ಬೆಂಗಳೂರು : ಭೂ ಕಬಳಿಕೆ, ಹಲ್ಲೆ ಹಾಗೂ ಜಾತಿ ನಿಂದನೆ ಆರೋಪದ ಅಡಿಯಲ್ಲಿ ಯೋಜನೆ ಹಾಗೂ ಸಾಂಖ್ಯಿಕ ಖಾತೆ ಸಚಿವ ಡಿ.ಸುಧಾಕರ್ ಅವರ ವಿರುದ್ಧ ದೂರು ದಾಖಲಾಗಿದೆ.
ನಗರದ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ಪ್ರಕರಣ ದಾಖಲಿಸಲಾಗಿದ್ದು, ಸುಬ್ಬಮ್ಮ ಎಂಬುವರು ದೂರುದಾರರಾಗಿದ್ದಾರೆ. ದೂರು ಆಧರಿಸಿ ಸಚಿವ ಡಿ.ಸುಧಾಕರ್, ಶ್ರೀನಿವಾಸ್ ಮತ್ತು ಭಾಗ್ಯಮ್ಮ ಎಂಬುವರ ವಿರುದ್ಧ ದಲಿತರ ಮೇಲೆ ದೌರ್ಜನ್ಯ, ವಂಚನೆ, ಹಲ್ಲೆ ಹಾಗೂ ಜಾತಿ ನಿಂದನೆ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದಲ್ಲಿ ಸುಧಾಕರ್ ಅವರನ್ನು ಎರಡನೇ ಆರೋಪಿಯನ್ನಾಗಿ ಮಾಡಲಾಗಿದೆ.
ಸೆವೆನ್ ಹಿಲ್ಸ್ ಡೆವಲಪರ್ಸ್ ಮತ್ತು ಟ್ರೇಡರ್ಸ್ ಕಂಪೆನಿಯ ಪಾಲುದಾರರಾದ ಸಚಿವ ಸುಧಾಕರ್ ಅವರು ಯಲಹಂಕ ಗ್ರಾಮದ ಸರ್ವೆ ನಂ. 108/1ರ ಜಮೀನನ್ನು ಮೋಸದಿಂದ ಕಬಳಿಸಿದ್ದಾರೆ. ಈ ಜಮೀನಿನ ವಿವಾದ ಕೋರ್ಟ್‌ನಲ್ಲಿ ಬಾಕಿಯಿದ್ದರೂ, ಸಚಿವರು ಗುಂಪು ಕಟ್ಟಿಕೊಂಡು ಬಂದು ದೌರ್ಜನ್ಯ ಎಸಗಿದ್ದಾರೆ. ಮನೆಯಲ್ಲಿದ್ದ ತಮ್ಮ ಮಗಳ ಮೇಲೆ ಹಲ್ಲೆ ನಡೆಸಲಾಗಿದೆ.
ಕುಟುಂಬದ ಮಹಿಳೆಯರನ್ನು ಹೊರಹಾಕಿ ಜೆಸಿಬಿ ಯಂತ್ರ ಬಳಸಿ ಮನೆಯನ್ನು ಕೆಡವಲಾಗಿದೆ ಎಂದು ಸುಬ್ಬಮ್ಮ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.
ಸೆವೆನ್ ಹಿಲ್ಸ್ ಡೆವಲಪರ್ಸ್ ಮತ್ತು ಟ್ರೇಡರ್ಸ್ ಆಸ್ತಿಗೆ 11 ಮಂದಿ ಅತಿಕ್ರಮ ಪ್ರವೇಶ ಮಾಡಿದ್ದಾರೆ ಎಂದು ಆರೋಪಿಸಿ ಸುಧಾಕರ್ ಅವರ ಪುತ್ರ ಸುಹಾಸ್ ಪೊಲೀಸ್ ದೂರು ನೀಡಿದ ಒಂದು ದಿನದ ನಂತರ ಈ ಪ್ರಕರಣ ನಡೆದಿದೆ.
ಲಕ್ಷಾಂತರ ರೂ. ಫಸಲು ನಾಶವಾಗುತ್ತಿದೆ ಎಂದು ರೈತರ ಅಳಲು; ಸೂಕ್ತ ಕ್ರಮಕ್ಕೆ ಅರಣ್ಯ ಇಲಾಖೆಗೆ ಆಗ್ರಹ ಹನೂರು: ತಾಲ್ಲೂಕಿನ ಕಾವೇರಿ…
ಹನೂರು: ಉಡುತೊರೆ ಹಳ್ಳ ಜಲಾಶಯದಿಂದ ರೈತರ ಜಮೀನುಗಳಿಗೆ ನೀರು ಹರಿಸಲು ನಿರ್ಮಾಣ ಮಾಡಿದ್ದ ಸಣ್ಣ ಸಣ್ಣ ಕಾಲುವೆಗಳನ್ನು ಮುಚ್ಚಿ ಜಮೀನು…
ಗಿರೀಶ್ ಹುಣಸೂರು ಜ್ವರ, ಶೀತ, ಕೆಮ್ಮು ಕಾಯಿಲೆಗಳ ಭೀತಿ; ಆಸ್ಪತ್ರೆಗಳಿಗೆ ಎಡತಾಕುವ ಪರಿಸ್ಥಿತಿ ಮೈಸೂರು: ರಾಜ್ಯದಲ್ಲಿ ತಾಪಮಾನ ಕುಸಿತದಿಂದಾಗಿ ಚಳಿಯ…
ಎಸ್.ಎಸ್.ಭಟ್ ನಂಜನಗೂಡು: ಭಾನುವಾರ ನಿಧನರಾದ ಆಧುನಿಕ ದಾವಣಗೆರೆಯ ನಿರ್ಮಾತೃ ಶಾಮನೂರು ಶಿವಶಂಕರಪ್ಪ ಅವರಿಗೂ ಹಾಗೂ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ…
ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…