BREAKING NEWS

ಕೋಲಾರದಲ್ಲಿ ಜೈ ಭಾರತ್’ ಸಮಾವೇಶಕ್ಕೆ ಸಕಲ ಸಿದ್ಧತೆ

ಕೋಲಾರ: ರಾಹುಲ್‌ ಗಾಂಧಿ ಮೇಲಿನ ಶಿಕ್ಷೆ ಹಾಗೂ ಸಂಸತ್‌ ಸದಸ್ಯತ್ವದ ಅನರ್ಹತೆ ಹಿನ್ನೆಲೆಯಲ್ಲಿ ಸಂವಿಧಾನದ ರಕ್ಷಣೆ ವಿಚಾರವನ್ನು ಮುಂದಿಟ್ಟುಕೊಂಡು ಬೃಹತ್ ಹೋರಾ ಟಕ್ಕೆ ಮುನ್ನುಡಿ ಬರೆಯಲು ಹಾಗೂ ರಾಜ್ಯ ವಿಧಾನಸಭಾ ಚುನಾವಣೆಯ ಪ್ರಚಾರಕ್ಕೆ ಚಾಲನೆ ನೀಡಲು ‘ಜೈ ಭಾರತ್‌’ ಸಮಾವೇಶಕ್ಕೆ ನಗರದಲ್ಲಿ ಕಾಂಗ್ರೆಸ್‌ನಿಂದ ಭರದ ಸಿದ್ಧತೆ ನಡೆದಿದೆ.

ಏ. 10ರಂದು ಬೆಳಿಗ್ಗೆ 11.30ಕ್ಕೆ ಆರಂಭವಾಗಲಿರುವ ಸಮಾವೇಶದಲ್ಲಿ ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ಆಡಳಿತದ ಮೂರು ರಾಜ್ಯದ ಮುಖ್ಯಮಂತ್ರಿಗಳು, ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ಸೇರಿದಂತೆ ರಾಷ್ಟ್ರ ಹಾಗೂ ರಾಜ್ಯ ನಾಯಕರು ಪಾಲ್ಗೊಳ್ಳ ಲಿದ್ದಾರೆ. ಸಮಾವೇಶಕ್ಕೂ ಮುನ್ನ ಪ್ರತಿಭಟನಾ ರ‍್ಯಾಲಿ ನಡೆಸಲೂ ಪಕ್ಷ ಯೋಜನೆ ರೂಪಿಸಿದೆ.

ಸಮಾವೇಶಕ್ಕೆ ನಗರ ಹೊರ ವಲಯದ ಟಮಕದಲ್ಲಿ 11 ಎಕರೆ ವಿಶಾಲ ಪ್ರದೇಶದಲ್ಲಿ ಬೃಹತ್‌ ವೇದಿಕೆ ಸಿದ್ಧಪಡಿಸಲಾಗುತ್ತಿದೆ. ಪಕ್ಕದ ಆರ್‌.ಎಲ್‌. ಜಾಲಪ್ಪ ಆಸ್ಪತ್ರೆಗೆ ಸೇರಿದ ಜಾಗದಲ್ಲಿ ಮೂರು ಹೆಲಿಪ್ಯಾಡ್ ನಿರ್ಮಿಸಲಾಗುತ್ತಿದೆ. ಜಿಲ್ಲಾಧಿಕಾರಿ ಕಚೇರಿ ಬಳಿ 20 ಎಕರೆಯಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗುತ್ತಿದೆ.

2019ರ ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ‘ಮೋದಿ ಉಪನಾಮ’ ಉವಾಚ ಮಾಡಿದ ಕಾರಣ ರಾಹುಲ್ ಎರಡು ವರ್ಷ ಶಿಕ್ಷೆ ಹಾಗೂ ಸಂಸತ್‌ ಸದಸ್ಯತ್ವದ ಅನರ್ಹತೆಗೆ ಕಾರಣವಾಗಿದ್ದೇ ಕೋಲಾರ. ಹಾಗಾಗಿ, ಇಲ್ಲಿಂದಲೇ ಹೋರಾಟ ಆರಂಭಿಸಿ ಬಿಜೆಪಿಗೆ ಸಂದೇಶ ರವಾನಿಸಲು ಕಾಂಗ್ರೆಸ್‌ ಸಜ್ಜಾಗುತ್ತಿದೆ.

ಕನಿಕರ ಗಿಟ್ಟಿಸಲು ವೇದಿಕೆ: ಬಹುತೇಕ ಕ್ಷೇತ್ರಗಳಿಗೆ ಟಿಕೆಟ್‌ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಇಲ್ಲಿಂದಲೇ ಚುನಾವಣಾ ಪ್ರಚಾರದ ಕಹಳೆ ಮೊಳಗಿಸಲು ಈ ವೇದಿಕೆಯನ್ನೇ ಬಳಕೆ ಮಾಡಿಕೊಳ್ಳಲು ಕಾಂಗ್ರೆಸ್‌ ಮುಂದಾಗಿದೆ. ರಾಹುಲ್‌ ಮೇಲಿನ ಶಿಕ್ಷೆ ಹಾಗೂ ಅನರ್ಹತೆಯ ಕನಿಕರ ಗಿಟ್ಟಿಸಿಕೊಳ್ಳುವ ವೇದಿಕೆ ಇದಾಗಿದೆ ಎನ್ನಲಾಗುತ್ತಿದೆ.

ಅಭ್ಯರ್ಥಿ ಘೋಷಣೆ?: ಕೋಲಾರ ಕ್ಷೇತ್ರದಿಂದಲೂ ಸಿದ್ದರಾಮಯ್ಯ ಅವರನ್ನೇ ಕಣಕ್ಕಿಳಿಸುವಂತೆ ರಾಹುಲ್ ಮೇಲೆ ಒತ್ತಡ ಹೇರಲು ಕಾರ್ಯಕರ್ತರು ಸಿದ್ಧತೆ ನಡೆಸಿದ್ದಾರೆ. ಈಚೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಭಾಷಣಕ್ಕೆ ಕಾರ್ಯಕರ್ತರು ಅಡ್ಡಿಪಡಿಸಿದ್ದನ್ನು ಸ್ಮರಿಸಬಹುದು. ಎರಡನೇ ಪಟ್ಟಿಯಲ್ಲೂ ಕೋಲಾರಕ್ಕೆ ಅಭ್ಯರ್ಥಿ ಘೋಷಿಸಿಲ್ಲ. ಹೀಗಾಗಿ, ಅಂದೇ ಕೋಲಾರದ ಅಭ್ಯರ್ಥಿಯನ್ನು ಖುದ್ದಾಗಿ ರಾಹುಲ್‌ ಗಾಂಧಿ ಪ್ರಕಟಿಸುವ ನಿರೀಕ್ಷೆ ಇದೆ ಎಂದು ಪಕ್ಷದ ಮೂಲಗಳು ಹೇಳಿವೆ.

‘ಕೋಲಾರ ಕ್ಷೇತ್ರದಲ್ಲಿ ಸ್ಪರ್ಧಿಸಲು ಮಾನಸಿಕವಾಗಿ ಸಿದ್ಧನಿದ್ದೇನೆ’ ಎಂದು ಹೇಳಿರುವ ಸಿದ್ದರಾಮಯ್ಯ, ಈಗ ರಾಹುಲ್‌ ಒಪ್ಪಿಗೆಗೆ ಕಾಯುತ್ತಿದ್ದಾರೆ. ಈಗಾಗಲೇ, ವರುಣದಲ್ಲಿ ಅವರಿಗೆ ಟಿಕೆಟ್‌ ಘೋಷಣೆಯಾಗಿದೆ. ಸಮಾವೇಶಕ್ಕೆ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಂದ ಜನರನ್ನು ಸೇರಿಸಲು ಪಕ್ಷದಿಂದ ಸಿದ್ಧತೆ ನಡೆಸಿದೆ.

lokesh

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

6 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

33 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago