ನವದೆಹಲಿ: ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್ ಸಿಪಿ)ದ ಬಣ ಮತ್ತು ಅದರ 15 ಶಾಸಕರು ಸೋಮವಾರ ಮುಂಬೈನ ವೈಬಿ ಚವಾಣ್ ಸೆಂಟರ್‌ನಲ್ಲಿ ಶರದ್ ಪವಾರ್ ಅವರನ್ನು ಭೇಟಿ ಮಾಡಿ, ಪಕ್ಷ ಒಗ್ಗಟ್ಟಿನಿಂದ ಇರುವಂತೆ ನೋಡಿಕೊಳ್ಳಿ ಎಂದು ಕೇಳಿಕೊಂಡಿದ್ದಾರೆ.
ಭಾನುವಾರ ನಡೆದ ಸಭೆಯಲ್ಲಿ ಶರದ್ ಪವಾರ್ ಅವರನ್ನು ಭೇಟಿ ಮಾಡಲು ಸಾಧ್ಯವಾಗದ ಶಾಸಕರು (ಅಜಿತ್ ಪವಾರ್ ಬಣದ) ಇಂದು ಹಾಜರಿದ್ದರು ಎಂದು ಪಟೇಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.