ಕೇರಳ: ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿ ಭಾಷಾಭಿಮಾನ ಮೆರೆದ ಶಾಸಕ ಅಶ್ರಫ್‌

ಕೇರಳ: ಕೇರಳ ವಿಧಾನಸಭೆ ಅಧಿವೇಶನದಲ್ಲಿ ಎ.ಕೆ.ಎಂ. ಅಶ್ರಪ್‌ ಅವರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಭಾಷಾಭಿಮಾನ ಮೆರೆದಿದ್ದಾರೆ.

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಕ್ಷೇತ್ರದಲ್ಲಿ ಬಿಜೆಪಿಯ ಕೆ.ಸುರೇಂದ್ರನ್‌ ವಿರುದ್ಧ ಜಯಗಳಿಸಿದ ಯುಡಿಎಫ್‌ನ ಎ.ಕೆ.ಎಂ. ಅಶ್ರಫ್‌ ನೂತನ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲ್ಲೂಕು ವ್ಯಾಪ್ತಿಯನ್ನು ‘ಕನ್ನಡ ಭಾಷೆಯ ಅಲ್ಪಸಂಖ್ಯಾತ ಪ್ರದೇಶ’ ಎಂಬುದಾಗಿ ಕೇರಳ ಸರ್ಕಾರ ಘೋಷಣೆ ಮಾಡಿದೆ.

× Chat with us