ಬೆಂಗಳೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆಕ್ರಮ ನಡೆಸಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಸಮನ್ಸ್ ಜಾರಿ ಮಾಡುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.
ಶಾಸಕ ಎಚ್ ಡಿ ರೇವಣ್ಣ ಆಯ್ಕೆ ಅಸಿಂಧು ಕೋರಿ ವಕೀಲ ಜಿ.ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಇಂದು (ಅಕ್ಟೋಬರ್ 30) ವಿಚಾರಣೆ ನಡೆಸಿದ ಹೈಕೋರ್ಟ್, ಮತ್ತೆ ಸಮನ್ಸ್ ಜಾರಿಗೆ ಆದೇಶಿಸಿದೆ.
ಚುನಾವಣಾ ತಕರಾರು ಅರ್ಜಿಯ ನಿಯಮದಂತೆ ಸಮನ್ಸ್ ಜಾರಿ ಮಾಡಬೇಕು. ಅದರಂತೆ ಹೈಕೋರ್ಟ್ ನ್ಯಾ.ಜ್ಯೋತಿ ಮೂಲಿಮನಿ ಅವರು ಪ್ರಕ್ರಿಯೆಯಂತೆ ರೇವಣ್ಣ ಸೇರಿದಂತೆ ಇತರೆ ಅಭ್ಯರ್ಥಿಗಳಿಗೂ ಸಮನ್ಸ್? ಜಾರಿಗೆ ಆದೇಶಿಸಿ ಮುಂದಿನ ವಿಚಾರಣೆಯನ್ನು ನವೆಂಬರ್ 29ಕ್ಕೆ ನಿಗದಿಪಡಿಸಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೊಳೆನರಸೀಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಎಚ್.ಡಿ.ರೇವಣ್ಣ ಅಕ್ರಮ ನಡೆಸಿ ಆಯ್ಕೆಯಾಗಿದ್ದಾರೆ. ಅವರ ಬೆಂಬಲಿಗರು ಮತದಾರರಿಗೆ ತಲಾ 2 ಕೋಳಿ ಮತ್ತು 2 ಸಾವಿರ ರೂ. ನಗದು ಹಂಚಿ ಮತ ಹಾಕಿಸಿಕೊಂಡಿದ್ದಾರೆ ಎಂದು ಆರೋಪ ಮಾಡಲಾಗಿದೆ. ಇಂತಹ ಅಕ್ರಮ ನಡೆಸಿ ಗೆದ್ದಿರುವ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಜಿ.ದೇವರಾಜೇಗೌಡ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು.
ಇದೇ ಅರ್ಜಿಗೆ ಸಂಬಂಧಿಸಿದಂತೆ ರೇವಣ್ಣ ಅವರಿಗೆ ಸಮನ್ಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿತ್ತು. ಆದ್ರೆ, ರೇವಣ್ಣ ಅವರಿಗೆ ಸಮನ್ಸ್ ಜಾರಿಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಅರ್ಜಿದಾರರ ಪರ ಹಿರಿಯ ವಕೀಲೆ ಪ್ರಮಿಳಾ ನೇಸರ್ಗಿ ಅವರು ಪತ್ರಿಕಾ ಪ್ರಕಟಣೆ ಮೂಲಕ ಸಮನ್ಸ್ ಜಾರಿಗೆ ಮನವಿ ಮಾಡಿದ್ದರು.
ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…
ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸದ್ಯ,ಪೊಲೀಸ್ ಇಲಾಖೆಯ ಮೂರು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷಾ ದಿನಾಂಕ…
ದೇಶದ ಹಲವು ಕಡೆ ಮತ್ತೆ ಪಕ್ಷಾಂತರದ ಹಾವಳಿ ಶುರುವಾಗಿದೆ. ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಕೈವಾಡವಿಲ್ಲದೆ ಈ ಪಕ್ಷಾಂತರ…
ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…
ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್‌ಕಾಂಗ್‌ಗೆ ಬಂದಾಗ…