BREAKING NEWS

ಟೆಲ್ ಅವೀವ್​ಗೆ ವಿಮಾನ ಸೇವೆ ಸ್ಥಗಿತಗೊಳಿಸಿದ ಏರ್​ ಇಂಡಿಯಾ

ನವದೆಹಲಿ : ಇಸ್ರೇಲ್ ಮತ್ತು ಉಗ್ರಗಾಮಿ ಗುಂಪು ಹಮಾಸ್ ನಡುವಿನ ಉದ್ವಿಗ್ನತೆಯ ಹೆಚ್ಚಿದ್ದು ಏರ್ ಇಂಡಿಯಾ ನವೆಂಬರ್ 30 ರವರೆಗೆ ಟೆಲ್ ಅವೀವ್‌ಗೆ ವಿಮಾನಗಳ ಸೇವೆಯನ್ನು ಸ್ಥಗಿತಗೊಳಿಸಿದೆ. ಅಕ್ಟೋಬರ್ 7 ರಿಂದ ಟೆಲ್ ಅವೀವ್‌ಗೆ ಮತ್ತು ಅಲ್ಲಿಂದ ಯಾವುದೇ ಭಾಗಕ್ಕೂ ವಿಮಾನ ಹಾರಾಟ ಇಲ್ಲ ಎಂದು ಏರ್ ಇಂಡಿಯಾ ಸ್ಪಷ್ಟಪಡಿಸಿದೆ.

ನವೆಂಬರ್ 30 ರವರೆಗೆ ಟೆಲ್ ಅವಿವ್‌ಗೆ ವಿಮಾನಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಏರ್‌ಲೈನ್ ವಕ್ತಾರರು ತಿಳಿಸಿದ್ದಾರೆ. ಸಾಮಾನ್ಯವಾಗಿ, ವಿಮಾನ ಸೋಮವಾರ, ಮಂಗಳವಾರ, ಗುರುವಾರ, ಶನಿವಾರ ಮತ್ತು ಭಾನುವಾರ ರಾಷ್ಟ್ರೀಯ ರಾಜಧಾನಿಯಿಂದ ಟೆಲ್ ಅವೀವ್‌ಗೆ ಐದು ಏರ್ ಇಂಡಿಯಾ ವಿಮಾನಗಳು ಕಾರ್ಯಾಚರಿಸುತ್ತಿವೆ.

ಕಳೆದ ತಿಂಗಳು, ಘರ್ಷಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಸ್ರೇಲ್‌ನಿಂದ ಹಿಂತಿರುಗಲು ಇಚ್ಛಿಸುವ ಭಾರತೀಯರನ್ನು ಮರಳಿ ಕರೆತರಲು ಸರ್ಕಾರದ ಆಪರೇಷನ್ ಅಜಯ್ ಅಡಿಯಲ್ಲಿ ವಿಮಾನಯಾನವು ರಾಷ್ಟ್ರೀಯ ರಾಜಧಾನಿಯಿಂದ ಟೆಲ್ ಅವೀವ್‌ಗೆ ಕೆಲವು ಚಾರ್ಟರ್ಡ್ ವಿಮಾನಗಳನ್ನು ಕಳುಹಿಸಿತ್ತು.

ಅಕ್ಟೋಬರ್ 7 ರಂದು ಹಮಾಸ್ ಉಗ್ರರು ಇಸ್ರೇಲ್ ಮೇಲೆ 5 ಸಾವಿರ ರಾಕೆಟ್​ಗಳಿಂದ ದಾಳಿ ನಡೆಸಿದರು, ಘಟನೆಯಲ್ಲಿ 1,400ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಅದಾದ ಬಳಿಕ ಇಸ್ರೇಲ್ ಪ್ರತಿಯಾಗಿ ಗಾಜಾದ ಮೇಲೆ ದಾಳಿ ನಡೆಸಿದ್ದು, ಅಲ್ಲೂ ಸಾವಿರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಯುದ್ಧವನ್ನು ನಾವು ಪ್ರಾರಂಭ ಮಾಡಿಲ್ಲ ಆದರೆ ನಾವೇ ಅಂತ್ಯ ಮಾಡುತ್ತೇವೆ ಎಂದು ಇಸ್ರೇಲ್ ಪಣತೊಟ್ಟಿದೆ.

ವಿಶ್ವಸಂಸ್ಥೆ ನಡೆಸುತ್ತಿದ್ದ ಶಾಲೆಯ ಮೇಲೆ ಇಸ್ರೇಲ್ ದಾಳಿ ನಡೆಸಿದ್ದು, ದಾಳಿಯಲ್ಲಿ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಮತ್ತು 70ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಗಾಜಾದಲ್ಲಿನ ಹಮಾಸ್ ಆರೋಗ್ಯ ಸಚಿವಾಲಯವು ತಿಳಿಸಿದೆ.

ಅಲ್-ಫಖುರಾ ಶಾಲೆಯ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 15 ಮಂದಿ ಮೃತಪಟ್ಟಿದ್ದರು, ಮತ್ತು 70 ಮಂದಿ ಗಾಯಗೊಂಡಿದ್ದರು. ಇದಕ್ಕೂ ಮೊದಲು ಈ ಶಾಲೆಯ ಮೇಲೆ ನಡೆದ ದಾಳಿಯಲ್ಲಿ 12 ಜನರು ಸಾವನ್ನಪ್ಪಿದ್ದಾರೆ ಮತ್ತು 54 ಮಂದಿ ಗಾಯಗೊಂಡಿದ್ದಾರೆ ಎಂದು ಸಚಿವಾಲಯ ಹೇಳಿತ್ತು.

lokesh

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

5 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

7 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

8 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

10 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

11 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

12 hours ago