BREAKING NEWS

ಮರ ಕಡಿದ ಆರೋಪ: ಸಂಸದ ಪ್ರತಾಪ್‌ ಸಿಂಹ ತಮ್ಮ ವಿಕ್ರಮ್‌ ಸಿಂಹ ವಶಕ್ಕೆ

ಹಾಸನ: ಹಾಸನ ಜಿಲ್ಲೆಯಲ್ಲಿ ಕೋಟ್ಯಾಂತರ ರೂ ಮೌಲ್ಯದ ಮರಗಳನ್ನು ಕಡಿದ ಆರೋಪದಡಿಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಅವರ ತಮ್ಮ ವಿಕ್ರಮ್‌ ಸಿಂಹ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಸರ್ಕಾರಿ ಗೋಮಾಳ ಸೇರಿ ೧೨ ಎಕರೆಯಲ್ಲಿ ಬೆಳೆದಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ೧೨೬ ಮರಗಳನ್ನು ಕಡಿದು ಸಾಗಾಟ ಮಾಡಿದ ಆರೋಪದ ಮೇಲೆ ವಿಕ್ರಮ್‌ ಸಿಂಹ ಅವರನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ಬೆಂಗಳೂರಿನ ಮಲ್ಲೇಶ್ವರದ ಅರಣ್ಯ ಭವನಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

ಸುಮಾರು ೨೦ ರಿಂದ ೩೦ ಲೋಡ್‌ ಮರಗಳನ್ನು ಕಡಿದು ಮಾರಾಟ ಮಾಡಿರುವ ಹಿನ್ನಲೆ ಬಂಧಿಸಲಾಗಿದೆ. ಜಯಮ್ಮರ ೧೬.ಪಿ೨ ರಲ್ಲಿ ೩ ಎಕರೆ ೧೦ ಗುಂಟೆ ಜಾಗದಲ್ಲಿ ಶುಂಠಿ ಬೆಳೆಯಲು ಒಪ್ಪಂದಕ್ಕೆ ಪ್ರತಾಪ್‌ ಸಿಂಹ ಸಹೋದರ ವಿಕ್ರಮ್‌ ಸಿಂಹ ಸಹಿ ಹಾಕಿದ್ದರು. ಅಲ್ಲಿ ಹೊನ್ನೆ, ನಂದಿ, ಗರಿ ಹೆಬ್ಬೇವು, ಹೆಬ್ಬೆಲಸು, ಮಾವು ಮತ್ತು ಹಲಸು ಮರಗಳು ಸೇರಿದಂತೆ ಹಲವು ಮರಗಳನ್ನು ಕಡಿದು ಸಾಗಾಟ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ.

 

andolanait

Recent Posts

ವೈಭವ್‌ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್‌ : ಸಿಎಸ್‌ಕೆ ವಿರುದ್ಧ ಆರ್‌ಆರ್‌ಗೆ ಗೆಲುವು

ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್‌ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್‌ ಕಿಂಗ್ಸ್‌…

6 hours ago

ಮೈಸೂರು ರೇಸ್ ಕ್ಲಬ್ ಚುನಾವಣೆ; ಸದಸ್ಯರಾಗಿ ಐವರ ಆಯ್ಕೆ

ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…

8 hours ago

ಫಾಸ್ಟ್‌ಟ್ಯಾಗ್ ಇಲ್ಲದಿದ್ದರೆ ಹೆದ್ದಾರಿಗಿಲ್ಲ ಪ್ರವೇಶ

ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…

9 hours ago

ಅಮೆರಿಕದೊಂದಿಗೆ ಯಾವುದೇ ನೇರ ಮಾತುಕತೆ ನಡೆದಿಲ್ಲ : ಇರಾನ್‌ ಸ್ಪಷ್ಟನೆ

ಟೆಹ್ರಾನ್‌ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…

9 hours ago

ಹೊರ್ಮುಜ್‌ ಜಲಸಂಧಿ ಮುಕ್ತಗೊಳಿಸಿ ; ಇರಾನ್‌ಗೆ ಅಂತಿಮ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್‌ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…

9 hours ago

ದೇಶದಲ್ಲೇ ಮೊದಲ ಮಕ್ಕಳ ಬೃಹತ್ ಆಸ್ಪತ್ರೆ ಬೆಂಗಳೂರಿನಲ್ಲಿ

ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…

10 hours ago