ಬೆಂಗಳೂರು: 2013 ರಿಂದ 2023 ರ ವರೆಗೆ ಕೇಳಿ ಬಂದ ಎಲ್ಲ ಭ್ರಷ್ಟಾಚಾರ ಹಗರಣಗಳ ತನಿಖೆ ನಡೆಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಈ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು ಬಿಜೆಪಿ ಸರ್ಕಾರದ ಅವಧಿಯಲ್ಲಿನ 40% ಕಮಿಷನ್ ಪ್ರಕರಣವನ್ನು ಸರ್ಕಾರದ ನ್ಯಾಯಾಂಗ ತನಿಖೆ ನಡೆಸಲು ಆದೇಶಿಸಿದೆ. ಕಾಂಗ್ರೆಸ್‌ನವರು ಒಂದೂವರೆ ವರ್ಷದಿಂದ ಆರೋಪ ಮಾಡುತ್ತಿದ್ದಾರೆ. ಇಲ್ಲಿಯವರೆಗೂ ದಾಖಲೆ ಕೊಟ್ಟಿಲ್ಲ. ತನಿಖೆ ಮಾಡಿದರೆ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಹೇಳಿದರು.
ಸರ್ಕಾರ ನಿಜವಾಗಲೂ ಭ್ರಷ್ಟಾಚಾರ ವಿರುದ್ಧ ಇದ್ದರೆ, 2013 ರಿಂದ 2023 ಮಾರ್ಚ್ ವರೆಗಿನ ಎಲ್ಲಾ ಪ್ರಕರಣಗಳ ಬಗ್ಗೆ ತನಿಖೆ ಮಾಡಬೇಕು. ಕೇವಲ ಸೆಲೆಕ್ಟಿವ್ ಆಗಿ ರಾಜಕೀಯ ಪ್ರೇರಿತವಾಗಿ ತನಿಖೆ ಮಾಡಿದರೆ ಹೇಗೆ? ಎಂದು ಪ್ರಶ್ನಿಸಿದರು. ಯಾರು ಯಾರು ತಪ್ಪಿತಸ್ಥರು ಇದ್ದಾರೆಯೋ ಅವರಿಗೆಲ್ಲಾ ಶಿಕ್ಷೆಯಾಗಬೇಕು ಎಂದರು.
ಈಗಾಗಲೇ ಹಲವು ಪ್ರಕರಣಗಳು ಲೋಕಾಯುಕ್ತದ ಮುಂದೆ ಇವೆ. ಜತೆಗೆ ಬಿಬಿಎಂಪಿ ಇತರ ಇಲಾಖೆ ವಿರುದ್ಧದ 40% ಕಮಿಷನ್ ಕುರಿತಾದ ಪ್ರಕರಣಗಳು ಲೋಕಾಯುಕ್ತಾದಲ್ಲಿವೆ. ಅವುಗಳನ್ನು ತನಿಖೆ ನಡೆಸಲಿ ಎಂದು ಹೇಳಿದರು.
ಗುತ್ತಿಗೆದಾರದ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪದ ವಿರುದ್ಧ ಮುನಿರತ್ನ ಮಾನನಷ್ಟ ಮೊಕದ್ದಮೆ ಹಾಕಿದ್ದಾರೆ. ಇನ್ನೂ ಅದಕ್ಕೆ ಅವರು ದಾಖಲೆಯಾಗಲಿ, ಉತ್ತರವಾಗಲಿ ನೀಡಿಲ್ಲ ಎಂದು ಹೇಳಿದರು.
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…
ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…