BREAKING NEWS

ಮತ್ತೆ ಮುರುಘಾ ಶ್ರೀ ತೆಕ್ಕೆಗೆ ಬಿತ್ತು ಮಠ ಹಾಗೂ ವಿದ್ಯಾಪೀಠದ ಜವಬ್ದಾರಿ

ಚಿತ್ರದುರ್ಗ : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಚಿತ್ರದುರ್ಗದ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ಜೈಲಿನಿಂದ ಹೊರ ಬಂದ ಮೇಲೆ, ಮಠ ಹಾಗೂ ವಿದ್ಯಾಪೀಠದ ಅಧಿಕಾರವನ್ನು ಮತ್ತೆ ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದಾರೆ.

ಹೈಕೋರ್ಟ್‌ ನ ನಿರ್ದೇಶನದ ಮೇರೆಗೆ ಮುರುಘಾ ಮಠದ ತಾತ್ಕಾಲಿಕ ಆಡಳಿತಾಧಿಕಾರಿ ಆಗಿದ್ದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶೆ ಗೀತಾ ಅವರು ಶಿವಮೂರ್ತಿ ಮುರುಘಾ ಶರಣರಿಗೆ ಅಧಿಕಾರ ಹಸ್ತಾಂತರ ಮಾಡಿದ್ದಾರೆ. ಶಿವಮೂರ್ತಿ ಶರಣರಿಗೆ ಚಿತ್ರದುರ್ಗ ಪ್ರವೇಶಕ್ಕೆ ನಿರ್ಬಂಧ ಇರುವುದರಿಂದ ಹೊರಗಿನಿಂದಲೇ ಆಡಳಿತ ನಡೆಸಲಿದ್ದಾರೆ.

ಮುರುಘಾ ಶರಣರಿಗೆ ಚಿತ್ರದುರ್ಗ ಜಿಲ್ಲಾ ಪ್ರವೇಶಕ್ಕೆ ಹೈಕೋರ್ಟ್‌ ನಿರ್ಬಂಧ ಹೇರಿದ್ದರೂ ಕೂಡ ಜಿಲ್ಲಾ ನ್ಯಾಯಾಲಾಯ ಅಧಿಕಾರವನ್ನು ಹಸ್ತಾಂತರಿಸಿರುವುದು ಅಚ್ಚರಿ ಮೂಡಿಸಿದೆ.

ಇನ್ನು ಮುರುಘಾ ಮಠ ಹಾಗೂ ಎಸ್‌ಜೆಎಂ ವಿದ್ಯಾಪೀಠದ ಆಡಳಿತವನ್ನು ನ್ಯಾಯಾಧೀಶರು ಮಠದ ಪೀಠಾಧಿಪತಿಗಳಿಗೆ ಹಸ್ತಾಂತರಿಸಿದ್ದಾರೆ. ಮಠದ ಸದ್ಭಕ್ತರು ಸಹಕರಿಸಬೇಕು ಎಂದು ಶಿವಮೂರ್ತಿ ಶರಣರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಳೆದ ವರ್ಷ ಮುರುಘಾ ಮಠದ ಶಿವಮೂರ್ತಿ ಶರಣರು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿದ್ದರು ಹಾಗಾಗಿ ಮಠದ ಆಡಳಿತವನ್ನು ನೋಡಿಕೊಳ್ಳುವ ಜವಬ್ಧಾರಿಯನ್ನು ನಿವೃತ್ತ ಐಎಎಸ್‌ ಅಧಿಕಾರಿ ಪಿ.ಎಸ್.ವಸ್ತ್ರದ ಅವರಿಗೆ ನೀಡಿ ಆಡಳಿತಾಧಿಕಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿತ್ತು.

ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಸೆರೆವಾಸ ಅನುಭವಿಸುತ್ತಿದ್ದ ಮುರುಘಾ ಶರಣರು ಕೆಲದಿನಗಳ ಹಿಂದೆ ಬೇಲ್‌ ಮೇಲೆ ಹೊರ ಬಂದಿದ್ದರು. ಜೈಲಿನಿಂದ ಹರ ಬರುತ್ತಿದ್ದಂತೆಯೇ ಶರಣರಿಗೆ ಎರಡನೇ ಕೇಸ್‌ ನಲ್ಲಿ ಅರೆಸ್ಟ್‌ ವಾರಂಟ್‌ ಜಾರಿಯಾಗಿತ್ತು. ಇದೆಲ್ಲದರ ನಡುವೆ ಇದೀಗ ಮತ್ತೆ ಮಠದ ಆಡಳಿತ ಶಿವಮೂರ್ತಿ ಮುರುಘಾ ಶರಣರ ತೆಕ್ಕೆಗೆ ಬಿದ್ದಿದೆ.

lokesh

Recent Posts

ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಬಸ್‌ ಸೌಲಭ್ಯ ಕಲ್ಪಿಸಲು ಡಿಪೋ ನಿರ್ಮಾಣ: ಶಾಸಕ ಎಂ.ಆರ್.‌ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…

5 hours ago

ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವು

‌ಶ್ರೀರಂಗಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್‌ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…

5 hours ago

ರಾಜ್ಯದ ಹಲವೆಡೆ ಭಾರೀ ಗಾಳಿ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…

5 hours ago

ಹನೂರು: 153 ದಿನಗಳಿಂದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಅಂತ್ಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…

5 hours ago

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್‌ ಸಿಗ್ನಲ್‌ ಆರೋಪ: ಸಚಿವ ಮಹದೇವಪ್ಪ ಪ್ರತಿಕ್ರಿಯೆ

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…

5 hours ago

ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…

6 hours ago