BREAKING NEWS

ಸಿಅರ್‌ಪಿಎಫ್ ಪರೀಕ್ಷೆಗಳನ್ನು ಕನ್ನಡವೂ ಸೇರಿದಂತೆ ರಾಜ್ಯ ಭಾಷೆಗಳಲ್ಲಿ ಬರೆಯಲು ಅವಕಾಶ ನೀಡಿ: ಕೇಂದ್ರಕ್ಕೆ ಸಿದ್ದು ಮನವಿ

ಬೆಂಗಳೂರು: ಕನ್ನಡ ಭಾಷೆಯಲ್ಲೂ ಲಿಖಿತ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಿದ್ದರಾಮಯ್ಯ, ಕೇಂದ್ರ ಮೀಸಲು ಪೊಲೀಸ್ ಪಡೆಯ ನೇಮಕಾತಿ ಪರೀಕ್ಷೆಯಲ್ಲಿ ಭಾಷೆಯ ಸಮಸ್ಯೆಯಿಂದಾಗಿ ಜ್ಞಾನ, ಅರ್ಹತೆ ಇರುವ ಕನ್ನಡಿಗರು ಉದ್ಯೋಗ ವಂಚಿತರಾಗುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಕೂಡಲೇ ಮಧ್ಯಪ್ರವೇಶಿಸಿ ಈ ಅನ್ಯಾಯವನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕೇಂದ್ರ ಮೀಸಲು ಪೊಲೀಸ್ ಪಡೆಯ ನೇಮಕಾತಿ ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಬರೆಯುವುದನ್ನು ಕಡ್ಡಾಯಗೊಳಿಸಿರುವುದನ್ನು ತಕ್ಷಣ ಸಡಿಲಿಸಿ, ಕನ್ನಡ ಭಾಷೆಯಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟು ಈ ಅನ್ಯಾಯವನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಭಾಷೆಯೇ ಜ್ಞಾನ ಅಲ್ಲ, ಅದು ಜ್ಞಾನದ ಸಂವಹನ ಸಾಧನ ಅಷ್ಟೇ. ಕನ್ನಡ ಭಾಷಾ ಮಾಧ್ಯಮದಲ್ಲಿ ಓದಿದ ನಮ್ಮ ಯುವಜನರು ಜ್ಞಾನಿಗಳಾಗಿದ್ದರೂ ಭಾಷೆಯ ಸಮಸ್ಯೆಯಿಂದಾಗಿ ಕೇಂದ್ರ ಸರ್ಕಾರ ನಡೆಸುವ ಪರೀಕ್ಷೆಯಲ್ಲಿ ಅನುತ್ತೀರ್ಣರಾಗುತ್ತಿದ್ದಾರೆ. ಇದು ಅನ್ಯಾಯ ಎಂದು ದೂರಿದ್ದಾರೆ.

ಅಲ್ಲದೆ ರಾಜ್ಯದ ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದಾಗಿ ರಾಜ್ಯದಲ್ಲಿ ಮತ್ತು ಕೇಂದ್ರದ ಬಿಜೆಪಿ ಸರ್ಕಾರದ ಭಾಷಾ ನೀತಿಯಿಂದಾಗಿ ಕೇಂದ್ರದಲ್ಲಿ ಕನ್ನಡಿಗ ಯುವಜನರು ಉದ್ಯೋಗ ವಂಚಿತರಾಗುತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ನಿರುದ್ಯೋಗದ ಪ್ರಮಾಣ ಹೆಚ್ಚಾಗುತ್ತಿದೆ, ಯುವಜನರ ಭವಿಷ್ಯ ಮಂಕಾಗುತ್ತಿದೆ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಕೇಂದ್ರದ ಬಿಜೆಪಿ ಸರ್ಕಾರ ರಾಜ್ಯ ಭಾಷೆಗಳನ್ನು ಮೂಲೆಗೆ ತಳ್ಳಿ ಹಿಂದಿ ಭಾಷೆಯನ್ನು ನಮ್ಮ ತಲೆ ಮೇಲೆ ಹೇರುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಾ ಬಂದಿದೆ. ಉದ್ಯಮ, ಉದ್ಯೋಗ, ಶಿಕ್ಷಣ ಹೀಗೆ ಪ್ರತಿಯೊಂದು ಕ್ಷೇತ್ರದಲ್ಲಿಯೂ ಹಿಂದಿ ಭಾಷೆಯ ಯಜಮಾನಿಕೆ ಹೆಚ್ಚಾಗುತ್ತಿದೆ. ಇದನ್ನು ಸಹಿಸಲು ಸಾಧ್ಯ ಇಲ್ಲ’ ಎಂದು ಎಚ್ಚರಿಸಿದ್ದಾರೆ.

ಅಂತೆಯೇ ‘ಈಗಲೂ ಕಾಲ ಮಿಂಚಿಲ್ಲ ಪ್ರಧಾನಿ ನರೇಂದ್ರ ಮೋದಿ ಅವರು ತಕ್ಷಣ ಮಧ್ಯೆ ಪ್ರವೇಶಿಸಿ ಸಿಅರ್‌ಪಿಎಫ್ ಪರೀಕ್ಷೆಗಳನ್ನು ಕನ್ನಡವೂ ಸೇರಿದಂತೆ ರಾಜ್ಯ ಭಾಷೆಗಳಲ್ಲಿ ಬರೆಯಲು ಅನುಕೂಲ ಮಾಡಿಕೊಡಬೇಕು. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮತ್ತು ಬಿಜೆಪಿ ಸಂಸದರು ಇದಕ್ಕಾಗಿ ಪ್ರಧಾನಿಗಳ ಮೇಲೆ ಒತ್ತಡ ಹೇರಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಕಾಡುವುದು ಅನುಮಾನ!

ಕಾಡುವುದು ಅನುಮಾನ! ಈಗ ಎಲ್ಲೆಲ್ಲೂ ಕೃತಕ ಬುದ್ಧಿಮತ್ತೆಯದೆ ಸುದ್ದಿ! ಕೃತಕ ಬುದ್ಧಿಮತ್ತೆಗೆ ನೈಜ ಬುದ್ಧಿಮತ್ತೆ ಮೂಲವಾದರೂ ಕಾಡುವುದು ಅನುಮಾನ ಕೃತಕ…

3 hours ago

ಓದುಗರ ಪತ್ರ: ಎಐ ಸಾಕ್ಷರತೆ ಕಡ್ಡಾಯವಾಗಲಿ

ಇಂದಿನ ತಾಂತ್ರಿಕ ಯುಗದಲ್ಲಿ ಸರ್ಕಾರಗಳು ಕೇವಲ ನಿಯಂತ್ರಕರಾಗಿ ಉಳಿಯದೆ, ಮಾರ್ಗದರ್ಶಕ ಶಕ್ತಿಯಾಗಿಯೂ ಕಾರ್ಯನಿರ್ವಹಿಸಬೇಕಿದೆ. ಮೊದಲನೆಯದಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ಮೂಲಭೂತ ಬದಲಾವಣೆ…

3 hours ago

ಓದುಗರ ಪತ್ರ: ಉಚಿತ ಕೊಡುಗೆಗಳ ಬಗ್ಗೆ ಪರಾಮರ್ಶೆ ಅಗತ್ಯ

ಉಚಿತ ಕೊಡುಗೆ ಪ್ರಕಟಿಸುವ ರಾಜಕೀಯ ಪಕ್ಷಗಳ ನಡೆಗೆ ಕಳೆದ ಗುರುವಾರ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿರುವುದು ಸ್ವಾಗತಾರ್ಹವಾಗಿದೆ. ಚುನಾವಣೆ ವೇಳೆ…

3 hours ago

ಸಫಾರಿಗೆ ಸ್ಥಳೀಯರ ಸ್ವಾಗತ… ರೈತ ಮುಖಂಡರ ವಿರೋಧ

ಪ್ರಶಾಂತ್ ಎನ್.ಮಲ್ಲಿಕ್ ಇಂದಿನಿಂದ ಬಂಡೀಪುರ-ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ ವನ್ಯಜೀವಿ ಸಫಾರಿ ಪುನರಾರಂಭ  ಮೈಸೂರು: ಬಂಡೀಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ…

3 hours ago

ಮಹಾಶಿವರಾತ್ರಿ ಜಾತ್ರೆ; ೩.೩೫ ಕೋಟಿ ರೂ.ಆದಾಯ

ಮಹಾದೇಶ್ ಎಂ.ಗೌಡ ಮಲೆ ಮಹದೇಶ್ವರ ಬೆಟ್ಟಕೆ ಆಗಮಿಸಿದ ಲಕ್ಷಾಂತರ ಭಕ್ತಾದಿಗಳಿಂದ ಕಾಣಿಕೆ ಅರ್ಪಣೆ  ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ…

3 hours ago

ಪಿಯುಸಿ ಪರೀಕ್ಷೆ ಅಕ್ರಮ ತಡೆಗೆ ವೆಬ್ ಕಾಸ್ಟಿಂಗ್ ಕಣ್ಗಾವಲು

ಕೆ.ಬಿ.ರಮೇಶನಾಯಕ ಮೈಸೂರು ಜಿಲ್ಲೆಯಲ್ಲಿ ೫೧ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ ಪರೀಕ್ಷಾ ಕೇಂದ್ರಗಳ ವೀಕ್ಷಣೆಗೆ ೧೦ ಉಪನ್ಯಾಸಕರ ತಂಡ ರಚನೆ…

3 hours ago