ನವದೆಹಲಿ : ಪಂಜಾಬ್, ಹರಿಯಾಣ, ರಾಜಸ್ಥಾನ್ ಹಾಗೂ ಉತ್ತರ ಪ್ರದೇಶದಲ್ಲಿ ಕೃಷಿ ತ್ಯಾಜ್ಯಾ ಸುಡುತ್ತಿರುವುರಿಂದ ದೆಹಲಿ ಹಾಗೂ ಎನ್‌ಸಿಆರ್ ಭಾಗದಲ್ಲಿ ವಾಯುಮಾಲಿನ್ಯ ಕುಸಿತ ಕಂಡಿದೆ. ಗಾಳಿಯ ಗುಣಮಟ್ಟ ಕಳಪೆ ಮಟ್ಟಕ್ಕೆ ಕುಸಿದಿದ್ದು, ಅಪಾಯ ಮಟ್ಟ ಮೀರಿದೆ. ಈ ಹಿನ್ನೆಲೆ ಈ ನಾಲ್ಕು ರಾಜ್ಯಗಳಿಗೆ ಕೃಷಿ ತ್ಯಾಜ್ಯಗಳ ಸುಡುವುದನ್ನು ತಕ್ಷಣ ನಿಲ್ಲಿಸುವಂತೆ ಸುಪ್ರಿಂಕೋರ್ಟ್ ಸೂಚನೆ ನೀಡಿದೆ.
ನ್ಯಾ. ಸಂಜಯ್ ಕಿಶನ್ ಕೌಲ್, ಸುಧಾಂಶು ಧುಲಿಯಾ ಅವರಿದ್ದ ಪೀಠ ಪ್ರತಿ ವರ್ಷ ದೆಹಲಿ ಈ ರೀತಿಯ ಪರಿಸ್ಥಿತಿಯನ್ನು ಎದುರಿಸುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿದೆ. ಪ್ರತಿ ಬಾರಿಯೂ ರಾಜಕೀಯ ಸಂಘರ್ಷ ಇರಬಾರದು ಎಂದು ಪಂಜಾಬ್ ಸರ್ಕಾರವನ್ನು ಪ್ರತಿನಿಧಿಸುತ್ತಿದ್ದ ವಕೀಲರಿಗೆ ಸುಪ್ರೀಂಕೋರ್ಟ್ ತಿಳಿಸಿದೆ.
ದೆಹಲಿ-ಎನ್‌ಸಿಆರ್‌ನಲ್ಲಿ ವಾಯುಮಾಲಿನ್ಯಕ್ಕೆ ಸಂಬಂಧಿಸಿದ ವಿಷಯದ ವಿಚಾರಣೆಯ ಸಂದರ್ಭದಲ್ಲಿ, ನ್ಯಾಯ ಪೀಠ ಕೃಷಿ ತ್ಯಾಜ್ಯಗಳ ಸುಡುವುದು, ವಾಹನ ಮಾಲಿನ್ಯ ಮತ್ತು ತ್ಯಾಜ್ಯವನ್ನು ಬಯಲಿನಲ್ಲಿ ಸುಡುವುದು ಮುಂತಾದ ವಿಷಯಗಳ ವಿರುದ್ಧ ಎಚ್ಚರಿಕೆ ನೀಡಿದ್ದು, ಪ್ರಕರಣದ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದೆ.
ಇತ್ತ ದೆಹಲಿ ಹಾಗೂ ಎನ್‌ಸಿಆರ್‌ನಲ್ಲಿ ನ.10ಎರ ವರೆಗೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜೊತೆಗೆ ಡೀಸೆಲ್ ವಾಹನಗಳಿಗೂ ನಿಷೇಧ ಹೇರಲಾಗಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…