ನವದೆಹಲಿ: ಲೋಕಸಭಾ ಚುನಾವಣೆ ಹಿನ್ನಲೆ ಈ ಬಾರಿ ಕೇಂದ್ರದಲ್ಲಿ ಅಧಿಕಾರಕ್ಕೇರಬೇಕೆಂಬ ಗುರಿಯೊಂದಿಗೆ ಕಣಕ್ಕಿಳಿದಿರುವ ಕಾಂಗ್ರೆಸ್ ಶುಕ್ರವಾರ(ಏಪ್ರಿಲ್ 5) ಪ್ರಣಾಳಿಕೆ ಬಿಡುಗಡೆ ಮಾಡಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನ್ಯಾಯ ಪತ್ರದ ಹೆಸರಿನಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಈ ವೇಳೆ ಕಾಂಗ್ರೆಸ್ ವರಿಷ್ಟೆ ಸೋನಿಯಾ ಗಾಂಧಿ, ಮುಖಂಡರಾದ ರಾಹುಲ್ ಗಾಂಧಿ ಹಾಗೂ ಪ್ರಣಾಳಿಕೆ ರಚನಾ ಸಮಿತಿ ಅಧ್ಯಕ್ಷ ಚಿದಂಬರ ಹಾಗೂ ವೇಣುಗೋಪಾಲ್ ಉಪಸ್ಥಿತರಿದ್ದರು.
ಪ್ರಣಾಳಿಕೆಯಲ್ಲಿ ಸಾಮಾಜಿಕ ನ್ಯಾಯ, ಲಿಂಗ ಸಮಾನತೆ, ಅಲ್ಪ ಸಂಖ್ಯಾತರ ವೈಯಕ್ತಿಕ ಕಾನೂನುಗಳ ಸುಧಾರಣೆ, ಹಿರಿಯ ನಾಯರಿಕರು, ಅಂಗವಿಕಲರ ಅಭ್ಯುದಯಕ್ಕೆ ಒತ್ತು ನೀಡಲಾಡುವುದು ಎಂದು ಉಲ್ಲೇಖಿಸಿದ್ದಾರೆ. ದೇಶವ್ಯಾಪ್ತಿ ಜಾತಿ ಗಣತಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗಿರುವ ಶೇ. 50ರ ಮೀಸಲಾತಿಯನ್ನು ಏರಿಕೆ ಮಾಡಲು ಸಾಂವಿಧಾನಿಕ ತಿದ್ದುಪಡಿ ತರಲಾಗುವುದು ಎಂದು ತಮ್ಮ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷದ ಪಂಚ ನ್ಯಾಯ ಅಥವಾ ನ್ಯಾಯದ ಸ್ತಂಭಗಳ ಭರವಸೆಯು ಯುವ ನ್ಯಾಯ, ನಾರಿ ನ್ಯಾಯ, ಕಿಸಾನ್ ನ್ಯಾಯ, ಶ್ರಮಿಕ ನ್ಯಾಯ ಹಾಗೂ ಸಹಭಾಗಿತ್ವ ನ್ಯಾಯವನ್ನು ಒಳಗೊಂಡಿದೆ. ಆರ್ಥಿಕವಾಗಿ ಹಿಂದುಳಿದಿರುವ ವರ್ಗಗಳಿಗೆ ನೀಡಲಾಗಿರುವ ಶೇ. 10ರಷ್ಟು ಮೀಸಲಾತಿಯನ್ನು ಯಾವುದೇ ತಾರತಮ್ಯವಿಲ್ಲದೆ, ಎಲ್ಲ ಜಾತಿ, ಜನಾಂಗಗಳ ದುರ್ಬಲರಿಗೂ ಹಂಚಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾಗಿರುವ ಹುದ್ದೆಗಳಲ್ಲಿನ ಬ್ಯಾಕ್ ಲಾಗ್ ಹುದ್ದೆಗಳನ್ನು ಒಂದು ವರ್ಷದ ಅವಧಿಯೊಳಗೆ ಭರ್ತಿ ಮಾಡಲಾಗುವುದು ಎಂದು ಕಾಂಗ್ರೆಸ್ ಭರವಸೆ ನೀಡಿದೆ.
ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ, ಅಗ್ನಿಪಥ್ ಯೋಜನೆ ರದ್ದು, ವಿವಿಧ ಹಂತಗಳಲ್ಲಿ 30 ಲಕ್ಷ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದಾಗಿ ಹೇಳಿದೆ. ಸರ್ಕಾರಿ ಹಾಗೂ ಸಾರ್ವಜನಿಕ ಉದ್ಯಮಗಳಲ್ಲಿನ ನಿಯಮಿತ ಉದ್ಯೋಗಗಳಿಗೆ ಗುತ್ತಿಗೆ ಆಧಾರದ ನೇಮಕಾತಿಯನ್ನು ನಿಷೇಧಿಸಲಾಗುವುದು ಹಾಗೂ ಅಂತಹ ಉದ್ಯೋಗಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವವರನ್ನು ಖಾಯಂಗೊಳಿಸಲಾಗುವುದು ಎಂದು ಕಾಂಗ್ರೆಸ್ ಹೇಳಿದೆ.
ಕಾಂಗ್ರೆಸ್ ಪಕ್ಷವು ಈಗಾಗಲೇ ಪಂಚ ನ್ಯಾಯ ‘25 ಗ್ಯಾರಂಟಿ’ಗಳನ್ನು ಘೋಷಿಸಿದೆ. ಮನೆ ಮನೆ ಗ್ಯಾರಂಟಿ ಅಭಿಯಾನವು ಆರಂಭವಾಗಿದೆ. ದೇಶದಾದ್ಯಂತ ಸಮಾಲೋಚನೆಗಳನ್ನು ನಡೆಸಿ ಕಾಂಗ್ರೆಸ್ ಪ್ರಣಾಳಿಕೆಯನ್ನು ಸಿದ್ಧಪಡಿಸಿದೆ. ಇ –ಮೇಲ್ ಹಾಗೂ ಆವಾಜ್ ಭಾರತ್ ಕಿ ವೆಬ್‌ಸೈಟ್ ಮೂಲಕ ಕಾಂಗ್ರೆಸ್ ಪ್ರಾಣಾಳಿಕೆಗೆ ಸಾವಿರಾರು ಸಲಹೆಗಳು ಬಂದಿದ್ದವು ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…
2025ರಲ್ಲಿ ವಿಧಿವಶರಾದ ಗಣ್ಯರ ಮಾಹಿತಿ ಜನವರಿ... ನಾ.ಡಿಸೋ’ಜಾ: ಕನ್ನಡದ ಪ್ರಸಿದ್ಧ ಬರಹಗಾರ ಮತ್ತು ಕಾದಂಬರಿಕಾರ ನಾ ಡಿ’ಸೋಜಾ ಅವರು ಜನವರಿ…
ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಸರ್ಕಾರಿ ಕಚೇರಿಯಲ್ಲಿ ಕೆಲಸ ನಿರ್ವಹಿಸುವವರು ಎಚ್ಚರಿಕೆ ವಹಿಸಿದಲ್ಲಿ ನಡೆಯ ಬಹುದಾದ ವಂಚನೆಗಳನ್ನು ಹೇಗೆ ತಪ್ಪಿಸಬಹುದು ಎಂಬುದಕ್ಕೆ ವಿಧಾನಪರಿಷತ್…
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…