ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೊಲೆ ಭಾಗ್ಯವನ್ನು ನೀಡಿದೆ ಎಂದು ಮಾಜಿ ಸಚಿವ ಆರ್ ಅಶೋಕ್ ಕಿಡಿಕಾರಿದರು.
ವಿಧಾನಸೌಧದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಹಲವು ಭಾಗ್ಯ ನೀಡಿದೆ. ಈಗ ಕೊಲೆ ಭಾಗ್ಯ ಸೇರ್ಪಡೆ ಆಗಿದೆ ಎಂದು ವಾಗ್ದಾಳಿ ನಡೆಸಿದರು.
ಜೈನ ಮುನಿ ಹತ್ಯೆ ದೇಶ ಬೆಚ್ಚಿ ಬಿದ್ದಿದೆ. ಇದರ ಹಿಂದೆ ವಿದೇಶಿ ಸಂಚು ಇದೆ. ಅದಕ್ಕೆ ಸಿಬಿಐಗೆ ನೀಡಬೇಕು ಎಂದು ಆಗ್ರಹಿಸಿದರು. ಟಿ ನರಸೀಪುರದಲ್ಲಿ ನಡೆದ ಹನುಮ ಜಯಂತಿ ಕಾರ್ಯಕ್ರಮಲ್ಲಿ ಮೆರವಣಿಗೆಯಲ್ಲೇ ರಾಜಾರೋಷವಾಗಿ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಕೊಲೆಯಾಗಿದೆ. ಜನರು ಭಯದಲ್ಲಿ ಇದ್ದಾರೆ. ಬೆಂಗಳೂರಿನಲ್ಲಿ ಜೋಡಿ ಕೊಲೆ ಆಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದರು.
ನಾವು ಅಧಿಕಾರದಲ್ಲಿ ಇದ್ದಾಗ ಪಾಕಿಸ್ತಾನಕ್ಕೆ ಜಿಂದಾಬಾದ್ ಕೂಗಿದ್ದ ಕಿಡಿಗೇಡಿಗಳನ್ನು ಹಡೆಮುರಿ ಕಟ್ಟಿದ್ದೆವು. ಆದರೆ ಇವಾಗ ಪಾಕಿಸ್ತಾನದ ಜಿಂದಾಬಾದ್ ಕೂಗುವ ಮಟ್ಟಕ್ಕೆ ಜನರು ಬಂದಿದ್ದಾರೆ. ಪೊಲೀಸರ ಹಾಗೂ ಕಾನೂನು ಸುವ್ಯವಸ್ಥೆಯ ಭಯ ಇಲ್ಲ, ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿ ಹೋಗಿದೆ. ಈ ಹಿನ್ನಲೆಯಲ್ಲಿ ರಾಜ್ಯಪಾಲರಿಂದ ಮನವಿ ಮಾಡುತ್ತೇವೆ. ರಾಜ್ಯವ್ಯಾಪಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…
ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…
ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…
ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…