ಬೆಂಗಳೂರು : ಹಣ ಮತ್ತು ಕೊಳಿ ಮಾಂಸ ಹಂಚಿ ವಿಧಾನಸಭೆ ಚುನಾವಣೆಯಲ್ಲಿ ಗೆದ್ದಿರುವುದಾಗಿ ಆರೋಪಿಸಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಮಾಜಿ ಸಚಿವ ಹಾಗೂ ಹಾಸನ ಜಿಲ್ಲೆಯ ಹೊಳೆನರಸೀಪುರ ಕ್ಷೇತ್ರದ ಹಾಲಿ ಶಾಸಕ ಎಚ್.ಡಿ.ರೇವಣ್ಣಗೆ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಇದೇ ವೇಳೆ, ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಾಟೀಲ್‍ಗೂ ಸಮನ್ಸ್ ಜಾರಿ ಮಾಡಲಾಗಿದೆ. ಹೊಳೆನರಸೀಪುರ ಪರಾಜಿತ ಅಭ್ಯರ್ಥಿ ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಸಮನ್ಸ್ ಜಾರಿ ಮಾಡಿ ವಿಚಾರಣೆಯನ್ನು ಸೆ.4ಕ್ಕೆ ಮುಂದೂಡಿದೆ.
ರೇವಣ್ಣ ಅವರು ಚುನಾವಣೆ ಅಕ್ರಮದಿಂದ ಶಾಸಕರಾಗಿದ್ದು, ಅವರನ್ನು ಅನರ್ಹಗೊಳಿಸಿ ಮೂರನೆ ಸ್ಥಾನದಲ್ಲಿರುವ ತನ್ನನ್ನು ಶಾಸಕ ಎಂದು ಘೋಷಿಸುವಂತೆ ದೇವರಾಜೇಗೌಡ ಸಲ್ಲಿಸಿರುವ ಅರ್ಜಿಯಲ್ಲಿ ಕೋರಲಾಗಿದೆ. ಇದೇ ಕ್ಷೇತ್ರದಲ್ಲಿ ಎರಡನೆ ಸ್ಥಾನದಲ್ಲಿ ಇರುವ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧವೂ ಆರೋಪಿಸಲಾಗಿದೆ.
ಈ ಬೆಳವಣಿಗೆ ಪ್ರಜಾಪ್ರತಿನಿಧಿ ಕಾಯಿದೆ 1951ರ ಸೆಕ್ಷನ್ 123ಕ್ಕೆ ವಿರುದ್ಧವಾಗಿದ್ದು, ಭ್ರಷ್ಟಾಚಾರ ನಡೆಸಿರುವುದು ತಿಳಿದು ಬರಲಿದೆ. ಈ ಬೆಳವಣಿಗೆಯನ್ನು ಅರ್ಜಿದಾರರು ಪ್ರಶ್ನಿಸಿದ ಸಂದರ್ಭದಲ್ಲಿ ರೇವಣ್ಣ ಅವರ ಪರ ಕಾರ್ಯನಿರ್ವಹಿಸುತ್ತಿದ್ದು, ಬೆಂಬಲಿಗರು ಕಾರನ್ನು ತಡೆದು ಗಾಜನ್ನು ಪುಡಿ ಪುಡಿ ಮಾಡಿದ್ದರು. ಅಷ್ಟೇ ಅಲ್ಲದೆ, ದೊಣ್ಣೆ ಕಲ್ಲುಗಳಿಂದ ಹೊಡೆದಿದ್ದರು. ಇದೇ ವೇಳೆ, ಅರ್ಜಿದಾರರ ಗನ್‍ಮ್ಯಾನ್ ಅಂಗ ರಕ್ಷಕನಿಗೆ ಹಲ್ಲೆ ನಡೆಸಲಾಗಿತ್ತು. ಘಟನೆ ಸಂಬಂಧ ಚನ್ನರಾಯಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.
ಅಲ್ಲದೆ, ರೇವಣ್ಣ ಅವರು ಬ್ಯಾಂಕ್‍ನ ಖಾತೆಯಲ್ಲಿರುವ ಮೊತ್ತವನ್ನೂ ಸರಿಯಾದ ರೀತಿಯಲ್ಲಿ ಸೂಕ್ತ ರೀತಿಯಲ್ಲಿ ವಿವರಿಸಿಲ್ಲ. ಅಭ್ಯರ್ಥಿಯ ಮಾಹಿತಿ ಒದಗಿಸದೇ ಇರುವುದು ಕಾನೂನು ಬಾಹಿರವಾಗಲಿದೆ. ಹೀಗಾಗಿ, ಚುನಾವಣಾ ಅಧಿಕಾರಿಗಳು ನಾಮಪತ್ರ ತಿರಸ್ಕರಿಸಬೇಕು ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…
ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…
ಮಂಡ್ಯ: ತಾಲ್ಲೂಕಿನ ಹೊಸ ಬೂದನೂರಿನಲ್ಲಿ ನೆಲೆಯಾಗಿರುವ ಕಾಶಿ ವಿಶ್ವನಾಥ ಹಾಗೂ ಅನಂತಪದ್ಮನಾಭಸ್ವಾಮಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ಉತ್ಸವಕ್ಕೆ…