ಬೆಂಗಳೂರು: ಅಮರನಾಥ ಯಾತ್ರೆಗೆ ತೆರಳಿ ಹವಾಮಾನ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿರುವ 80 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಗದಗನಿಂದ ತೆರಳಿರುವ 23 ಮಂದಿ ಸೇರಿದಂತೆ ಒಟ್ಟು 80 ಮಂದಿ ಕನ್ನಡಿಗರು ಅಮರನಾಥ ಯಾತ್ರೆಗೆ ತೆರಳಿದ್ದಾರೆ. ಅಮರಾನಾಥ ಮಂದಿರದಿಂದ 6 ಕಿಮೀ ದೂರದಲ್ಲಿರುವ ಪಂಚತಾರ್ನಿ ಟೆಂಟ್‍ನಲ್ಲಿ ಸಿಲುಕಿದ್ದಾರೆ ಎನ್ನುವ ಮಾಹಿತಿ ಲಭ್ಯವಿದ್ದು, ಈ ಹಿನ್ನೆಲೆಯಲ್ಲಿ ಕೂಡಲೇ ರಕ್ಷಣಾ ಕಾರ್ಯ ಕೈಗೊಂಡು, ಎಲ್ಲರನ್ನೂ ಸುರಕ್ಷಿತವಾಗಿ ವಾಪಸು ಕರೆತರುವಂತೆ ಅಕಾರಿಗಳಿಗೆ ಸೂಚಿಸಲಾಗಿದೆ ಎಂದಿದ್ದಾರೆ.
ಭಾರಿ ಮಳೆ ಹಿನ್ನೆಲೆ ಹೆಲಿಕಾಪ್ಟರ್ ಮತ್ತು ವಿಮಾನದ ಮೂಲಕ ನೆರವಿಗೆ ಧಾವಿಸಲು ಸಾಧ್ಯವಿಲ್ಲ. ಬೆಟ್ಟ ಗುಡ್ಡಗಳ ಕಡಿದಾದ, ದುರ್ಗಮ ಪ್ರದೇಶದಲ್ಲಿ ಯಾತ್ರಿಕರು ಸಿಲುಕಿದ್ದು, ಮಳೆ ಕಡಿಮೆಯಾದ ಬಳಿಕ ರಕ್ಷಣಾ ಕಾರ್ಯ ನಡೆಸಲಾಗುತ್ತದೆ. ಉತ್ತರಕಾಂಡದ ಪ್ರದೇಶಿಕ ಆಯುಕ್ತರು , ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಕರ್ನಾಟಕದ ಯಾತ್ರಿಕರು ಸುರಕ್ಷಿತವಾಗಿದ್ದಾರೆ ಎಂದು ಹೇಳಿದ್ದರು.
ಇನ್ನು ಗದಗದಿಂದ ಅಮರನಾಥ ಯಾತ್ರೆಗೆ 23 ಯಾತ್ರಿಕರು ತೆರಳಿದ್ದರು. ದೇವರ ದರ್ಶನ ಪಡೆದು ಮರಳಿ ಬರುವಾಗ ಗುಡ್ಡ ಕುಸಿತವಾಗಿ ರಸ್ತೆ ಮಧ್ಯೆ ಸಿಲುಕಿದ್ದಾರೆ. ಅಮರನಾಥದಿಂದ ಸುಮಾರು 10 ಕಿಮೀ ದೂರದಲ್ಲಿ ಗುಡ್ಡ ಕುಸಿತವಾಗಿದೆ. ಯಾತ್ರಿಗಳ ಜೊತೆ ಗದಗ ಡಿಸಿ ವೈಶಾಲಿ ಸಂಪರ್ಕಯಾತ್ರಿಗಳನ್ನು ಗದಗ ಜಿಲ್ಲಾಕಾರಿ ವೈಶಾಲಿ ಸಂಪರ್ಕಿಸಿದ್ದು, ಹೆಲಿಕಾಪ್ಟರ್ ಕಳಿಸಿ ನಮ್ಮನ್ನು ರಕ್ಷಣೆ ಮಾಡಿ ಅಂತ ಯಾತ್ರಿಗಳು ಮನವಿ ಮಾಡಿದ್ದಾರೆ. ಗಾಬರಿಯಲ್ಲಿದ್ದರು, ಆದರೂ ಎಲ್ಲರೂ ಸೇಫ್ ಜಾಗದಲ್ಲಿ ಇದ್ದಾರೆ.
ಜಮ್ಮು ಕಾಶ್ಮೀರದಲ್ಲಿ ಕರ್ನಾಟಕದ ಐಎಎಸ್ ಅಕಾರಿ ತುಳಸಿ ಮದ್ದಿನೇನಿ ಅವರೊಂದಿಗೆ ರಶ್ಮಿ ಆವರು ಸಂಪರ್ಕದಲ್ಲಿದ್ದಾರೆ ಯಾತ್ರಿಗಳ ಜೊತೆ ಜಿಲ್ಲಾಡಳಿತ ನಿರಂತರ ಸಂಪರ್ಕದಲ್ಲಿದೆ. ಊಟ, ಉಪಹಾರ ಯಾವುದೇ ಸಮಸ್ಯೆ ಇಲ್ಲ. ಕೂಡಲೇ ಅಲ್ಲಿಂದ ರಕ್ಷಣೆ ಮಾಡಲಾಗುತ್ತೆ ಎಂದು ಗದಗ ಜಿಲ್ಲಾಧಿಕಾರಿ ವೈಶಾಲಿ ಮಾಹಿತಿ ನೀಡಿದ್ದಾರೆ.
ಹಾಗೇ ಧಾರವಾಡ ಜಿಲ್ಲೆಯಿಂದ ತೆರಳಿದ್ದ ಐವರು ಯಾತ್ರಿಕರು ಪಂಚತೀರಣಿ ಬಳಿ ನಾಲ್ಕು ದಿನಗಳಿಂದ ಸಿಲುಕಿದ್ದಾರೆ. ವಿಠ್ಠಲ ಬಾಚಗುಂಡಿ, ರಾಕೇಶ ನಾಜರೆ, ಹರೀಶ ಸಾಳುಂಕೆ, ನಾಗರಾಜ ಹಳಕಟ್ಟಿ, ಮಡಿವಾಳಪ್ಪ ಕೊಟಬಾಗಿ ಸಿಲುಕಿದ ಯುವಕರು. ಪ್ರತಿಕೂಲ ಹವಾಮಾನ ಪರಿಸ್ಥಿತಿಗಳು ಮತ್ತು ಭಾರೀ ಮಳೆ ಹಿನ್ನೆಲೆ ಕಾಶ್ಮೀರ ಕಣಿವೆಯ ಬಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಅಮರನಾಥ ಯಾತ್ರೆಯನ್ನು ಸತತ ಎರಡನೇ ದಿನವೂ ಸ್ಥಗಿತಗೊಳಿಸಲಾಗಿದೆ.
ಅದರಂತೆ, ಜಮ್ಮುವಿನಿಂದ ಕಾಶ್ಮೀರಕ್ಕೆ ಯಾವುದೇ ಹೊಸ ಯಾತ್ರಾರ್ಥಿಗಳಿಗೆ ತೆರಳಲು ಅವಕಾಶವಿಲ್ಲ. ಹಿಲ್ಲರ್ ಅನಂತನಾಗ್ ರೈಲು ನಿಲ್ದಾಣದಲ್ಲಿ ನೀರು ನಿಂತಿದ್ದರಿಂದ ಖಾಜಿಗುಂಡ್ ಮತ್ತು ಬನಿಹಾಲ್ ನಡುವಿನ ರೈಲು ಸಂಚಾರಗಳನ್ನೂ ಸ್ಥಗಿತಗೊಳಿಸಲಾಗಿದೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…