Mysore
27
scattered clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ವಿಧಾನಸಭಾ ಚುನಾವಣಾ ಅಕ್ರಮ ಆರೋಪ: ಎಚ್‌.ಡಿ ರೇವಣ್ಣಗೆ ಸಮನ್ಸ್‌ ಜಾರಿ

ಬೆಂಗಳೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆಕ್ರಮ ನಡೆಸಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಸಮನ್ಸ್ ಜಾರಿ ಮಾಡುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.

ಶಾಸಕ ಎಚ್ ಡಿ ರೇವಣ್ಣ ಆಯ್ಕೆ ಅಸಿಂಧು ಕೋರಿ ವಕೀಲ ಜಿ.ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಇಂದು (ಅಕ್ಟೋಬರ್ 30) ವಿಚಾರಣೆ ನಡೆಸಿದ ಹೈಕೋರ್ಟ್, ಮತ್ತೆ ಸಮನ್ಸ್ ಜಾರಿಗೆ ಆದೇಶಿಸಿದೆ.

ಚುನಾವಣಾ ತಕರಾರು ಅರ್ಜಿಯ ನಿಯಮದಂತೆ ಸಮನ್ಸ್ ಜಾರಿ ಮಾಡಬೇಕು. ಅದರಂತೆ ಹೈಕೋರ್ಟ್ ನ್ಯಾ.ಜ್ಯೋತಿ ಮೂಲಿಮನಿ ಅವರು ಪ್ರಕ್ರಿಯೆಯಂತೆ ರೇವಣ್ಣ ಸೇರಿದಂತೆ ಇತರೆ ಅಭ್ಯರ್ಥಿಗಳಿಗೂ ಸಮನ್ಸ್? ಜಾರಿಗೆ ಆದೇಶಿಸಿ ಮುಂದಿನ ವಿಚಾರಣೆಯನ್ನು ನವೆಂಬರ್ 29ಕ್ಕೆ ನಿಗದಿಪಡಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೊಳೆನರಸೀಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಎಚ್.ಡಿ.ರೇವಣ್ಣ ಅಕ್ರಮ ನಡೆಸಿ ಆಯ್ಕೆಯಾಗಿದ್ದಾರೆ. ಅವರ ಬೆಂಬಲಿಗರು ಮತದಾರರಿಗೆ ತಲಾ 2 ಕೋಳಿ ಮತ್ತು 2 ಸಾವಿರ ರೂ. ನಗದು ಹಂಚಿ ಮತ ಹಾಕಿಸಿಕೊಂಡಿದ್ದಾರೆ ಎಂದು ಆರೋಪ ಮಾಡಲಾಗಿದೆ. ಇಂತಹ ಅಕ್ರಮ ನಡೆಸಿ ಗೆದ್ದಿರುವ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಜಿ.ದೇವರಾಜೇಗೌಡ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು.

ಇದೇ ಅರ್ಜಿಗೆ ಸಂಬಂಧಿಸಿದಂತೆ ರೇವಣ್ಣ ಅವರಿಗೆ ಸಮನ್ಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿತ್ತು. ಆದ್ರೆ, ರೇವಣ್ಣ ಅವರಿಗೆ ಸಮನ್ಸ್ ಜಾರಿಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಅರ್ಜಿದಾರರ ಪರ ಹಿರಿಯ ವಕೀಲೆ ಪ್ರಮಿಳಾ ನೇಸರ್ಗಿ ಅವರು ಪತ್ರಿಕಾ ಪ್ರಕಟಣೆ ಮೂಲಕ ಸಮನ್ಸ್ ಜಾರಿಗೆ ಮನವಿ ಮಾಡಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ