BREAKING NEWS

ರಾಮ ಮಂದಿರ ಉದ್ಘಾಟನೆಗೆ ಅನ್ನಭಾಗ್ಯದ ಅಕ್ಕಿಯಿಂದ ಅಕ್ಷತೆ ತಯಾರಾಗುತ್ತಿರುವುದು ಸಂತೋಷ : ಡಿಕೆಶಿ

ಬೆಂಗಳೂರು : ಇದೇ 22ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು ನಮ್ಮ ಅನ್ನಭಾಗ್ಯ ಅಕ್ಕಿಯಿಂದಲೇ ಅಕ್ಷತೆ ಆಗ್ತಿದೆ ಸಂತೋಷ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ನಮ್ಮನ್ನು ಕರೆದಿಲ್ಲ. ನಾನು ಶಿವನ ಭಕ್ತ. ಎಲ್ಲಾ ದೇವರುಗಳು ನನ್ನ ಹೃದಯದಲ್ಲಿದ್ದಾರೆ. ರಾಮ ಮಂದಿರ ಉದ್ಘಾಟನೆಗೆ ನಮ್ಮ ಅನ್ನಭಾಗ್ಯ ಅಕ್ಕಿಯಿಂದಲೇ ಅಕ್ಷತೆ ಆಗುತ್ತಿರುವುದು ಸಂತೋಷ ಎಂದರು.

ಫುಡ್ ಆಕ್ಟ್ ತಂದಿದ್ಯಾರು ಎಂಬುದನ್ನೇ ಬೊಮ್ಮಾಯಿ ಮರೆತಿದ್ದಾರೆ. ಮೊದಲು ಅನ್ನಭಾಗ್ಯ ಯೋಜನೆಯ ಪ್ರಾರಂಭಿಸಿದ್ದೆ ಸಿಎಂ ಸಿದ್ದರಾಮಯ್ಯ. ಪಾಪ ಬಸವರಾಜ ಬೊಮ್ಮಾಯಿಗೆ ಇದು ಮರೆತುಹೋಗಿದೆ ಎಂದು ಡಿಕೆ ಶಿವಕುಮಾರ್ ಬೊಮ್ಮಾಯಿ ವಿರುದ್ಧ ವಾಗ್ದಾಳಿ ನಡೆಸಿದರು.

ಹೆಚ್‌ಡಿಡಿಗೆ ಡಿಕೆಶಿ ತಿರುಗೇಟು : ಸಿದ್ದರಾಮಯ್ಯ ಡಿಕೆಶಿ ಇಂದಲೇ ಕಾಂಗ್ರೆಸ್ ಅಂತ್ಯ ಎಂಬ ಹೆಚ್‌.ಡಿ.ದೇವೇಗೌಡ ಅವರ ಹೇಳಿಕೆಗೆ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ 136 ಸ್ಥಾನ ಬಂದಿದೆ. ಕಾಂಗ್ರೆಸ್ ಪಕ್ಷಕ್ಕೆ 138 ವರ್ಷಗಳ ಇತಿಹಾಸ ಇದೆ. ಇಬ್ಬರು ಪಕ್ಷೇತರರು ನಮ್ಮ ಪಕ್ಷಕ್ಕೆ ಸೇರಿದ್ದಾರೆ. ದೇವೇಗೌಡರು ಪದೇಪದೇ ನಮ್ಮನ್ನು ನೆನಪಿಸಿಕೊಂಡರೆ ಸ್ಫೂರ್ತಿ ತುಂಬಿದಂತಾಗುತ್ತದೆ ದೇವೇಗೌಡರು ಏನೇ ಮಾತನಾಡಿದರು ಕೂಡ ಅದು ನಮಗೆ ಆಶೀರ್ವಾದವಾಗಿದೆ ಎಂದಿದ್ದಾರೆ.

andolanait

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

2 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

8 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

12 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

12 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

12 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

15 hours ago