ್ಥಾಪಿತವಾದ ಕೈಲಾಸ ರಾಷ್ಟ್ರದ ಮೊದಲ ಪ್ರಧಾನ ಮಂತ್ರಿಯಾಗಿ ರಂಜಿತಾ ಅವರನ್ನು ನೇಮಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಈ ಹಿಂದೆ ತನ್ನ ದೇಶದ ಕರೆನ್ಸಿಯನ್ನು ನಿತ್ಯಾನಂದ ಬಿಡುಗಡೆ ಮಾಡಿದ್ದ. ತನ್ನ ದೇಶದ ವೀಸಾ ಕೂಡ ಘೋಷಿಸಿದ್ದ. ಕೈಲಾಸ ದೇಶಕ್ಕೆ ಬರುವವರು ಯಾವೆಲ್ಲ ನಿಯಮ ಪಾಲಿಸಬೇಕು ಎನ್ನುವ ಕುರಿತಾದ ವೆಬ್ ಸೈಟ್ ಕೂಡ ನಿತ್ಯಾನಂದ ಮಾಡಿಕೊಂಡಿದ್ದಾನೆ. ಯಾರಿಗೆಲ್ಲ ವೀಸಾ ಕೊಡಲಾಗುತ್ತದೆ ಎನ್ನುವ ವಿವರಣೆಯನ್ನು ಅದರಲ್ಲಿ ನೀಡಿದ್ದಾನೆ. ಇದೀಗ ತನ್ನ ದೇಶಕ್ಕೆ ನಟಿ ರಂಜಿತಾರನ್ನು ಪ್ರಧಾನಿಯನ್ನಾಗಿ ಮಾಡುವ ಮೂಲಕ ಮತ್ತೆ ಸುದ್ದಿಯಾಗಿದ್ದಾನೆ.
ಮೈಸೂರು: ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಇಂದು(ಡಿ.23) ಮೈಸೂರಿನ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ…
ಹುಬ್ಬಳ್ಳಿ : ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 9 ಮಂದಿ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ತಡರಾತ್ರಿ ಹುಬ್ಬಳ್ಳಿಯಲ್ಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಅವರು ಆಕ್ಷೇಪಾರ್ಹ ನೀಡಿರುವ ಹೇಳಿಕೆಯ ಕೇಸ್…
ಶಿವರಾಜಕುಮಾರ್ ಶಸ್ತ್ರಚಿಕಿತ್ಸೆಗೆಂದು ಇತ್ತೀಚೆಗೆ ಅಮೇರಿಕಾಗೆ ಪ್ರಯಾಣ ಬೆಳಸಿದ್ದಾರೆ. ಜನವರಿ 26ರಂದು ಅವರು ಚಿಕಿತ್ಸೆ ಮುಗಿಸಿ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ಬೆಂಗಳೂರಿಗೆ ವಾಪಸ್ಸಾಗಿ…
ವಿಜಯ್ ರಾಘವೇಂದ್ರ ಅಭಿನಯದ ಮೂರು ಚಿತ್ರಗಳು ಈ ವರ್ಷ ಬಿಡುಗಡೆಯಾಗಿವೆ. ವಿಶೇಷವೆಂದರೆ, ‘ಕೇಸ್ ಆಫ್ ಕೊಂಡಾನ’, ‘ಜಾಗ್ 101’ ಮತ್ತು…
• ಕೆ.ಬಿ.ಶಂಶುದ್ದೀನ್ ಕುಶಾಲನಗರ ತಾಲ್ಲೂಕು ವ್ಯಾಪ್ತಿಯಲ್ಲಿ ಪಟ್ಟಣ ಅಭಿವೃದ್ಧಿಯಾದಂತೆ ಕಳ್ಳತನವೂ ಹೆಚ್ಚಳ; ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಲು ಒತ್ತಾಯ…