ಚೆನ್ನೈ: ಕೇಂದ್ರ ಮೀಸಲು ಪೊಲೀಸ್ ಪಡೆಗೆ(ಸಿಆರ್‌ಪಿಎಫ್) ನಡೆಸುವ ನೇಮಕಾತಿ ಪರೀಕ್ಷೆಯಲ್ಲಿ ಹಿಂದಿಯೇತರ ರಾಜ್ಯಗಳ ಅಭ್ಯರ್ಥಿಗಳಿಗೆ ಮಾತೃಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಆಗ್ರಹಿಸಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.
ಈ ಕುರಿತಾಗಿ ಭಾನುವಾರ ಮುಖ್ಯಮಂತ್ರಿಯವರು ಪತ್ರ ಬರೆದಿದ್ದಾರೆ ಎಂದು ತಮಿಳುನಾಡು ಸರ್ಕಾರ ಪ್ರಕಟಿಸಿದೆ.
ಸಿಆರ್‌ಪಿಎಫ್ ನೇಮಕಾತಿ ಪರೀಕ್ಷೆ ಹಿಂದಿ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ನಡೆಯುತ್ತಿದ್ದು, ಇದರಿಂದ ತಮಿಳು ನಾಡಿನಂಥ ರಾಜ್ಯಗಳಿಂದ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಹಿನ್ನೆಡೆಯಾಗುತ್ತಿದೆ. ಆಯಾಯ ಅಭ್ಯರ್ಥಿಗಳ ರಾಜ್ಯದ ಪ್ರಧಾನ ಭಾಷೆಯ ಮೂಲಕವೇ ಪರೀಕ್ಷೆ ಬರೆಯಲು ಅವಕಾಶ ಕೊಡಬೇಕೆಂದು ಸ್ಟಾಲಿನ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ.
ಸಿಆರ್‌ಪಿಎಫ್ ಪ್ರಶ್ನೆ ಪತ್ರಿಕೆಯಲ್ಲಿ 100 ಅಂಕಗಳಲ್ಲಿ 25 ಅಂಕ ಹಿಂದಿ ಗ್ರಹಿಕೆಗೆ ಮೀಸಲಾಗಿದೆ. ಆದರೆ ಇದರಿಂದ ಹಿಂದಿ ಮಾತನಾಡುವ ವಿದ್ಯಾರ್ಥಿಗಳಿಗೆ ಮಾತ್ರ ಪ್ರಯೋಜನವಾಗುತ್ತಿದೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.
ಕೋಲ್ಕತ್ತಾ : ಟಿ20 ವಿಶ್ವಕಪ್ನ ಸೂಪರ್ 8 ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದೆ. ದಕ್ಷಿಣ ಆಫ್ರಿಕಾ ನೀಡಿದ್ದ…
ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…
ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…
ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು…
ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು…
ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…